ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
‘ಪುನೀತ್ ಪರ್ವ’ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳಿಗೆ ಆಹ್ವಾನ ನೀಡಿದ ಡಾ.ರಾಜ್ ಕುಟುಂಬ
ಇದೇ 21ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಪುನೀತ್ ಪರ್ವ ಕಾರ್ಯಕ್ರಮ ನಡೆಯಲಿದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆ ವಹಿಸುವಂತೆ ಪುನೀತ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಮನವಿ ಮಾಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಅಶ್ವೀನಿ ಪುನೀತ್ ರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್, ಯುವರಾಜ್ ಕುಮಾರ್ ಆತ್ಮೀಯವಾಗಿ ಆಮಂತ್ರಣ ನೀಡಿದ್ದಾರೆ.
ಪುನೀತ್ ಪರ್ವ ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ಸಾಕಷ್ಟು ಅದ್ದೂರಿಯಾಗಿ ರೆಡಿ ಮಾಡಲಾಗಿದೆ. ಈ ಆಹ್ವಾನ ಪತ್ರಿಕೆಯನ್ನು ಸಂಪೂರ್ಣ ಮರದಿಂದ ತಯಾರಿಸಲಾಗಿದ್ದು, ಪತ್ರಿಕೆ ಜೊತೆಗೆ ಪುನೀತ್ ರಾಜ್ಕುಮಾರ್ ಪುತ್ಥಳಿಯನ್ನು ಇರಿಸಲಾಗಿದೆ. ಅಲ್ಲದೆ ಶ್ರೀಗಂಧದ ತುಂಡಿನ ಮೇಲೆ ಪುನೀತ್ ರಾಜ್ಕುಮಾರ್ಎಂದು ಬರೆದಿರುವ ಹಸ್ತಾಕ್ಷರ ಮುದ್ರಣ ಮಾಡಲಾಗಿದೆ. ಈಗಾಗಲೇ ಗಂಧದ ಗುಡಿ ಪ್ರೀರಿಲೀಸ್ ಕಾರ್ಯಕ್ರಮದ ಆಹ್ವಾನ ಪತ್ರಿಕೆ ಅನೇಕರ ಕೈ ಸೇರಿದ್ದು ಇದೀಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕೈ ಸೇರಿದೆ.
