ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಅಮಿತಾಬ್ ಬಚ್ಚನ್ ಗೆ ಎರಡನೇ ಬಾರಿ ಕೋವಿಡ್ ಸೋಂಕು
2020ರಲ್ಲಿ ಅಮಿತಾಬ್ ಬಚ್ಚನ್ ಗೆ ಕೊರಾನಾ ಪಾಸಿಟಿವ್ ಆಗಿದ್ದು ಆಸ್ಪತ್ರೆಗೆ ದಾಖಲಾಗಿದ್ದರು. ಹಲವು ದಿನಗಳ ಕಾಲ ಚಿಕಿತ್ಸೆ ಪಡೆದು ಗುಣ ಮುಖರಾಗಿದ್ದ 79 ವರ್ಷ ವಯಸ್ಸಿನ ಬಿಗ್ ಬಿ ಇದೀಗ ಮತ್ತೆ ಸೋಂಕಿಗೆ ತುತ್ತಾಗಿದ್ದಾರೆ. ಬಿಗ್ ಬಿ ಆದಷ್ಟು ಬೇಗ ಚೇತರಿಸಿಕೊಳ್ಳಲಿ ಇದು ಅವರ ಅಭಿಮಾನಿಗಳು ಹಾರೈಸುತ್ತಿದ್ದಾರೆ.
ಸದ್ಯ ಅಮಿತಾಬ್ ಸಾಕಷ್ಟು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ‘ಗುಡ್ ಬೈ’, ‘ಉಂಚಾಯಿ’ ಮುಂತಾದ ಸಿನಿಮಾಗಳ ಕೆಲಸಗಳಲ್ಲಿ ತೊಡಗಿಕೊಂಡಿದ್ದು, ಕಿರುತೆರೆಯ ‘ಕೌನ್ ಬನೇಗಾ ಕರೋಡ್ಪತಿ’ ಕಾರ್ಯಕ್ರಮವನ್ನು ನಡೆಸಿಕೊಡುತ್ತಿದ್ದಾರೆ. ಜೊತೆಗೆ ಸದ್ಯಲ್ಲೇ ದೀಪಿಕಾ ಪಡುಕೋಣೆ ಜೊತೆ ‘ದಿ ಇಂಟರ್ನ್’ ಸಿನಿಮಾದಲ್ಲಿ ಅವರು ನಟಿಸಲಿದ್ದಾರೆ.
