ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
‘The Darwin’s in ದಂಡಿದುರ್ಗ’ ಹೊಸಬರ ಚಿತ್ರಕ್ಕೆ ನಿರ್ದೇಶಕ ಸತ್ಯಪ್ರಕಾಶ್ ಹಾಗೂ ಅಜಯ್ ರಾವ್ ಸಾಥ್!
ಬೈ ಒನ್ ಗೆಟ್ ಒನ್ ಸಿನಿಮಾ ಮೂಲಕ ಚಿತ್ರರಂಗಕ್ಕೆ ಪಾದರ್ಪಣೆ ಮಾಡಿದ್ದ ಯುವ ಪ್ರತಿಭೆಗಳಾದ ಮಿಥುನ್ ಮತ್ತು ಮಿಲನ್ ‘The Darwin’s in ದಂಡಿದುರ್ಗ’ ಚಿತ್ರದಲ್ಲಿ ನಾಯಕರಾಗಿ ನಟಿಸುತ್ತಿದ್ದು, ಆರತಿ ನಾಯರ್ ನಾಯಕಿಯಾಗಿ ಬಣ್ಣ ಹಚ್ಚಲಿದ್ದು, ಇದು ಇವರ ಮೊದಲ ಸಿನಿಮಾವಾಗಿದೆ. ಸಿನಿಮಾದ ಟೈಟಲ್ ಹೇಳುವಂತೆ ಇದು ದಂಡಿದುರ್ಗದ ಕಥೆ. ಅಲ್ಲಿನ ಜನರ ಪ್ರೀತಿ , ದ್ವೇಷ, ಕಾಮ, ರಾಜಕೀಯ ಹೋರಾಟ, ದೇವರು, ಧರ್ಮ ಎಲ್ಲವೂ ಸಿನಿಮಾದಲ್ಲಿ ಕಟ್ಟಿಕೊಡಲಾಗುತ್ತದೆ. ದಂಡಿದುರ್ಗದ ಗದ್ದುಗೆಗೆ ಪ್ರಬಲ ಶಕ್ತಿಗಳ ನಡುವಿನ ಹೋರಾಟದ ಕಥಾನಕ ಸಿನಿಮಾದ ಮುಖ್ಯವಸ್ತುವಾಗಿದೆ.
SBSC ಕ್ರಿಯೇಷನ್ ನಡಿ ಮಧುರಾಜ್ ನಿರ್ಮಾಣ ಮಾಡ್ತಿರುವ ಎರಡನೇ ಸಿನಿಮಾ ಇದಾಗಿದ್ದು, ರಾಮ ರಾಮ ರೇ ಸಿನಿಮಾ ಖ್ಯಾತಿಯ ಲವಿತ್ ಕ್ಯಾಮೆರಾ ಕೈಚಳಕ, ಉಮೇಶ್ ಸಂಕಲನ, ಅನಿಲ್ ಸಿಜೆ ಸಂಗೀತ ಸಿನಿಮಾಕ್ಕಿದೆ. ಎರಡು ಹಂತದಲ್ಲಿ ಶೂಟಿಂಗ್ ನಡೆಸುವ ಪ್ಲ್ಯಾನ್ ಹಾಕಿಕೊಂಡಿರುವ ಚಿತ್ರತಂಡ ಮೈಸೂರು, ಮಂಡ್ಯ, ಶ್ರೀರಂಗಪಟ್ಟಣ ಸುತ್ತಮುತ್ತ ಹಾಗೂ ಬಳ್ಳಾರಿಯಲ್ಲಿ ಚಿತ್ರೀಕರಣ ನಡೆಸಲಿದೆ. ಸೆಪ್ಟಂಬರ್ ಮೂರನೇ ವಾರದಲ್ಲಿದಲ್ಲಿ ‘The Darwin’s in ದಂಡಿದುರ್ಗ’ ಸಿನಿಮಾದ ಶೂಟಿಂಗ್ ಗೆ ಕಿಕ್ ಸ್ಟಾರ್ಟ್ ಸಿಗಲಿದ್ದು, ಸೌತ್ ಇಂಡಸ್ಟ್ರೀಯ ಇಬ್ಬರು ಸೂಪರ್ ಸ್ಟಾರ್ ಈ ಸಿನಿಮಾದಲ್ಲಿ ನಟಿಸಲಿದ್ದಾರೆ ಅನ್ನೋ ಮಾಹಿತಿ ಇದೆ.
