ಸೌತ್‌ನ ಸ್ಟಾರ್ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ಹೀರೋಗಳಿಗೆ ಬಗೆಬಗೆ ಸ್ಟೆಪ್ಸ್ ಹಾಕಿಸಿ ಖ್ಯಾತಿ ಗಿಟ್ಟಿಸಿಕೊಂಡವರು. ಇದೀಗ ಇದೇ ಕೋರಿಯೋಗ್ರಾಫರ್ ತೆರೆಮೇಲೆ ಮಿಂಚಲು ಸಿದ್ಧರಾಗಿದ್ದಾರೆ. ಅಂದರೆ, “ಯಥಾ ರಾಜ ತಥಾ ಪ್ರಜಾ” ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಹೀರೋ ಆಗಿ ಪದಾರ್ಪಣೆ ಮಾಡುತ್ತಿದ್ದಾರೆ. ಇತ್ತೀಚೆಗಷ್ಟೇ ಈ ಚಿತ್ರದ ಮುಹೂರ್ತ ನೆರವೇರಿದ್ದು, ತೆಲುಗು ನಟ ಶರ್ವಾನಂದ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡಿದರೆ, ಸಲ್ಮಾನ್ ಖಾನ್ ಬಾಮೈದ ಆಯುಷ್ ಶರ್ಮಾ ಕ್ಯಾಮರಾಕ್ಕೆ ಚಾಲನೆ ನೀಡಿದ್ದಾರೆ. ನಿರ್ದೇಶಕ ಕರುಣಾ ಕುಮಾರ್ ಮೊದಲ […]readmore
ಬೆಂಗಳೂರು: ಸ್ನೇಕ್ ಲೋಕೇಶ್ ಎಂದೇ ರಾಜ್ಯಾದ್ಯಂತ ಖ್ಯಾತಿ ಘಳಿಸಿದ್ದ ಉರಗ ರಕ್ಷಕ, ನೆಲಮಂಗಲದ ಸ್ನೇಕ್ ಲೋಕೇಶ್ ಹಾವು ಕಡಿತದಿಂದ ಚಿಕಿತ್ಸೆ ಪಡೆಯುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಲೋಕೇಶ್ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ನೆಲಮಂಗಲ ತಾಲೂಕಿನ ಡಾಬಸ್ ಪೇಟೆಯಲ್ಲಿ ಕಳೆದ ಜುಲೈ 17ರಂದು ಸ್ನೇಕ್ ಲೋಕೇಶ್ ಅವರ ಬಲಗೈ ಬೆರಳಿಗೆ ವಿಷಪೂರಿತ ನಾಗರಹಾವು ಕಚ್ಚಿತ್ತು. ತಕ್ಷಣವೇ ಸ್ನೇಕ್ ಲೋಕೇಶ್ ಅವರನ್ನು ನೆಲಮಂಗಲದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ಕೊಡಿಸಿ ಬಳಿಕ […]readmore
ಮಾಸ್ಕೋ: ಪ್ರವಾದಿ ಮೊಹಮ್ಮದ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿ ಸಾಕಷ್ಟು ಟೀಕೆಗೆ ಗುರಿಯಾಗಿದ್ದ ಬಿಜೆಪಿಯ ಮಾಜಿ ನಾಯಕಿ ನೂಪುರ್ ಶರ್ಮಾ ಹತ್ಯೆಗೆ ಸಂಚು ರೂಪಿಸಿದ್ದ ಆರೋಪಿಯನ್ನು ಪೊಲೀಸರು ಸೆರೆ ಹಿಡಿದಿದ್ದಾರೆ. ನಿನ್ನೆ ರಷ್ಯಾದಲ್ಲಿ ಸೆರೆ ಸಿಕ್ಕ ಐಸಿಎಸ್ ಉಗ್ರ ಅಜಮೋವ್ ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಹೊರ ಹಾಕಿದ್ದು ನೂಪುರ್ ಶರ್ಮಾರನ್ನು ಕೊಲ್ಲುವ ಯೋಜನೆ ರೂಪಿಸಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಧ್ಯ ಏಷ್ಯದವನಾಗಿರುವ ಆತ್ಮಾಹುತಿ ಬಾಂಬರ್ ಅಜಮೊವ್ ಇಸ್ಲಾಮಿಕ್ ಸ್ಟೇಟ್ನ ಮುಖಂಡನಿಗೆ ನಿಷ್ಠನಾಗಿರುವುದಾಗಿ ಪ್ರತಿಜ್ಞೆ ತೆಗೆದುಕೊಂಡಿದ್ದ. ಬಳಿಕ ಈತನನ್ನು ರಷ್ಯಾಕ್ಕೆ ಕಳುಹಿಸಲಾಗಿದೆ. ಅಲ್ಲಿಂದ ಅಗತ್ಯ ದಾಖಲೆ ಸಮೇತ ಭಾರತದಲ್ಲಿ ದೊಡ್ಡ ಮಟ್ಟದ ಉಗ್ರ ಕೃತ್ಯ ನಡೆಸುವುದಕ್ಕಾಗಿ ಭಾರತಕ್ಕೆ ಬರಲು ಮುಂದಾಗಿದ್ದ ಎಂದು ಎಫ್ಎಸ್ಬಿ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಿತ್ತು. ರಷ್ಯಾದಲ್ಲಿ […]readmore
ಜೀ ಕನ್ನ ಡದಲ್ಲಿ ಪ್ರಸಾರವಾಗುತ್ತಿದ್ದ ಖ್ಯಾತ ಜೊತೆ ಜೊತೆಯಲಿ ಧಾರಾವಾಹಿಯಲ್ಲಿ ಎಲ್ಲವೂ ಸರಿ ಇಲ್ಲ ಅನ್ನೋದು ಈಗಾಗ್ಲೆ ಜಗಜ್ಜಾಹಿರಾಗಿದೆ. ಧಾರಾವಾಹಿ ತಂಡ ಹಾಗೂ ಅನಿರುದ್ಧ್ ನಡುವಿನ ಮನಸ್ತಾಪದಿಂದ ಸದ್ಯ ಅನಿರುದ್ಧ್ ರನ್ನು ಕೈ ಬಿಡಲಾಗಿದೆ. ಈ ಮಧ್ಯೆ ಅನಿರುದ್ಧ್ ಮತ್ತೆ ಕರೆದರೆ ಸೀರಿಯಲ್ ನಲ್ಲಿ ನಟಿಸೋದಾಗಿ ಹೇಳಿದ್ದರು ಚಿತ್ರತಂಡ ಹೊಸ ನಟನ ಹುಡುಕಾಟದಲ್ಲಿ ಬ್ಯುಸಿಯಾಗಿದೆ. ಈ ಮಧ್ಯೆ ಖ್ಯಾತ ನಿರ್ದೇಶಕ ಅನೂಪ್ ಭಂಡಾರಿಗೂ ಆಫರ್ ಹೋಗಿದ್ದು ಈ ಬಗ್ಗೆ ಸ್ವತಃ ಅನೂಪ್ ಸ್ಪಷ್ಟನೆ ನೀಡಿದ್ದಾರೆ. ಜೊತೆ ಜೊತೆಯಲಿ […]readmore
ಕಿರಿಕ್ ಪಾರ್ಟಿ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟ ನಟಿ ರಶ್ಮಿಕಾ ಮಂದಣ್ಣ ಬಳಿಕ ಹಿಂದಿರುಗಿ ನೋಡಿದ್ದೇ ಇಲ್ಲ. ಸದ್ಯ ರಶ್ಮಿಕಾ ಮಂದಣ್ಣ ಸಿನಿಮಾ ರಂಗದ ಗೆಲ್ಲುವ ಕುದುರೆಯಾಗಿದ್ದಾರೆ.ಬ್ಯಾಕ್ ಟು ಬ್ಯಾಕ್ ಸ್ಟಾರ್ ನಟರ ಸಿನಿಮಾಗಳಿಗೆ ಬಣ್ಣ ಹಚ್ಚುತ್ತಿರುವ ರಶ್ಮಿಕಾ ಇದೀಗ ಮತ್ತೊಬ್ಬ ಬಾಲಿವುಡ್ ಸ್ಟಾರ್ ನಟನ ಸಿನಿಮಾಗೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ರಶ್ಮಿಕಾ ಮಂದಣ್ಣ ಮುಟ್ಟಿದೆಲ್ಲಾ ಚಿನ್ನವಾಗುತ್ತಿದೆ. ಈಕೆಯನ್ನು ನಾಯಕಿಯಾಗಿ ಸಿನಿಮಾದಲ್ಲಿ ಹಾಕಿಕೊಂಡರೆ ನಿರ್ಮಾಪಕರು ಗೆದ್ದಂಗೆ ಎಂಬ ಮಾತು ಕೇಳಿ ಬರ್ತಿದೆ. ಇದೇ ಕಾರಣಕ್ಕೆ ಸ್ಟಾರ್ […]readmore
ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ರಜನಿಕಾಂತ್ ನಟನೆಯ 169ನೇ ಸಿನಿಮಾ ಜೈಲರ್ ಪೋಸ್ಟರ್ ರಿಲೀಸ್ ಆಗಿದೆ. ಜೈಲರ್ ಫೋಸ್ಟರ್ ನಲ್ಲಿ ತಲೈವಾನ ಲುಕ್ ನೋಡಿ ಅಭಿಮಾನಿಗಳು ಕ್ಲೀನ್ ಬೋಲ್ಡ್ ಆಗಿದ್ದಾರೆ. ಜೊತೆಗೆ ಈ ಚಿತ್ರದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಕೂಡ ನಟಿಸ್ತಿದ್ದು ಶಿವಣ್ಣನ ಲುಕ್ ಹೇಗಿರಲಿದೆ ಎಂಬ ಕ್ಯೂರಿಯಾಸಿಟಿ ಕ್ರಿಯೇಟ್ ಆಗಿದೆ. ಇಂದು ರಜನಿಕಾಂತ್ ನಟನೆಯ ಜೈಲರ್ ಸಿನಿಮಾ ಸೆಟ್ಟೇರಿದೆ. ಈ ಹಿನ್ನೆಲೆಯಲ್ಲಿ ಚಿತ್ರದ ನಿರ್ಮಾಣ ಸಂಸ್ಥೆಯಾದ ಸನ್ ಪಿಕ್ಚರ್ಸ್ ರಜನಿಕಾಂತ್ ಅವರ ಫಸ್ಟ್ ಪೋಸ್ಟರ್ […]readmore
ರಕ್ಷಿತ್ ಶೆಟ್ಟಿ ನಿರ್ಮಾಣದ ಪರಂವಃ ಸ್ಟುಡಿಯೋಸ್ ಮೂಲಕ ಹೊಸ ಹೊಸ ಪ್ರತಿಭೆಗಳಿಗೆ ಅವಕಾಶ ನೀಡ್ತಿದ್ದಾರೆ. ಈಗಾಗ್ಲೆ ಪರಂವಃ ಸ್ಟುಡಿಯೋಸ್ ಮೂಲಕ ಸಧಭಿರುಚಿಯ ಸಿನಿಮಾಗಳು ತೆರೆಗೆ ಬರ್ತಿದೆ. ಈ ಮಧ್ಯೆ ಕಳೆದ ಕೆಲ ದಿನಗಳ ಹಿಂದೆ ಹೊಸ ಸಿನಿಮಾವೊಂದನ್ನು ಘೋಷಿಸಿದ್ರು. ಸದ್ಯ ಈ ಸಿನಿಮಾದ ಟೈಟಲ್ ರಿವೀಲ್ ಮಾಡಿದೆ ಚಿತ್ರತಂಡ. ಯೋಗರಾಜ್ ಭಟ್ ನಿರ್ದೇಶನದ ಪಂಚತಂತ್ರ ಸಿನಿಮಾದ ನಟ ವಿಹಾನ್ ಗೌಡ ಹಾಗೂ ನಮ್ಮನೆ ಯುವರಾಣಿ ಖ್ಯಾತಿಯ ಅಂಕಿತಾ ಅಮರ್ ನಟನೆಯ ಸಿನಿಮಾಗೆ ಇಬ್ಬನಿ ತಬ್ಬಿದ ಇಳೆಯಲಿ ಎಂದು […]readmore
ತೆಲುಗು ಚಿತ್ರರಂಗದ ಡ್ಯಾಶಿಂಗ್ ಡೈರೆಕ್ಟರ್ ಹಾಗೂ ಸೆನ್ಸೇಷನಲ್ ಸ್ಟಾರ್ ವಿಜಯ್ ದೇವರಕೊಂಡ ಸಮ್ಮಿಲನದ ಲೈಗರ್ ಸಿನಿಮಾ ರಿಲೀಸ್ ಗೆ ಮೂರು ದಿನಗಳು ಮಾತ್ರ ಬಾಕಿ ಉಳಿದಿದೆ. ಬಿಡುಗಡೆಗೂ ಮೊದಲ ಬೇಜಾನ್ ಟಾಕ್ ಕ್ರಿಯೇಟ್ ಮಾಡಿರುವ ಲೈಗರ್ ಸಿನಿಮಾ ಮೂಲಕ ಖಡಕ್ ಖಳನಾಯಕರೊಬ್ಬರು ಬೆಳ್ಳಿತೆರೆಯಲ್ಲಿ ಬ್ಯಾಂಗ್ ಮಾಡಲು ಸಜ್ಜಾಗಿದ್ದಾರೆ. ಅವ್ರೇ ಮಾಡೆಲ್ ಕಂ ಆಕ್ಟರ್ ವಿಶ್. 12 ವರ್ಷದ ಹೋರಾಟ ಅಂತೂ ವಿಶ್ ಸಿನಿಮಾ ಕನಸು ಲೈಗರ್ ಮೂಲಕ ನನಸಾಗ್ತಿದೆ. ಮಾಡೆಲ್ ನಿಂದ ವೃತ್ತಿ ಬದುಕು ಆರಂಭಿಸಿ ಒಂದಷ್ಟು […]readmore
ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿಗೆ ಇಂದು 67ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ. ಈ ಹಿನ್ನೆಲೆಯಲ್ಲಿ ಚಿರಂಜೀವಿಗೆ ಅಭಿಮಾನಿಗಳು, ಸಿನಿಮಾ ನಟ, ನಟಿಯರು, ರಾಜಕೀಯ ಗಣ್ಯರು ಸೇರಿದಂತೆ ಸಾಕಷ್ಟು ಮಂದಿ ಶುಭ ಹಾರೈಸಿದ್ದಾರೆ. ಮೆಗಾಸ್ಟಾರ್ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಬಹುನಿರೀಕ್ಷಿತ ಗಾಡ್ ಫಾದರ್ ಸಿನಿಮಾದ ಟೀಸರ್ ರಿಲೀಸ್ ಆಗಿದ್ದು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಗಾಡ್ ಫಾದರ್ ಮಲಯಾಳಂನ ಸೂಪರ್ ಹಿಟ್ ಲೂಸಿಫರ್ ಸಿನಿಮಾದ ರಿಮೇಕ್ ಆಗಿದ್ದು ದೊಡ್ಡ ಮಟ್ಟದಲ್ಲಿ ಸಕಸ್ಸ್ ಆಗಿತ್ತು. ಆದರೂ ಕೂಡ ಚಿರಂಜೀವಿಯ ಗಾಡ್ ಫಾದರ್ […]readmore
ದಕ್ಷಿಣ ಭಾರತದ ನಾಲ್ಕು ರಾಜ್ಯಗಳ ತಾರೆಯರ, ತಂತ್ರಜ್ಞರ ಸಮಾಗಮದಲ್ಲಿ ನಡೆಯುವ ಪ್ರತಿಷ್ಠಿತ “ಸೈಮಾ” ಅವಾರ್ಡ್ಸ್ 2022 ಈ ಬಾರಿ, ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನೆನಪಿನೊಂದಿಗೆ ಸೆಪ್ಟೆಂಬರ್ 10 ಹಾಗೂ 11ರಂದು ಬೆಂಗಳೂರಿನ ಅರಮನೆ ಆವರಣದಲ್ಲಿ ಅದ್ದೂರಿಯಾಗಿ ನಡೆಯಲಿದೆ. “SIIMA” 2022 ಪ್ರಶಸ್ತಿ ಪ್ರದಾನ ಸಮಾರಂಭವನ್ನು ಬೆಂಗಳೂರಿನಲ್ಲಿ ನಡೆಸಲು ಖುಷಿಯಾಗುತ್ತಿದೆ. ಇದು ಹತ್ತನೇ ವರ್ಷದ ಪ್ರಶಸ್ತಿ ಸಮಾರಂಭ ಕೂಡ. ಬೆಂಗಳೂರಿನಲ್ಲಿ “ಸೈಮಾ” ಅವಾರ್ಡ್ಸ್ ನಡೆಸಲು ಎರಡು ಪ್ರಮುಖ ಕಾರಣಗಳಿದೆ. ಒಂದು ನಮ್ಮೆಲ್ಲರ ನೆಚ್ಚಿನ ನಟ ಪವರ್ ಸ್ಟಾರ್ […]readmore
