ಜೂನ್ 5 ರಿಂದ “ಸಿರಿಕನ್ನಡ” ದಲ್ಲಿ ಎರಡು ಮೆಗಾ ಧಾರಾವಾಹಿಗಳ ಜೊತೆಗೆ ರಿಯಾಲಿಟಿ

ಅತ್ಯುತ್ತಮ ಧಾರಾವಾಹಿಗಳ ಮೂಲಕ ಕನ್ನಡಿಗರ ಮನ ಗೆದ್ದಿರುವ “ಸಿರಿಕನ್ನಡ” ವಾಹಿನಿಯಲ್ಲಿ ಇದೇ ಜೂನ್ 5 ರಿಂದ “ಊರ್ಮಿಳಾ”,‌ “ಬ್ರಾಹ್ಮಿನ್ಸ್ ಕೆಫೆ” ಎಂಬ ಎರಡು ಮೆಗಾ ಧಾರಾವಾಹಿಗಳು ಹಾಗೂ “ಸಖತ್ ಜೋಡಿ” ಎಂ ರಿಯಾಲಿಟಿ ಶೋ ಆರಂಭವಾಗಲಿದೆ. ಈ ಕುರಿತು ಮಾಹಿತಿ ನೀಡಲು ವಾಹಿನಿ ಪತ್ರಿಕಾಗೋಷ್ಠಿ ಆಯೋಜಿಸಿತ್ತು.     ನಮ್ಮ “ಸಿರಿಕನ್ನಡ” ವಾಹಿನಿಗೆ ಪ್ರೋತ್ಸಾಹ ನೀಡುತ್ತಿರುವ ಪ್ರತಿಯೊಬ್ಬರಿಗೂ ಧನ್ಯವಾದ. ಈಗಾಗಲೇ ಸಾಕಷ್ಟು ಜನಪ್ರಿಯ ಧಾರಾವಾಹಿಗಳ ಮೂಲಕ “ಸಿರಿಕನ್ನಡ” ಕನ್ನಡಿಗರ ಮನ ಗೆದ್ದಿದೆ. ಜೂನ್ 5 ರಿಂದ “ಊರ್ಮಿಳಾ” […]readmore

ಬೆಳೆಹಾನಿಗೆ ರೈತರ ಖಾತೆಗೆ ನೇರವಾಗಿ ಹಣ ಜಮಾವಣೆ : ಸಚಿವ ಕೃಷ್ಣ ಬೈರೇಗೌಡ

ಬೆಳೆಹಾನಿಗೆ ರೈತರ ಖಾತೆಗೆ ನೇರವಾಗಿ ಹಣ ಜಮಾವಣೆ ಆಗಲಿದೆ ಎಂದು ಸಚಿವ ಕೃಷ್ಣ ಬೈರೇಗೌಡರು ಹೇಳಿದ್ದಾರೆ. ಬೆಂಗಳೂರಿನ ವಿಕಾಸಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 487 ಜಾನುವಾರುಗಳು ಪ್ರಕೃತಿ ವಿಕೋಪಕ್ಕೆ ಬಲಿಯಾಗಿವೆ. ಪರಿಹಾರ ನೀಡುವ ಕಾರ್ಯ ಆಗಲಿದೆ. 1,400 ಮನೆಗಳಿಗೆ ಮಳೆಯಿಂದ ಭಾಗಶಃ ಹಾನಿ ಆಗಿದೆ. ಬೆಳೆ 20,160 ಹೆಕ್ಟೇರ್ ಪ್ರದೇಶದಲ್ಲಿ ಹಾನಿ ಆಗಿದೆ. ಬೆಳೆಹಾನಿಗೆ ರೈತರ ಖಾತೆಗೆ ನೇರವಾಗಿ ಹಣ ಜಮಾವಣೆ ಆಗಲಿದೆ. ಪರಿಹಾರ ಪೋರ್ಟಲ್ ಆರಂಭಿಸಲು ಸೂಚಿಸಿದ್ದೇವೆ. ಅಧಿಕಾರಿಗಳಿಗೂ ಮಾಹಿತಿ ನೀಡುವಂತೆ ಸೂಚಿಸಿದ್ದೇವೆ. ಕ್ಯಾಬಿನೆಟ್​ನಲ್ಲಿ […]readmore

ಬೇರೆ ಬೇರೆ ರಾಜ್ಯಗಳಲ್ಲೂ ಬಸ್​ನಲ್ಲಿ ಉಚಿತ ಪ್ರಯಾಣ ಇದೆ : ಸಚಿವ ರಾಮಲಿಂಗಾರೆಡ್ಡಿ

ಬೇರೆ ಬೇರೆ ರಾಜ್ಯಗಳಲ್ಲೂ ಬಸ್​ನಲ್ಲಿ ಉಚಿತ ಪ್ರಯಾಣ ಇದೆ ಎಂದು ಬೆಂಗಳೂರಿನಲ್ಲಿ ಸಾರಿಗೆ ಖಾತೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು. ತಮಿಳುನಾಡು, ಮಹಾರಾಷ್ಟ್ರ, ದೆಹಲಿಯಲ್ಲೂ ಉಚಿತ ಪ್ರಯಾಣ ಇದೆ. ಎಲ್ಲಾ ರಾಜ್ಯದ ಮಾದರಿಗಳನ್ನೂ ನಾವು ತರಿಸಿಕೊಂಡಿದ್ದೇವೆ. ಉಚಿತ ಪ್ರಯಾಣ ಬಗ್ಗೆ ಈಗಾಗಲೇ ಚರ್ಚೆ ಕೂಡ ಮಾಡಿದ್ದೇವೆ. ಚುನಾವಣೆ ವೇಳೆ ನಾವು ನೀಡಿದ ಭರವಸೆ ಈಡೇರಿಸಲು ಬದ್ಧ. ವಿಪಕ್ಷದವರು ಗೊಂದಲ ಸೃಷ್ಟಿ ಮಾಡ್ತಿದ್ದಾರೆ. ನಾಳೆ ಸಂಪುಟ ಸಭೆ ಬಳಿಕ ಸಿಎಂ ಎಲ್ಲಾ ಮಾಹಿತಿ ನೀಡುತ್ತಾರೆ ಎಂದರು.  readmore

Tagarupalya Movie | “ಟಗರುಪಲ್ಯ” ಚಿತ್ರೀಕರಣ ಮುಕ್ತಾಯ

ನಟರಾಕ್ಷಸ ಡಾಲಿ ಧನಂಜಯ್ ತಮ್ಮದೇ ಡಾಲಿ ಪಿಕ್ಚರ್ಸ್ ನಡಿ ನಿರ್ಮಿಸುತ್ತಿರುವ ಸಿನಿಮಾ ಟಗರು ಪಲ್ಯ..ಯೋಗರಾಜ್ ಭಟ್ಟರ ಗರಡಿಯಲ್ಲಿ ಮತ್ತು ಹಲವು ಖ್ಯಾತ ನಿರ್ದೇಶಕರ ಜೊತೆ ನಿರ್ದೇಶನದ ವಿಭಾಗದಲ್ಲಿ ದುಡಿರುವ ಉಮೇಶ್ ಕೆ ಕೃಪ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ.     ಕಳೆದ‌ ನವೆಂಬರ್ ನಲ್ಲಿ ಸೆಟ್ಟೇರಿದ ಟಗರು ಪಲ್ಯ ಸಿನಿಮಾಗೆ ಕುಂಬಳಕಾಯಿ ಪ್ರಾಪ್ತಿಯಾಗಿದೆ. ಮಂಡ್ಯ, ಮಳವಳ್ಳಿ,‌ ಮುತತ್ತಿ ಹಾಗೂ ಶಿಂಶ ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದೆ. ಹೊಸ ಪ್ರತಿಭೆಗಳಿಗೆ ಅವಕಾಶ ನೀಡಲೆಂದು ಹಾಗೂ ಕಂಟೆಂಟ್ ಆಧಾರಿತ […]readmore

ಲೀಲಾವತಿ ಮನೆಯಲ್ಲಿ ಕನ್ನಡ ಕಲಾವಿದರ ಕಲರವ

ಮಹಿಳಾ ದಿನದ ಅಂಗವಾಗಿ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಹಿರಿಯ ನಟಿ ಲೀಲಾವತಿ ಅವರನ್ನು ಸನ್ಮಾನಿಸುವ ಕಾರ್ಯಕ್ರಮವನ್ನು ಈ ಹಿಂದೆಯೇ ಆಯೋಜಿಸಿತ್ತು. ಆದರೆ ವಯೋಸಹಜ ಕಾಯಿಲೆ ಅವರು ಕಾರ್ಯಕ್ರಮಕ್ಕೆ ಬರಲು ಆಗಲಿಲ್ಲ. ಹೀಗಾಗಿ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯ ಅವರ ತೋಟದ ಮನೆಗೆ ಭೇಟಿ ನೀಡಿ ಹಿರಿಯ ನಟಿಯನ್ನು ಕನ್ನಡ ಕಲಾಬಳಗ ಸನ್ಮಾನ ಮಾಡುವ ಕಾರ್ಯಕ್ರಮ ಇಂದು ನೆರವೇರಿತು.     ಅವರ ನಿವಾಸದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕನ್ನಡ ಕಲಾವಿದರು ನಮ್ಮಮ್ಮ ಲೀಲಮ್ಮ ನಿಮ್ಮೊಳಗೆ ನಾವಮ್ಮ ಪ್ರಶಸ್ತಿ ಪ್ರದಾನ […]readmore

ಶೈತಾನ್ ಮೂಲಕ ವೆಬ್ ಸಿರೀಸ್ ಗೆ ಪ್ರಪಂಚಕ್ಕೆ ರಿಷಿ ಎಂಟ್ರಿ….ಜೂನ್ 15ರಿಂದ ಡಿಸ್ನಿ

ಈಗೇನಿದ್ದರೂ ಡಿಜಿಟಲ್ ಜಮಾನ. ಒಟಿಟಿ ಮೂಲಕ ಸಿನಿಮಾಗಳು ಹಾಗೂ ವೆಬ್ ಸರಣಿಗಳು ಪ್ರೇಕ್ಷಕರ ಎದುರು ಬರುತ್ತಿವೆ. ಬಾಲಿವುಡ್ ಚಿತ್ರರಂಗದ ದೊಡ್ಡ ದೊಡ್ಡ ತಾರೆಯರು ಹಾಗೂ ಫಿಲ್ಮಂ ಮೇಕರ್ಸ್ ಸಹ ವೆಬ್ ಸಿರೀಸ್ ಗಳತ್ತ ಚಿತ್ತ ಹರಿಸಿದ್ದಾರೆ. ಇತ್ತೀಚೆಗೆ ಕನ್ನಡದಲ್ಲಿಯೂ ವೆಬ್ ಸಿರೀಸ್ ಗಳ ನಿರ್ಮಾಣ ಜೋರಾಗಿ ನಡೆಯುತ್ತಿದೆ. ಕನ್ನಡ ತಾರೆಯರು ಕೂಡ ವೆಬ್ ಸರಣಿಗಳಲ್ಲಿ ನಟಿಸುತ್ತಿದ್ದಾರೆ. ಇದಕ್ಕೆ ಹೊಸ ಸೇರ್ಪಡೆ ಪ್ರತಿಭಾನ್ವಿತ ನಟ ರಿಷಿ. ಸಿನಿಮಾಗಳು ಹಾಗೂ ಪಾತ್ರಗಳ ಆಯ್ಕೆಯಲ್ಲಿ ಇವರು ಬಹಳ ವಿಭಿನ್ನ. ಸಸ್ಪೆನ್ಸ್, ಕಾಮಿಡಿ, […]readmore

ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ರವಿ ಬಸ್ರೂರು ಪುತ್ರ

ಉಗ್ರಂ, ಮಫ್ತಿ, ಕೆಜಿಎಫ್ ನಂತಹ ಸೂಪರ್ ಹಿಟ್ ಸಿನಿಮಾಗಳಿಗೆ ಸಂಗೀತ ನೀಡಿರುವ ರವಿ ಬಸ್ರೂರ್ ಗಾಯಕರಾಗಿಯೂ, ನಿರ್ಮಾಪಕರಾಗಿಯೂ ಸ್ಯಾಂಡಲ್ ವುಡ್ ಗೆ ಚಿರಪರಿತ.. ಪರಭಾಷೆಯ ಚಿತ್ರಗಳಿಗೂ ಸಂಗೀತ ನಿರ್ದೇಶಕರಾಗಿ ಕೆಲಸ ಮಾಡುತ್ತಿರುವ ರವಿ ಬಸ್ರೂರ್ ಪುತ್ರ ಮಾಸ್ಟರ್ ಪವನ್ ಬಸ್ರೂರು ಸಿನಿಮಾ ಇಂಡಸ್ಟ್ರೀಗೆ ಎಂಟ್ರಿ ಕೊಟ್ಟಿದ್ದಾರೆ.     ಐಟಿ ಉದ್ಯೋಗಿಯಾಗಿರುವ ಶಶಿಕಿರಣ್ ಸಿನಿಮಾ ಮೇಲಿನ ಅಪಾರ ಪ್ರೀತಿಯಿಂದ ತಮ್ಮದೇ ಶರಣ್ಯ ಫಿಲ್ಮಂಸ್ ನಡಿ ಕ್ಲಿಕ್ ಎಂಬ ಹೊಸ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಈ ಚಿತ್ರದ ಮೂಲಕ […]readmore

ವಿ ಮೆಗಾ ಪಿಕ್ಚರ್ಸ್ ಹಾಗೂ ಅಭಿಷೇಕ್ ಅಗರ್ ವಾಲ್ ಆರ್ಟ್ ಜಂಟಿಯಾಗಿ ನಿರ್ಮಿಸುತ್ತಿರುವ

ಗ್ಲೋಬಲ್ ಸ್ಟಾರ್ ರಾಮ್ ಚರಣ್ ”ವಿ ಮೆಗಾ ಪಿಕ್ಚರ್ಸ್” ಮೂಲಕ ಸಿನಿಮಾ ನಿರ್ಮಾಣಕ್ಕಿಳಿದಿದ್ದಾರೆ. ಮೆಗಾ ಸ್ಟಾರ್ ಕುಡಿಗೆ ಗೆಳೆಯ ಯುವಿ ಕ್ರಿಯೇಷನ್ ವಿಕ್ರಮ್ ರೆಡ್ಡಿ ಸಾಥ್ ಕೊಟ್ಟಿದ್ದಾರೆ. ಯುವ ಪ್ರತಿಭೆಗಳಿಗೆ ಅವಕಾಶ ನೀಡಲಿದೆಂದು ಪ್ರಾರಂಭಿಸಿರುವ ವಿ ಮೆಗಾ ಪಿಕ್ಚರ್ಸ್ ಜೊತೆ ಅಭಿಷೇಕ್ ಅಗರ್ ವಾಲ್ ಕೈ ಜೋಡಿಸಿದ್ದಾರೆ. ದಿ ಕಾಶ್ಮೀರಿ ಫೈಲ್ಸ್, ಕಾರ್ತಿಕೇಯ ಸಿನಿಮಾದಂತಹ ಪ್ಯಾನ್ ಇಂಡಿಯಾ ಹಿಟ್ ಸಿನಿಮಾ ಕೊಟ್ಟಿರುವ ಅಭಿಷೇಕ್ ಅಗರ್ ವಾಲ್ ಆರ್ಟ್ ಬ್ಯಾನರ್ ಹಾಗೂ ರಾಮ್ ಚರಣ್ ಸಾರಥ್ಯದ ವಿ ಮೆಗಾ […]readmore

ಡಾ ಅಂಬರೀಶ್ ಹುಟ್ಟುಹಬ್ಬಕ್ಕೆ ಅಭಿಷೇಕ್ ವಿಶೇಷ ವೀಡಿಯೋ

ಇಂದು ಡಾ. ಅಂಬರೀಶ್ ಅವರ 71ನೇ ಹುಟ್ಟುಹಬ್ಬ. ಈ ಸಂಭ್ರಮಕ್ಕಾಗಿ ಅಭಿಷೇಕ್ ಅಂಬರೀಶ್ ಮತ್ತು ಕೆಆರ್‌ಜಿ ಕನೆಕ್ಟ್ಸ್ ಜೊತೆಯಾಗಿ ಕೈಜೋಡಿಸಿದೆ. ಈ ಸಂದರ್ಭದಲ್ಲಿ ಅಭಿಷೇಕ್ ಒಂದು ಹೊಸ ವೀಡಿಯೋ ಮಾಡಿದ್ದು, ಇದರಲ್ಲಿ ಅವರ ಪತ್ನಿಯಾಗಲಿರುವ ಅವಿವಾ ಬಿದ್ದಪ್ಪ ಸಹ ಕಾಣಿಸಿಕೊಂಡಿರುವುದು ವಿಶೇಷ.     ಈ ವೀಡಿಯೋದಲ್ಲಿ ಅಭಿಷೇಕ್ ಮತ್ತು ಅವೀವಾ, ಅಂಬರೀಷ್ ಅವರ ಹಲವು ಜನಪ್ರಿಯ ಹಾಡುಗಳಿಗೆ ಹೆಜ್ಜೆ ಹಾಕಿದ್ದಾರೆ. ‘ಒಲವಿನ ಉಡುಗೊರೆ’, ಚಕ್ರವ್ಯೂಹ’, ‘ಮಂಡ್ಯದ ಗಂಡು ಮುಂತಾದ ಚಿತ್ರಗಳ ಜನಪ್ರಿಯ ಹಾಡುಗಳಿಗೆ ನೃತ್ಯ ಮಾಡಿದ್ದಾರೆ. […]readmore

ಕನ್ನಡದ ಪ್ರತಿಷ್ಠಿತ ಆನಂದ್ ಆಡಿಯೋ ಸಂಸ್ಥೆಗೆ ಯೂಟ್ಯೂಬ್ ಸಂಸ್ಥೆಯಿಂದ ದೊರಕಿದೆ ಡೈಮಂಡ್ ಬಟನ್‌

ಕಳೆದ 24 ವರ್ಷಗಳಿಂದ ಶ್ರೋತೃಗಳಿಗೆ ಕನ್ನಡ ಚಿತ್ರಗಳ ಸುಮಧುರ ಹಾಡುಗಳನ್ನು ತಲುಪಿಸುತ್ತ ಬಂದಿರುವಪ್ರತಿಷ್ಠಿತ ಆನಂದ್ ಆಡಿಯೋ ಸಂಸ್ಥೆಗೆ ಮುಂದಿನ ವರ್ಷ ರಜತ ವರ್ಷದ ಸಂಭ್ರಮ. ಈಗ ಆನಂದ್ ಆಡಿಯೋ ಯಶಸ್ಸಿನ ಕಿರೀಟಕ್ಕೆ ಮತ್ತೊಂದು ಗರಿ. ಆನಂದ್ ಆಡಿಯೋ ಯೂಟ್ಯೂಬ್ ಚಾನಲನ್ನು ಒಂದು ಕೋಟಿ ಜನರು ಸಬ್ ಸ್ಕ್ರೈಬ್ ಮಾಡಿಕೊಂಡಿದ್ದಾರೆ. ಹಾಗಾಗಿ ಯೂಟ್ಯೂಬ್ ಸಂಸ್ಥೆಯಿಂದ ಆನಂದ್ ಆಡಿಯೋ ಸಂಸ್ಥೆಗೆ ಡೈಮಂಡ್ ಬಟನ್ ಸಿಕ್ಕಿದೆ.       “ಮೇ 24, ಆನಂದ್ ಆಡಿಯೋ ಮಾಲೀಕರಾದ ಮೋಹನ್ ಚಾಬ್ರಿಯಾ ಅವರ […]readmore

Phone icon
Call Now
Reach us!
WhatsApp icon
Chat Now