ವಿಭಿನ್ನ ಕಥಾಹಂದರ ಹೊಂದಿರುವ ’ಪರಿಶುದ್ಧಂ’ ಚಿತ್ರದ ಧ್ವನಿಸಾಂದ್ರಿಕೆ, ಟ್ರೇಲರ್ ಮತ್ತು ಮೇಕಿಂಗ್ ಬಿಡುಗಡೆ ಕಾರ್ಯಕ್ರಮವು ಕಲಾವಿದರ ಸಂಘದಲ್ಲಿ ಅದ್ದೂರಿಯಾಗಿ ನಡೆಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಬಾ.ಮಾ.ಹರೀಶ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ತಂಡಕ್ಕೆ ಶುಭ ಹಾರೈಸಿದರು. ಮೊದಲು ಮಾತನಾಡಿದ ಆರೋನ್ ಕಾರ್ತಿಕ್‌ವೆಂಕಟೇಶ್ ಚಿತ್ರಕ್ಕೆ ಕಥೆ, ಸಾಹಿತ್ಯ, ಸಂಗೀತ ಜತೆಗೆ ನಿರ್ದೇಶನದ ಜವಬ್ದಾರಿಯನ್ನು ಹೊತ್ತುಕೊಂಡಿದ್ದು, ನಿರ್ಮಾಣದಲ್ಲಿ ಪಾಲುದಾರನಾಗಿದ್ದೇನೆ. ಮದುವೆ ಅನ್ನುವ ಪದ್ದತಿ ಪರಿಶುದ್ದವಾದದು. ಗಂಡಹೆಂಡತಿ ಸಂಬಂಧದಲ್ಲಿ ಮೂರನೇ ವ್ಯಕ್ತಿ ಪ್ರವೇಶ ಆಗಬಾರದೆಂದು ಸಂದೇಶದಲ್ಲಿ ಹೇಳಲಾಗಿದೆ. ಇದನ್ನು ಕಮರ್ಷಿಯಲ್ […]readmore
ಕೆಜಿಎಫ್ 2 ಸಿನಿಮಾದ ಬಳಿಕ ರಾಕಿಂಗ್ ಸ್ಟಾರ್ ಯಶ್ ಫ್ಯಾಮಿಲಿ ಜೊತೆ ಹೆಚ್ಚು ಹೆಚ್ಚು ಕಾಲ ಕಳೆಯುತ್ತಿದ್ದಾರೆ. ಇತ್ತೀಚೆಗಷ್ಟೇ ಕುಟುಂಬದ ಜೊತೆ ಅನಿಮಲ್ ಪಾರ್ಕ್ ಗೆ ತೆರಳಿದ್ದ ಯಶ್ ಇದೀಗ ಹೆಂಡತಿ ಜೊತೆ ಫಾರಿನ್ ಟ್ರಿಪ್ ಎಂಜಾಯ್ ಮಾಡ್ತಿದ್ದಾರೆ. ಯಶ್ ಜೊತೆ ಹಾಲಿಡೇ ಎಂಜಾಯ್ ಮಾಡುತ್ತಿರುವ ನಟಿ ರಾಧಿಕಾ ಪಂಡಿತ್ ಅವುಗಳ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಯುರೋಪ್ ನ ಸ್ಲೋವೆನಿಯಾದಲ್ಲಿ ಯಶ್ ದಂಪತಿಗಳು ಹಾಲಿಡೇ ಎಂಜಾಯ್ ಮಾಡುತ್ತಿದ್ದಾರೆ. ಸ್ಲೋವೆನಿಯಾದಲ್ಲಿರುವ ಲೇಕ್ ಬ್ಲೆಡ್ ಚರ್ಚ್ ಎದುರು ರಾಧಿಕಾ […]readmore
ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಏನೇ ಮಾಡಿದ್ರು ಸುದ್ದಿಯಾಗ್ತಾರೆ. ಸದಾ ಸೋಷಿಯಲ್ ಮೀಡಿಯಾದಲ್ಲಿ ಬೇರೆಯವರ ಕಾಲೇಳೆದುಕೊಂಡು ವಿವಾದಗಳನ್ನ ಸೃಷ್ಟಿ ಮಾಡೋದ್ರಲ್ಲಿ ಎತ್ತಿದ ಕೈ. ಇದೀಗ ಇದೇ ವರ್ಮಾರಿಂದಾಗಿ ನಟಿಯೊಬ್ಬರು ತಮ್ಮ ಮನೆಯವರಿಂದ ದ್ವೇಷಿಸಿಕೊಳ್ಳುತ್ತಿದ್ದಾರಂತೆ. ಕಳೆದ ಕೆಲ ದಿನಗಳ ಹಿಂದೆ ನಟಿ ಇನಾಯಾ ಸುಲ್ತಾನ್ ಜೊತೆ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಡ್ಯಾನ್ಸ್ ಮಾಡಿದ್ದರು. ಇದರ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ನಟಿ ಇನಾಯಾ ಸುಲ್ತಾನ್ ಗೆ ಸಾಕಷ್ಟು ಪ್ರಚಾರ ಸಿಕ್ಕಿತ್ತು. ಆದರೆ ಇದೇ ವಿಡಿಯೋದಿಂದ ಇನಾಯಾ […]readmore
ಕಿಚ್ಚ ಸುದೀಪ್ ಅವರಿಗೆ ಎರಡನೇ ಬಾರಿ ಕೋವಿಡ್ ಸೋಂಕು ತಗುಲಿದೆ ಎಂಬ ಸುದ್ದಿ ಕೇಳಿ ಆತಂಕಗೊಂಡಿದ್ದ ಅಭಿಮಾನಿಗಳಿಗೆ ನಿರ್ಮಾಪಕ ಜಾಕ್ ಮಂಜು ಸ್ಪಷ್ಟನೆ ನೀಡಿದ್ದಾರೆ. ಸುದೀಪ್ ಜ್ವರದಿಂದ ಬಳಲುತ್ತಿರುವುದು ನಿಜ, ಆದರೆ ಕೋವಿಡ್ ಪಾಸಿಟಿವ್ ಆಗಿಲ್ಲ ಎಂದು ಜಾಕ್ ಮಂಜು ಹೇಳಿದ್ದಾರೆ. ಈ ಕುರಿತು ವಿಡಿಯೋ ಮಾಡಿರುವ ಜಾಕ್ ಮಂಜು, ‘ಸುದೀಪ್ ಅವರು ಜ್ವರದಿಂದ ಬಳಲುತ್ತಿರುವುದು ನಿಜ. ಆದರೆ, ಕೋವಿಡ್ ಪಾಸಿಟಿವ್ ಆಗಿಲ್ಲ. ಹಾಗಾಗಿ ಯಾರೂ ಆತಂಕ ಪಡುವ ಅಗತ್ಯವಿಲ್ಲ. ನಿಗದಿತ ದಿನಾಂಕಗಳಂದು ಅವರು ಮತ್ತೆ ಪ್ರಚಾರದಲ್ಲಿ […]readmore
ಪವರ್ ಸ್ಟಾರ್ ಪವನ್ ಕಲ್ಯಾಣ್ ಆರೋಗ್ಯದಲ್ಲಿ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೂಲಗಳ ಪ್ರಕಾರ ಪವನ್ ಕಲ್ಯಾಣ್ ಹೈ ಫೀವರ್ ನಿಂದ ಬಳಲುತ್ತಿದ್ದ ಕಾರಣಕ್ಕೆ ಆಸ್ಪತ್ರೆಗೆ ಅಡ್ಮೀಟ್ ಮಾಡಲಾಗಿದೆ. ಪವನ್ ಕಲ್ಯಾಣ್ ಅನಾರೋಗ್ಯದ ಹಿನ್ನೆಲೆಯಲ್ಲಿ ಜನವಾಣಿ ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಂಡಿದ್ದ ಅನೇಕ ಕಾರ್ಯಕ್ರಮಗಳನ್ನು ಮುಂದೂಡಲಾಗಿದೆ. ಪವನ್ ಜೊತೆಗೆ ಪಕ್ಷದ ಕೆಲವು ಪ್ರಮುಖ ನಾಯಕರು, ಕಾರ್ಯಕ್ರಮ ಸಮಿತಿ ಸದಸ್ಯರು ಮತ್ತು ಭದ್ರತಾ ಸಿಬ್ಬಂದಿ ಸಹ ಜ್ವರದಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ. ನೆಚ್ಚಿನ ನಟನ ಆರೋಗ್ಯದ ಬಗ್ಗೆ ತಿಳಿಯುತ್ತಿದ್ದಂತೆ ಆತಂಕಗೊಂಡಿರುವ ಅಭಿಮಾನಿಗಳು ಪವನ್ […]readmore
ಖ್ಯಾತ ಗಾಯಕ ಸಿಧು ಮೂಸೆವಾಲ ಅವರನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ಶಂಕಿತ ನಾಲ್ವರು ಆರೋಪಿಗಳು ಇಂದು ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾರೆ. ಪೊಲೀಸರು ಹಾಗೂ ಗ್ಯಾಂಗ್ ಸ್ಟಾರ್ ಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಶಂಕಿತರು ಬಲಿಯಾಗಿದ್ದು ಜನರು ಮನೆಯಿಂದ ಹೊರ ಬರದಂತೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಪಂಜಾಬ್ ನ ಅಮೃತಸರದ ಸಮೀಪದ ಒಂಟಿ ಮನೆಯೊಂದರಲ್ಲಿ ಅವಿತು ಕುಳಿತಿದ್ದ ಆರೋಪಿಗಳ ಮೇಲೆ ಪೊಲೀಸರು ಗುಂಡಿನ ಸುರಿಮಳೆ ಗೈದಿದ್ದಾರೆ. ಪಾಕ್ ಗಡಿಯಿಂದ ಸುಮಾರು 10 ಕಿಮೀ ದೂರದ ಹಳ್ಳಿಯಲ್ಲಿ […]readmore
ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕಿರುತೆರೆ ನಟ ಯಲಹಂಕ ಬಾಲಾಜಿ ಇಂದು ನಿಧನರಾಗಿದ್ದಾರೆ. ಟಿ.ಎನ್.ಸೀತಾರಾಮ್ ನಿರ್ದೇಶನದ ಸಾಕಷ್ಟು ಧಾರವಾಹಿಗಳಲ್ಲಿ ಬಾಲಾಜಿ ನಟಿಸಿದ್ದರು. ಬಾಲಾಜಿ ಅವರ ನಿಧನದ ಕುರಿತು ಟಿ.ಎನ್.ಸೀತಾರಾಮ್ ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಬರೆದುಕೊಂಡಿದ್ದಾರೆ. ‘ಅತ್ಯಂತ ಹೃದಯವಂತ ಗೆಳೆಯ. ಎಲ್ಲ ಕಷ್ಟಗಳಲ್ಲೂ, ಸಂತೋಷಗಳಲ್ಲೂ ಜತೆಗೆ ಇರುತ್ತಿದ್ದ ಮನುಷ್ಯ. ಇಡೀ ಬದುಕಿನುದ್ದಕ್ಕೂ ಕಷ್ಟ ಕಂಡಿದ್ದರೂ, ನಗುತ್ತಾ ಬದುಕಿದ ಗೆಳೆಯ. ಬಾಲಾಜಿ ಇನ್ನಿಲ್ಲ ಎಂದು ನೆನಪಿಸಿಕೊಂಡರೆ ಅಪಾರ ಸಂಕಟವಾಗುತ್ತದೆ’ ಎಂದು ಟಿ.ಎನ್.ಸೀರಾತಾಮ್ ಫೇಸ್ ಬುಕ್ ನಲ್ಲಿ […]readmore
ರಾಮಾ ರಾಮಾ ರೇ, ಒಂದಲ್ಲ ಎರಡಲ್ಲ ಸಿನಿಮಾ ಖ್ಯಾತಿಯ ನಿರ್ದೇಶಕ ಸತ್ಯ ಪ್ರಕಾಶ್ ನಿರ್ದೇಶನದ ಜೊತೆಗೆ ಸಿನಿಮಾ ನಿರ್ಮಾಣ, ವಿತರಣೆಯಲ್ಲೂ ಬ್ಯುಸಿಯಾಗಿರೋದು ಗೊತ್ತೇ ಇದೆ. ಸದಾ ಹೊಸ ಪ್ರತಿಭೆಗಳನ್ನು ಗುರುತಿಸುವಲ್ಲಿ ಮುಂಚೂಣಿಯಲ್ಲಿರುವ ಸತ್ಯ ಪ್ರಕಾಶ್ ಮತ್ತೊಬ್ಬ ನವನಟನಿಗೆ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಅವರೇ ಮಿಲಿಂದ್. 2018ರಲ್ಲಿ ತೆರೆಕಂಡ ಅನಂತ್ ನಾಗ್ ಅಭಿನಯದ ವೀಕೆಂಡ್ ಸಿನಿಮಾದಲ್ಲಿ ನಟಿಸಿದ್ದ ಮಿಲಿಂದ್ ಗಿದು ಎರಡನೇ ಸಿನಿಮಾ. ಈ ಚಿತ್ರದಲ್ಲಿ ಪೂರ್ಣ ಪ್ರಮಾಣದ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದು, ಪಾತ್ರಕ್ಕೆ ತಯಾರಿಯೂ ಭರ್ಜರಿಯಾಗಿ ನಡೆಯುತ್ತಿದೆ. ಮಿಲಿಂದ್ […]readmore
ಕನ್ನಡ ಸಿನಿಮಾದ ಮೂಲಕ ನಾಯಕಿಯಾಗಿ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ನಿತ್ಯಾ ಮೆನನ್ ಮಲಯಾಳಂ, ತಮಿಳು, ತೆಲುಗು ಸಿನಿಮಾ ರಂಗದಲ್ಲಿ ತೊಡಗಿಸಿಕೊಂಡಿದ್ದಾರೆ. ಅನೇಕ ಸ್ಟಾರ್ ನಟರ ಜೊತೆ ಸ್ಕ್ರೀನ್ ಶೇರ್ ಮಾಡಿರುವ ನಿತ್ಯಾ ಮೆನನ್ ಇದೀಗ ರಿಯಲ್ ಲೈಫ್ ಜೋಡಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಸದ್ಯದಲ್ಲೇ ನಿತ್ಯಾ ಮೆನನ್ ಕಲ್ಯಾಣ್ ಮಲಯಾಳಂನ ಸ್ಟಾರ್ ನಟನ ಜೊತೆ ನಡೆಯಲಿದೆ ಅನ್ನೋ ಮಾತು ಕೇಳಿ ಬರ್ತಿದೆ. 2006ರಲ್ಲಿ 7 ಒ ಕ್ಲಾಕ್ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟ ನಿತ್ಯಾ ಮೆನನ್ ರನ್ನ […]readmore
ಜೇಮ್ಸ್ ಸಿನಿಮಾದ ಬಳಿಕ ನಿರ್ದೇಶಕ ಬಹದ್ದೂರ್ ಚೇತನ್ ಮುಂದಿನ ಸಿನಿಮಾ ಯಾವುದು ಅನ್ನೋ ಕ್ಯೂರಿಯಾಸಿಟಿ ಕ್ರಿಯೇಟ್ ಆಗಿದ್ದು ಅದಕ್ಕೀಗ ಬ್ರೇಕ್ ಬಿದ್ದಿದೆ. ಜೇಮ್ಸ್ ಬಳಿಕ ಕೊಂಚ ಬಿಡುವು ಪಡೆದುಕೊಂಡಿದ್ದ ಚೇತನ್ ಇದೀಗ ಮತ್ತೊಂದು ಅದ್ದೂರಿ ಬಜೆಟ್ ನ ಸಿನಿಮಾಗೆ ಆಕ್ಷನ್ ಕಟ್ ಹೇಳೋಕೆ ರೆಡಿಯಾಗಿದ್ದಾರೆ. ಬಹದ್ದೂರ್, ಭರ್ಜರಿ, ಭರಾಟೆ ಹಾಗೂ ಜೇಮ್ಸ್ ನಂತಹ ನಾಲ್ಕು ಸೂಪರ್ ಹಿಟ್ ಸಿನಿಮಾಗಳನ್ನ ನೀಡಿದ್ದ ನಿರ್ದೇಶಕ ಬಹದ್ದೂರ್ ಚೇತನ್ ರೋಗ್ ಸಿನಿಮಾ ಖ್ಯಾತಿಯ ಇಶಾನ್ ಗೆ ಆಕ್ಷನ್ ಕಟ್ ಹೇಳೋಕೆ ರೆಡಿಯಾಗಿದ್ದಾರೆ. […]readmore
