ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ತಮ್ಮ ಹುಟ್ಟುಹಬ್ಬದ ದಿನ ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಚಿತ್ರದ ಫಸ್ಟ್ ಗ್ಲಿಂಪ್ಸ್ ಬಿಡುಗಡೆ ಮಾಡಿದ ಅರುಣ್ ರಾಮ್ ಗೌಡ .
ಕೆಲವು ವರ್ಷಗಳ ಬಳಿಕ ಅರುಣ್ ರಾಮ್ ಗೌಡ ಪ್ಯಾನ್ ಇಂಡಿಯಾ ಚಿತ್ರವೊಂದರ ಮೂಲಕ ಚಿತ್ರರಂಗಕ್ಕೆ ರೀ ಎಂಟ್ರಿ ಕೊಡುತ್ತಿದ್ದಾರೆ. ಅರುಣ್ ರಾಮ್ ಗೌಡ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದು, ಪ್ರಮುಖಪಾತ್ರದಲ್ಲೂ ನಟಿಸುತ್ತಿದ್ದಾರೆ. ಅರುಣ್ ರಾಮ್ ಗೌಡ ತಮ್ಮ ಹುಟ್ಟುಹಬ್ಬದ ದಿನ(ಜುಲೈ 7) ಈ ಚಿತ್ರದ ಮೊದಲ ಗ್ಲಿಂಪ್ಸನ್ನು ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಬಿಡುಗಡೆ ಮಾಡಿದ್ದಾರೆ.
ಇದೊಂದು ಬಿಗ್ ಬಜೆಟ್ ನ ಪ್ಯಾನ್ ಇಂಡಿಯಾ ಮೂವೀ ಎಂದು ತಿಳಿಸಿರುವ ಅರುಣ್ ರಾಮ್ ಗೌಡ, ಇದು ನನ್ನ ನಿರ್ದೇಶನದ ಮೊದಲ ಚಿತ್ರ. ಜೊತೆಗೆ ಪ್ರಮುಖ ಪಾತ್ರದಲ್ಲೂ ನಟಿಸುತ್ತಿದ್ದೇನೆ. ಈ ಚಿತ್ರದ ನಾಯಕಿ, ವಿಲನ್ ಸೇರಿದಂತೆ ಎಲ್ಲಾ ಕಲಾವಿದರು ಹಾಗೂ ತಂತ್ರಜ್ಞರು ಸಾಕಷ್ಟು ಜನಪ್ರಿಯರಾಗಿರುವವರೆ ಇರುತ್ತಾರೆ. ನನ್ನ ಹುಟ್ಟುಹಬ್ಬದ ದಿನ ಅಯೋಧ್ಯೆಯಲ್ಲಿ ಈ ಚಿತ್ರದ ಫಸ್ಟ್ ಗ್ಲಿಂಪ್ಸ್ ಬಿಡುಗಡೆ ಮಾಡಿ, ಶ್ರೀರಾಮನ ಆಶೀರ್ವಾದ ಪಡೆದುಕೊಂಡಿದ್ದೇನೆ. ಮುಂದಿನ ದಿನಗಳಲ್ಲಿ ಚಿತ್ರದ ಬಗ್ಗೆ ಇನ್ನಷ್ಟು ಮಾಹಿತಿ ನೀಡುತ್ತೇನೆ ಎಂದು ಹೇಳಿದ್ದಾರೆ.

