• June 22, 2026

karnatakaspecial.in

https://karnatakaspecial.in/

ಬೆಂಗಳೂರಿನ ಮಳೆ ಅವಾಂತರಕ್ಕೆ ಸಿಡಿದೆದ್ದ ನಟಿ ರಮ್ಯಾ

ಮಳೆ ಶುರುವಾಯ್ತು ಎಂದರೆ ಬೆಂಗಳೂರಿನ ಮಂದಿ ಬೆಚ್ಚಿ ಬೀಳುತ್ತಾರೆ. ರಸ್ತೆಗಳು ನದಿಗಳಾಗುತ್ತವೆ, ಮನೆಗಳು ಕೆರೆಗಳಾಗುತ್ತವೆ. ಕಳೆದ ಕೆಲ ದಿನಗಳಿಂದ ಸುರಿಯುತ್ತಿದ್ದ ಭಾರೀ ಮಳೆಯಿಂದಾಗಿ ಬೆಂಗಳೂರಿನ ಹಲವೆಡೆ ಜನ ಜೀವನ ಅಲ್ಲೋಲ ಕಲ್ಲೋಲವಾಗಿದೆ. ಈ ಬಗ್ಗೆ ರಮ್ಯಾ ಸೋಷಿಯಲ್ ಮೀಡಿಯಾದಲ್ಲಿ ಅಕ್ರೋಶ ಹೊರ ಹಾಕಿದ್ದಾರೆ. ಬೆಂಗಳೂರಿನಲ್ಲಿ ಸಣ್ಣದೊಂದು ಜಾಗ ಸಿಕ್ಕಿದ್ರೆ ಸಾಕು ಅನ್ನೋ ಪರಿಸ್ಥಿತಿ ನಿರ್ಮಾಣವಾಗಿದೆ. ಅದ್ರಲ್ಲೂ ಸಾಕಷ್ಟು ಕಡೆಗಳಲ್ಲಿ ಅಕ್ರಮ ಕಟ್ಟಡಗಳು ತಲೆ ಎತ್ತಿ ನಿಂತಿವೆ. ಇಂಥಹ ಅಕ್ರಮ ಕಟ್ಟಡಗಳಿಂದಲೇ ಬೆಂಗಳೂರಿಗೆ ಇಂತಹ ಸ್ಥಿತಿ ಬರುತ್ತಿದೆ ಎಂಬ […]Read More

‘ಸೆಪ್ಟೆಂಬರ್ 13’ ಚಿತ್ರದ ಪೋಸ್ಟರ್ ಬಿಡುಗಡೆ ಮಾಡಿದ ಖ್ಯಾತ ನಟ ಮಮ್ಮುಟ್ಟಿ

ಮಹಾಮಾರಿ ಕೋವಿಡ್ ಸಂದರ್ಭದಲ್ಲಿ ತಮ್ಮ ಜೀವವನ್ನು ಲೆಕ್ಕಿಸದೆ ರೋಗಿಗಳ ಸೇವೆಗೆ ಮುಂದಾದ ದಾದಿಯರ ತ್ಯಾಗಕ್ಕೆ ನಿಜಕ್ಕೂ ಹ್ಯಾಟ್ ಆಫ್ ಹೇಳಲೇ ಬೇಕು. ಕೊರೋನ ಸಂದರ್ಭದಲ್ಲಿ ದಾದಿಯರ ಸೇವೆ ಹಾಗೂ ತ್ಯಾಗವನ್ನು ಬಿಂಬಿಸುವ ಸೆಪ್ಟೆಂಬರ್ 13 ಸಿನಿಮಾ ಬಿಡುಗಡೆಗೆ ರೆಡಿಯಾಗಿದ್ದು ಚಿತ್ರದ ಹೊಸ ಪೋಸ್ಟರ್ ಅನ್ನು ಮಾಲಿವುಡ್ ನ ಖ್ಯಾತ ನಟ ಮಮ್ಮುಟ್ಟಿ ಬಿಡುಗಡೆ ಮಾಡಿದ್ದಾರೆ. ಸೆಪ್ಟೆಂಬರ್ 13 ಸಿನಿಮಾ ಸದ್ದಿಲ್ಲದೆ ಶೂಟಿಂಗ್ ಕಂಪ್ಲೀಟ್ ಮಾಡಿದ್ದು ಸದ್ಯದಲ್ಲೇ ತೆರೆಗೆ ಬರಲು ಸಿದ್ದವಾಗಿದೆ. ಹೀಗಾಗಿ ಸೆಪ್ಟೆಂಬರ್ 13 ಸಿನಿಮಾದ ಹೊಸ […]Read More

ಮತ್ತೊಮ್ಮೆ ಬಾಂಬ್ ಸಿಡಿಸಿದ ಚಿನ್ಮಯಿ ಶ್ರೀಪಾದ್: ಸಮಂತಾ ಪಾತ್ರಕ್ಕೆ ಡಬ್ಬಿಂಗ್ ಮಾಡಲಾರೆ ಎಂದ

ತಮಿಳು ಚಿತ್ರರಂಗದ ಖ್ಯಾತ ಗಾಯಕಿ ಹಾಗೂ ಡಬ್ಬಿಂಗ್ ಕಲಾವಿದೆ ಚಿನ್ಮಯಿ ಶ್ರೀಪಾದ್ ಮತ್ತೊಮ್ಮೆ ಬಾಂಬ್ ಸಿಡಿಸಿದ್ದಾರೆ. ಈ ಹಿಂದೆ ಖ್ಯಾತ ನಟ, ನಟಿಯರ ಖಾಸಗಿ ಜೀವನದ ಕುರಿತಾಗಿ ಸಿನಿಮಾ ರಂಗದಲ್ಲಿ ಕೋಲಾಹಲ ಎಬ್ಬಿಸಿದ್ದ ಚಿನ್ಮಯಿ ಶ್ರೀಪಾದ್ ಇದೀಗ ಸಮಂತಾ ಪಾತ್ರಗಳಿಗೆ ಡಬ್ಬಿಂಗ್ ಮಾಡುವುದಿಲ್ಲ ಎಂದು ನೇರಾ ನೇರವಾಗಿ ಹೇಳಿದ್ದಾರೆ. ಸಮಂತಾ ನಟನೆಯ ಪಾತ್ರಗಳಿಗೆ ತಮ್ಮ ಧ್ವನಿಯ ಮೂಲಕವೇ ಜೀವ ತುಂಬುತ್ತಿದ್ದವರು ಚಿನ್ಮಯಿ ಶ್ರೀಪಾದ್. ಸಮಂತ ನಟನೆಯನ್ನು ಅಭಿಮಾನಿಗಳು ಎಷ್ಟು ಮೆಚ್ಚುಕೊಳ್ಳುತ್ತಿದ್ದರೋ ಅವರ ಪಾತ್ರದ ಧ್ವನಿಯನ್ನು ಅಷ್ಟೇ ಇಷ್ಟ […]Read More

ಒಟಿಟಿಯಲ್ಲಿ ‘ವಿಕ್ರಾಂತ್ ರೋಣ’ ಧಮಾಕ: 24 ಗಂಟೆಯಲ್ಲಿ ವೀಕ್ಷಣೆ ಆಗಿದ್ದು ಎಷ್ಟು ಗೊತ್ತಾ?

ಅಭಿನಯ ಚಕ್ರವತ್ರಿ ಕಿಚ್ಚ ಸುದೀಪ್ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ ವಿಕ್ರಾಂತ್ ರೋಣ ಜೀ5 ಒಟಿಟಿಯಲ್ಲಿ ಧೂಳ್ ಎಬ್ಬಿಸುತ್ತಿದೆ. ಅಡ್ವೆಂಚರ್ಸ್ ಕಥಾನಕದ ಜೊತೆಗೆ ಮರ್ಡರ್ ಮಿಸ್ಟ್ರೀ ಕಂಟೆಂಟ್ ಹೊತ್ತುಬಂದಿದ್ದ ಈ ಚಿತ್ರಕ್ಕೆ ಒಟಿಟಿಯಲ್ಲಿ ಭರ್ಜರಿ ರೆಸ್ಪಾನ್ಸ್ ಸಿಕ್ತಿದೆ. ಸುದೀಪ್ ಹುಟ್ಟುಹಬ್ಬಕ್ಕೆ ಅಂದ್ರೆ ಸೆಪ್ಟಂಬರ್ 2ರಂದು ಜೀ5 ಒಟಿಟಿಗೆ ಲಗ್ಗೆ ಇಟ್ಟಿದ್ದ ವಿಕ್ರಾಂತ್ ರೋಣ ಜಸ್ಟ್ 24 ಗಂಟೆಯಲ್ಲಿ 500 ಮಿಲಿಯನ್ಸ್ ಸ್ಟ್ರೀಮಿಂಗ್ ಕಂಡು ದಾಖಲೆ ಬರೆದಿದೆ. ಜುಲೈ 28ರಂದು ಬಿಗ್ ಸ್ಕ್ರೀನ್ ನಲ್ಲಿ ದಿಬ್ಬಣ ಹೊರಟಿದ್ದ ವಿಕ್ರಾಂತ್ […]Read More

ವಿಜಯ್ ಸೇತುಪತಿ ಫ್ಯಾನ್ಸ್ ಗೆ ಡಬಲ್ ಧಮಾಕಾ: ‘ವಿಡುದಲೈ’ ಚಿತ್ರ 2 ಭಾಗಗಳಲ್ಲಿ

ವಿಜಯ್​ ಸೇತುಪತಿ ಮತ್ತು ಸೂರಿ ನಟಿಸುತ್ತಿರುವ ತಮಿಳು ಚಿತ್ರ ‘ವಿಡುದಲೈ’ ಇದೀಗ ಎರಡು ಭಾಗಗಳಲ್ಲಿ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ.ಈ ಚಿತ್ರವನ್ನು ರೆಡ್​ ಜಯಂಟ್​ ಮೂವಿಸ್​ನಡಿ ಉದಯನಿಧಿ ಸ್ಟಾಲಿನ್​ ಅರ್ಪಿಸಿದರೆ, ಆರ್​.ಎಸ್​. ಇನ್ಫೋಟೈನ್​ಮೆಂಟ್​ನಡಿ ಎಲ್ರೆಡ್​ ಕುಮಾರ್​ ನಿರ್ಮಿಸುತ್ತಿದ್ದಾರೆ. ಕಾಲಿವುಡ್​ನ ಜನಪ್ರಿಯ ನಿರ್ದೇಶಕರಲ್ಲಿ ವೆಟ್ರಿಮಾರನ್​ ಪ್ರಮುಖರು. ಕೆಲವು ತಿಂಗಳುಗಳ ಹಿಂದೆ ಅವರು ‘ವಿಡುದಲೈ’ ಎಂಬ ಚಿತ್ರವನ್ನು ನಿರ್ದೇಶಿಸುತ್ತಿರುವುದಾಗಿ ಘೋಷಿಸಿದಾಗಲೇ, ಈ ಚಿತ್ರದ ಬಗ್ಗೆ ಪ್ರೇಕ್ಷಕರಲ್ಲಿ ಸಾಕಷ್ಟು ಕುತೂಹಲ ಇತ್ತು. ಕ್ರಮೇಣ ಜನಪ್ರಿಯ ಕಲಾವಿದರು ಮತ್ತು ತಂತ್ರಜ್ನರು ಚಿತ್ರತಂಡಕ್ಕೆ ಸೇರ್ಪಡೆಯಾಗುತ್ತಿದ್ದಂತೆಯೇ, ಈ ಚಿತ್ರದ […]Read More

ಲೈಗರ್ ಸಿನಿಮಾದ ಸೋಲು: ಜನರ ಕಣ್ಣಿಂದ ದೂರವಾಗಲು ನಿರ್ಧರಿಸಿದ ಚಾರ್ಮಿ ಕೌರ್

ಬಾಲಿವುಡ್ ನಲ್ಲಿ ಸಾಕಷ್ಟು ನಿರೀಕ್ಷೆಯೊಂದಿಗೆ ತೆರೆಗೆ ಬಂದ ಲೈಗರ್ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಮಕಾಡೆ ಮಲಗಿದೆ. ಇದರಿಂದ ಇಡೀ ಲೈಗರ್ ಸಿನಿಮಾ ತಂಡಕ್ಕೆ ಭಾರೀ ಹಿನ್ನಡೆಯಾಗಿದೆ. ಲೈಗರ್ ಸಿನಿಮಾದ ಸೋಲಿನಿಂದ ನೊಂದಿರುವ ನಿರ್ಮಾಪಕಿ ಚಾರ್ಮಿ ಕೌರ್ ಸೋಷಿಯಲ್ ಮೀಡಿಯಾಗೆ ವಿರಾಮ ಘೋಷಿಸಿದ್ದಾರೆ. ದುಬಾರಿ ವೆಚ್ಚದಲ್ಲಿ ನಿರ್ಮಾಣವಾದ ಲೈಗರ್ ಸಿನಿಮಾ ಮೊದಲ ದಿನವೇ ಸೈಲೆಂಟ್ ಆಗಿ ಬಿಟ್ಟಿದೆ. ಹೀಗಾಗಿ ಲೈಗರ್ ಸಿನಿಮಾದಿಂದ ನಿರ್ಮಾಪಕರಿಗೆ ಆಗಿರುವ ನಷ್ಟವನ್ನು ಭರಿಸಲು ಸಂಭಾವನೆಯಲ್ಲಿ 6 ಕೋಟಿ ಹಿಂದಿರುಗಿಸಲು ವಿಜಯ್ ದೇವರಕೊಂಡ ಮುಂದಾಗಿದ್ದಾರೆ. […]Read More

ಮುರುಘಾ ಸ್ವಾಮೀಜಿಗೆ ಸೆಪ್ಟೆಂಬರ್ 14ರವರೆಗೆ ನ್ಯಾಯಾಂಗ ಬಂಧನ

ಚಿತ್ರದುರ್ಗ: ಅಪ್ರಾಪ್ತೆಯರಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಚಿತ್ರದುರ್ಗ ಮುರುಘಾ ಮಠದ ಪೀಠಾದಿಪತಿ ಮುರುಘಾ ಶ್ರೀಗಳನ್ನು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಮುರುಘ ಶ್ರೀಗಳ ಕಸ್ಟಡಿ ಭಾನುವಾರ ಅಂತ್ಯವಾದ ಹಿನ್ನೆಲೆಯಲ್ಲಿ ಇಂದು ಪೊಲೀಸರು ಶ್ರೀಗಳನ್ನು ಜೆಎಂಎಫ್ ಸಿ ಕೋರ್ಟ್ ಮುಂದೆ ಹಾಜರು ಪಡಿಸಿದ್ದರು. ವಿಚಾರಣೆ ನಡೆಸಿದ 2ನೇ ಅಪರ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಕೋಮಲ ವಿಚಾರಣೆ ಮುಗಿದ ಹಿನ್ನೆಲೆಯಲ್ಲಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಶ್ರೀಗಳ ಸಂಪೂರ್ಣ ವಿಚಾರಣೆ ಮುಗಿದ ಹಿನ್ನೆಲೆಯಲ್ಲಿ ಸೆ.14ರ ವರೆಗೆ ನ್ಯಾಯಾಂಗ […]Read More

ಪ್ರಕಾಶ್ ರಾಜ್ ಫಸ್ಟ್ ಲುಕ್ ಅನಾವರಣ ಮಾಡಿದ ಪೊನ್ನಿಯನ್ ಸೆಲ್ವನ್ ಚಿತ್ರತಂಡ

ತಮಿಳಿನ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿರುವ ಪೊನ್ನಿಯನ್ ಸೆಲ್ವನ್ ಸಿನಿಮಾ ತಂಡ ಇದೀಗ ಹೊಸ ಲುಕ್ ಒಂದನ್ನು ಬಿಡುಗಡೆ ಮಾಡಿದೆ. ಪ್ರಕಾಶ್ ರಾಜ್, ಜಯಚಿತ್ರ ಹಾಗೂ ರೆಹಮಾನ್ ಅವರ ಫಸ್ಟ್ ಲುಕ್ ರಿಲೀಸ್ ಮಾಡಿದ್ದ ಅಭಿಮಾನಿಗಳು ಸಂತಸಗೊಂಡಿದ್ದಾರೆ. ಲೈಕಾ ಪ್ರೊಡಕ್ಷನ್ಸ್ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಪೊನ್ನಿಯನ್ ಸೆಲ್ವನ್ ಸಿನಿಮಾದ ಮೋಷನ್ ಪೋಸ್ಟರ್ ಶೇರ್ ಮಾಡಿದೆ. ಅಲ್ಲದೆ ಪ್ರಕಾಶ್ ರಾಜ್ ಅನ್ನು ಸುಂದ್ರ ಚೋಜರ್ ಎಂದು, ಜಯಚಿತ್ರವನ್ನು ಸೆಂಬಿಯನ್ ಮಾದೇವಿ ಎಂದು ಮತ್ತು ರೆಹಮಾನ್ ಅನ್ನು ಮಧುರಾಂತಕನ್ ಎಂದು […]Read More

ಸಲಿಂಗ ವಿವಾಹ ಬೆಂಬಲಿಸಿದ ತಮಿಳಿನ ಖ್ಯಾತ ನಿರ್ದೇಶಕ ವೆಟ್ರಿಮಾರನ್

ವಿಶ್ವ ಲೈಂಗಿಕ ಆರೋಗ್ಯ ದಿನದ ಹಿನ್ನೆಲೆಯಲ್ಲಿ ತಮಿಳು ಚಿತ್ರರಂಗದ ಖ್ಯಾತ ನಿರ್ದೇಶಕ ವೆಟ್ರಿಮಾರನ್ ಸಲಿಂಗ ವಿವಾಹ ಬೆಂಬಲಿಸಿ ಮಾತನಾಡಿದ್ದು ಸದ್ಯ ಈ ವೀಡಿಯೋ ವೈರಲ್ ಆಗಿದೆ. ಮಾನವ ಸರಪಳಿ ರಚನೆ ಒಳಗೊಂಡ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ವಿಶ್ವ ಲೈಂಗಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮದಲ್ಲಿಮಾತನಾಡಿದ ವೆಟ್ರಿಮಾರನ್, ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಸಲಿಂಗ ವಿವಾಹವನ್ನು ಉಲ್ಲೇಖಿಸಿದರು. ಬಾಂಗ್ಲಾದೇಶದ ಮಹಿಳೆ ಮತ್ತು ತಮಿಳುನಾಡಿನ ಮಹಿಳೆಯ ನಡುವೆ ನಡೆದ ಮದುವೆ ಪ್ರಸ್ತಾಪಿಸಿ ಇಂಥ ವಿವಾಹಗಳನ್ನು ಪ್ರೋತ್ಸಾಹಿಸಬೇಕು ಎಂದರು. ತಮಿಳುನಾಡಿನ ಸುಭಿಕ್ಷಾ ಸುಬ್ರಮಣಿ […]Read More

ನೀನು ಹಾಲು ಇದ್ದಂತೆ, ಒಮ್ಮೆಲೆ ಉಕ್ಕುತ್ತೀಯ: ಸೋನು ಗೌಡ ವ್ಯಕ್ತಿತ್ವ ಬಣ್ಣಿಸಿದ ಆರ್ಯವರ್ಧನ್

ಒಟಿಟಿಯಲ್ಲಿ ಪ್ರಸಾರವಾಗುತ್ತಿರುವ ಬಿಗ್ ಬಾಸ್ ಕನ್ನಡದ ನಾಲ್ಕನೇ ವಾರ ಕಂಪ್ಲೀಟ್ ಆಗಿದೆ. ಕಳೆದ ವಾರ ಮನೆಯಿಂದ ಚೈತ್ರ ಹಳ್ಳಿಕೇರಿ ಹಾಗೂ ಅಕ್ಷತಾ ಕುಕ್ಕಿ ಮನೆಯಿಂದ ಹೊರ ನಡೆದಿದ್ದಾರೆ. ಆರನೇ ವಾರಕ್ಕೆ ಬಿಗ್ ಬಾಸ್ ಕಾರ್ಯಕ್ರಮ ಮುಗಿಯಲಿದ್ದು ಬಿಗ್ ಬಾಸ್ ಟ್ರೋಪಿ ಪಡೆದುಕೊಳ್ಳಲು ಪ್ರತಿಯೊಬ್ಬರು ತುದಿಗಾಲಲ್ಲಿ ನಿಂತಿದ್ದಾರೆ. ಸೋಷಿಯಲ್ ಮೀಡಿಯಾ ಸ್ಟಾರ್ ಸೋನು ಗೌಡ ಮನೆಗೆ ಎಂಟ್ರಿಕೊಟ್ಟ ದಿನದಿಂದಲೂ ಒಂದಲ್ಲ ಒಂದು ರೀತಿಯಲ್ಲಿ ಸದ್ದು ಮಾಡ್ತಾನೆ ಇದ್ದಾರೆ. ತಮಗೆ ಅನಿಸಿದ್ದನ್ನು ನೇರಾನೇರವಾಗಿ ಹೇಳಿ ಸಾಕಷ್ಟು ಜನರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. […]Read More

Phone icon
Call Now
Reach us!
WhatsApp icon
Chat Now