ಮಂಗಳೂರು: ಯುವ ಬಿಜೆಪಿ ಕಾರ್ಯಕರ್ತ ಪ್ರವೀಣ್ ಕುಮಾರ್ ನೆಟ್ಟೂರ್ ಹತ್ಯೆ ಬೆನ್ನಲ್ಲೇ ಮತ್ತೊಬ್ಬ ವ್ಯಕ್ತಿಯ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆ ಮಾಡಿರುವ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ಬಳಿ ನಡೆದಿದೆ.
ಫಾಜೀಲ್ ಮೃತ ದುರ್ದೈವಿ. ಸುರತ್ಕಲ್ ನಲ್ಲಿ ಎಸ್ ಕೆ ಮೊಬೈಲ್ ಅಂಗಡಿ ಬಳಿಕ ಫಾಜಿಲ್ ಮಂಗಲಪೇಟೆ ಮೇಲೆ ಅಪರಿಚಿತರ ತಂಡ ಮಾರಕಾಸ್ತ್ರದಿಂದ ದಾಳಿ ನಡೆಸಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಫಾಜೀಲ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಘಟನೆಗೆ ಸಂಬಂಧ ಸುರತ್ಕಲ್ ಠಾಣೆಯ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂಜಾಗ್ರತಾ ಕ್ರಮವಾಗಿ ಸುರತ್ಕಲ್ ನಲ್ಲಿ ಅಂಗಡಿ ಮುಂಗಟ್ಟು ಬಂದ್ ಮಾಡಲಾಗಿದೆ.