• December 22, 2025

ಬಳ್ಳಾರಿ ನಗರ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕೆ ಅನಿಲ್ ಲಾಡ್

ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಶಾಸಕ ಅನಿಲ್ ಲಾಡ್ ಜೆಡಿಎಸ್ ಸೇರ್ಪಡೆಯಾಗಿದ್ದು, 2013 ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಬಳ್ಳಾರಿ ನಗರ ಕ್ಷೇತ್ರದಿಂದ ಗೆಲುವು ಸಾಧಿಸಿದ್ದರು. 2018 ರಲ್ಲಿ ಸೋಲು ಅನುಭವಿಸಿದ್ದರು. ಈ ಬಾರಿ ಕಾಂಗ್ರೆಸ್ ಭರತ್ ರೆಡ್ಡಿಗೆ ಟಿಕೆಟ್ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ಸೇರ್ಪಡೆಯಾಗಿರುವ ಅನಿಲ್ ಲಾಡ್ ಗೆ ಬಳ್ಳಾರಿ ನಗರ ಕ್ಷೇತ್ರದಿಂದ ಸ್ಪರ್ಧಿಸಲು ಜೆಡಿಎಸ್ ಬಿ ಫಾರಂ ಪಡೆದಿದ್ದಾರೆ.     ಮಾಜಿ ಶಾಸಕ ಅನಿಲ್ ಲಾಡ್ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಅನಿಲ್ ಲಾಡ್ ಬಳ್ಳಾರಿ ನಗರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು.  ಅನಿಲ್ ಲಾಡ್ ನಿನ್ನೆ ರಾತ್ರಿ ಜೆಡಿಎಸ್ ಮುಖಂಡ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಜೆಡಿಎಸ್ ಸೇರಿದರು.  ಬಳ್ಳಾರಿ ನಗರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಲಾಡ್ ಅವರಿಗೆ ‘ಬಿ’ ಫಾರಂ ಸಿಕ್ಕಿದೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now