ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಕೊಟ್ಟ ಮಾತು ಉಳಿಸಿಕೊಂಡ ಮೋಹಕತಾರೆ: ದಾವಣಗೆರೆಯಲ್ಲಿ ಬೆಣ್ಣೆ ದೋಸೆ ಸವಿದ ನಟಿ
ದಾವಣಗೆರೆಯ ಡೆಂಟಲ್ ಕಾಲೇಜು ರಸ್ತೆಯಲ್ಲಿರುವ ಗುರು ಕೊಟ್ಟೂರೇಶ್ವರ ಬೆಣ್ಣೆ ದೋಸೆ ಹೋಟೆಲ್ ಗೆ ರಮ್ಯಾ ಹಾಗೂ ಚಿತ್ರದ ನಿರ್ಮಾಪಕ ಕಾರ್ತಿಕ್ ಗೌಡ ಭೇಟಿ ನೀಡಿದ್ದಾರೆ. ಈ ವೇಳೆ ರಮ್ಯಾ ಎರಡು ಡಬ್ಬಲ್ ಬೆಣ್ಣೆ ದೋಸೆಗೆ ಆರ್ಡರ್ ಮಾಡಿದ್ದಾರೆ. ಬಳಿಕ ರಮ್ಯಾ ಹಾಗೂ ಕಾರ್ತಿಕ್ ಬೆಣ್ಣೆ ದೋಸೆಯನ್ನು ಸವಿದಿದ್ದಾರೆ.
ಈ ವೇಳೆ ಹೋಟೆಲ್ ಗೆ ಬಂದಿದ್ದವರು ರಮ್ಯಾರನ್ನು ನೋಡಿ ಖುಷಿಯಾಗಿದ್ದಾರೆ. ಅಲ್ಲದೆ ಆಕೆಯ ಜೊತೆ ಫೋಟೋ ತೆಗೆಸಿಕೊಂಡಿದ್ದಾರೆ. ಕೆಲ ವರ್ಷಗಳ ಕಾಲ ಸಿನಿಮಾ ರಂಗದಿಂದ ದೂರವಾಗಿದ್ದ ನಟಿ ರಮ್ಯಾ ಮತ್ತೆ ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದಾರೆ.ತಮ್ಮದೇ ನಿರ್ಮಾಣ ಸಂಸ್ಥೆಯಾದ ಆ್ಯಪಲ್ ಬಾಕ್ಸ್ ಸಂಸ್ಥೆ ಹುಟ್ಟುಹಾಕಿರುವ ರಮ್ಯಾ ಸ್ವಾತಿ ಮುತ್ತಿನ ಮಳೆ ಹನಿಯೇ ಸಿನಿಮಾದ ಮೂಲಕ ಕಂಬ್ಯಾಕ್ ಮಾಡ್ತಿದ್ದಾರೆ.
