ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಅಪ್ಪು ಭಾವಚಿತ್ರ ಸೇರಿದ ಕರ್ನಾಟಕ ರತ್ನ ಪದಕ: ವೈರಲ್ ಆಯ್ತು ಫೋಟೋ
ಮಳೆಯಲ್ಲೇ ಪತಿಯ ಪರವಾರ ಭಾವುಕರಾಗಿಯೇ ಅಶ್ವಿನಿ ‘ಕರ್ನಾಟಕ ರತ್ನ’ ಪ್ರಶಸ್ತಿ ಸ್ವೀಕರಿಸಿ ಧನ್ಯವಾದ ಸಲ್ಲಿಸಿದರು. ಬಳಿಕ ‘ಕರ್ನಾಟಕ ರತ್ನ’ ಪ್ರಶಸ್ತಿಯ ಪದಕವನ್ನು ಪುನೀತ್ ರಾಜ್ಕುಮಾರ್ ಅವರ ಭಾವಚಿತ್ರಕ್ಕೆ ಪತ್ನಿ ಅಶ್ವಿನಿ ಹಾಗೂ ಪುತ್ರಿ ವಂದಿತಾ ಅರ್ಪಿಸಿದ್ದಾರೆ.
ಬೆಂಗಳೂರಿನ ಸದಾಶಿವನಗರದಲ್ಲಿರುವ ಅಪ್ಪು ಅವರ ನಿವಾಸದಲ್ಲಿ ಡಾ.ರಾಜ್ಕುಮಾರ್ ಹಾಗೂ ಪಾರ್ವತಮ್ಮ ರಾಜ್ಕುಮಾರ್ ಅವರ ಫೋಟೋದ ಕೆಳಗೆ ಪುನೀತ್ ರಾಜ್ಕುಮಾರ್ ಅವರ ಫೋಟೋ ಇಡಲಾಗಿದೆ. ಈ ಫೋಟೋಗೆ ಪತ್ನಿ ಅಶ್ವಿನಿ ಹಾಗೂ ಪುತ್ರಿ ವಂದಿತಾ ‘ಕರ್ನಾಟಕ ರತ್ನ’ ಪ್ರಶಸ್ತಿಯ ಪದಕವನ್ನು ಹಾಕಿದ್ದಾರೆ. ಸದ್ಯ ಈ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
