• January 2, 2026

ಅಕ್ಷಿತ್ ಶಶಿಕುಮಾರ್ ಗೆ ಜೋಡಿಯಾದಿ ಅದಿತಿ ಪ್ರಭುದೇವ

ಓ ಮೈ ಲವ್ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಭರವಸೆ ಮೂಡಿಸಿರುವ ನಟ ಶಶಿಕುಮಾರ ಪುತ್ರ ಅಕ್ಷಿತ್ ಶಶಿಕುಮಾರ್ ಇದೀಗ ಎರಡನೇ ಸಿನಿಮಾವನ್ನು ಮಾಡಿ ಮುಗಿಸಿದ್ದಾರೆ. ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದ್ದು ಸದ್ಯದಲ್ಲೇ ಸಿನಿಮಾ ತೆರೆಗೆ ಬರಲಿದೆ. ವೃತ್ತಿಯಲ್ಲಿ ವೈದ್ಯರಾಗಿರುವ ಜಿ ವೆಂಕಟೇಶ್ ಪ್ರಸಾದ್ ಇದೀಗ ಸಿನಿಮಾ ರಂಗಕ್ಕೆ ಎಂಟ್ರಿಕೊಟ್ಟಿದ್ದಾರೆ. ಫಿಲ್ಮ್ ಮೇಕಿಂಗ್ ಕೋರ್ಸ್ ತರಬೇತಿ ಪಡೆದು ಅಕ್ಷಿತ್ ಶಶಿಕುಮಾರ್ ನಟನೆಯ ಸಿನಿಮಾಗೆ ಆಕ್ಷನ್ ಕಟ್ ಹೇಳುವ ಮೂಲಕ ಚೊಚ್ಚಲ ಭಾರಿಗೆ ನಿರ್ದೇಶನದ ಕ್ಯಾಪ್ ತೊಟ್ಟಿದ್ದಾರೆ. ಚಲನಚಿತ್ರ ನಿರ್ದೇಶನದ ಬಗ್ಗೆ ಒಲವು ಹೊಂದಿದ್ದಾರೆ. ತಮ್ಮ ವೃತ್ತಿ  ಬದಲಿಸಿ ನಿರ್ದೇಶನಕ್ಕೆ ಇಳಿದಿದ್ದಾರೆ. ಫಿಲ್ಮ್ ಮೇಕಿಂಗ್ ಕೋರ್ಸ್ ತರಬೇತಿ ಪಡೆದ ನಂತರ ಚೊಚ್ಚಲ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರದಲ್ಲಿ ಅಕ್ಷಿತ್ ಶಶಿಕುಮಾರ್ ಮತ್ತು ಅದಿತಿ ಪ್ರಭುದೇವ ನಾಯಕಿಯಾಗಿ ನಟಿಸಿದ್ದಾರೆ. ಸ್ಯಾಂಡಲ್ ವುಡ್ ಸಿನಿಮಾ ರಂಗದಲ್ಲಿ ಸಾಕಷ್ಟು ಸದ್ದು ಮಾಡುತ್ತಿರುವ ನಟಿ ಅದಿತಿ ಪ್ರಭುದೇವ ಅಕ್ಷಿತ್ ಗೆ ಜೋಡಿಯಾಗಿ ಕಾಣಿಸಿಕೊಂಡಿದ್ದಾರೆ. ಚಿತ್ರಕ್ಕೆ `Chaos’ ಎಂದು ಟೈಟಲ್ ಇಡಲಾಗಿದ್ದು ಆಲ್ ಮೋಸ್ಟ್ ಚಿತ್ರೀಕರಣ ಕಂಪ್ಲೀಟ್ ಆಗಿದೆ. ಸಸ್ಪೆನ್ಸ್ ಆ್ಯಕ್ಷನ್ ಥ್ರಿಲರ್ ಕಥೆಯಾಗಿದ್ದು, ಕಥೆಯು ವೈದ್ಯಕೀಯ ಕ್ಯಾಂಪಸ್ ಸುತ್ತಮುತ್ತ ನಡೆಯುವ ಕಥೆಯಾಗಿದೆ. ಸಿನಿಮಾದಲ್ಲಿ ಅಕ್ಷಿತ್ ಮತ್ತು ಅದಿತಿ ಪ್ರಭುದೇವ ವೈದ್ಯಕೀಯ ವಿದ್ಯಾರ್ಥಿಗಳಾಗಿ ಕಾಣಿಸಿಕೊಳ್ಳಲಿದ್ದಾರೆ. ಅಕ್ಷಿತ್ ಅವರ ತಂದೆ ಮತ್ತು ನಟ ಶಶಿಕುಮಾರ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಅಪ್ಪ-ಮಗ ಇಬ್ಬರೂ ಮೊದಲ ಬಾರಿಗೆ ತೆರೆ ಹಂಚಿಕೊಳ್ಳುತ್ತಿದ್ದಾರೆ. . ಅಕ್ಟೋಬರ್‌ನಲ್ಲಿ ಚಿತ್ರ ತೆರೆಗೆ ಬರಲಿದೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now