ವಿನಯ್ ರಾಜಕುಮಾರ್ ಅಭಿನಯದ ‘ಗ್ರಾಮಾಯಣ’ ಚಿತ್ರಕ್ಕೆ ಚಾಲನೆ | Gramayana

ಜಿ.ಮನೋಹರನ್ ಹಾಗೂ ಕೆ.ಪಿ ಶ್ರೀಕಾಂತ್ ನಿರ್ಮಾಣದ, ದೇವನೂರು ಚಂದ್ರು ನಿರ್ದೇಶನದ ಹಾಗೂ ವಿನಯ್ ರಾಜಕುಮಾರ್ ನಾಯಕರಾಗಿ ನಟಿಸುತ್ತಿರುವ “ಗ್ರಾಮಾಯಣ” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚಿಗೆ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ನೆರವೇರಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ರಿಯಲ್ ಸ್ಟಾರ್ ಉಪೇಂದ್ರ ಆರಂಭ ಫಲಕ ತೋರಿದರು. ಅಶ್ವಿನಿ ಪುನೀತ್ ರಾಜಕುಮಾರ್ ಕ್ಯಾಮೆರಾ ಚಾಲನೆ ಮಾಡಿದರು. ರಾಘವೇಂದ್ರ ರಾಜಕುಮಾರ್, ಮಂಗಳ ರಾಘವೇಂದ್ರ ರಾಜಕುಮಾರ್, ದುನಿಯಾ ವಿಜಯ್, ಧ್ರುವ ಸರ್ಜಾ, ರಾಜ್ ಬಿ ಶೆಟ್ಟಿ, ಆರ್ ಚಂದ್ರು, ಪವನ್ ಒಡೆಯರ್, ಸಿಂಪಲ್ ಸುನಿ […]readmore

ಸಕ್ಸಸ್ ಖುಷಿಯಲ್ಲಿ ‘ಡೇರ್ ಡೆವಿಲ್ ಮುಸ್ತಾಫಾ’…ಅಮೋಘ ಪ್ರದರ್ಶನ ಕಾಣ್ತಿದೆ ಪೂಚಂತೇ ಕಥೆಯಾಧಾರಿತ ಸಿನಿಮಾ

ಕಂಟೆಂಟ್ ಆಧಾರಿತ ಒಳ್ಳೆ ಸಿನಿಮಾಗಳನ್ನು ಕನ್ನಡಪ್ರೇಕ್ಷಕ ಪ್ರಭು ಯಾವತ್ತು ಕೈ ಬಿಡೋದಿಲ್ಲ ಎಂಬ ನಂಬಿಕೆ ಗಾಂಧಿನಗರದಲ್ಲಿದೆ. ಇದು ಡೇರ್ ಡೆವಿಲ್ ಮುಸ್ತಾಫಾ ಸಿನಿಮಾ ವಿಚಾರದಲ್ಲಿ ಪ್ರೋವ್ ಆಗಿದೆ. ಖ್ಯಾತ ಸಾಹಿತಿ ಪೂರ್ಣಚಂದ್ರ ತೇಜಸ್ವಿ ಕಥೆಯಾಧಾರಿತ ಸಿನಿಮಾವಾಗಿರುವ ಡೇರ್ ಡೆವಿಲ್ ಮುಸ್ತಾಫಾ ಭರಪೂರ ಮೆಚ್ಚುಗೆ ಪಡೆದುಕೊಳ್ಳುತ್ತಿದೆ. ಸಿನಿಮಾ ಪ್ರೇಮಿಗಳಿಂದ ಹಾಗೂ ವಿಮರ್ಷಕರಿಂದಲೂ ಅಪ್ಪುಗೆ ಪಡೆದಿರುವ ಹೃದಯ ಬೆಸೆಯುವ ಕಥೆ ಯಶಸ್ವಿಯಾಗಿ ಮೂರನೇ ವಾರ ಪ್ರದರ್ಶನ ಕಂಡಿದೆ. ಇದೇ ಖುಷಿಯಲ್ಲಿ ಚಿತ್ರತಂಡ ಯಶಸ್ವಿ ಕಾರ್ಯಕ್ರಮ ಆಯೋಜಿಸಿತ್ತು. ಕೇಕ್ ಕಟ್ ಮಾಡಿ […]readmore

Dhoomam Trailer | ಹೊಂಬಾಳೆ ಫಿಲಂಸ್ ನಿರ್ಮಾಣದ ‘ಧೂಮಂ’ ಚಿತ್ರದ ಟ್ರೇಲರ್ ಬಿಡುಗಡೆ

ಕನ್ನಡದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆಯಾದ ಹೊಂಬಾಳೆ ಫಿಲಂಸ್, ‘ಧೂಮಂ’ ಎಂಬ ಚಿತ್ರವನ್ನು ನಿರ್ಮಿಸುವ ಮೂಲಕ ಮಲಯಾಳಂ ಚಿತ್ರರಂಗಕ್ಕೆ ಕಾಲಿಟ್ಟಿರುವುದು ಗೊತ್ತೇ ಇದೆ. ಈ ಚಿತ್ರವು ಜೂನ್ 23ಕ್ಕೆ ಬಿಡುಗಡೆಯಾಗುತ್ತಿದ್ದು, ಇತ್ತೀಚೆಗೆ ಟ್ರೇಲರ್ ಬಿಡುಗಡೆಯಾಗಿದೆ. ವಿಜಯ್ ಕಿರಗಂದೂರು ನಿರ್ಮಾಣದ, ‘ಲೂಸಿಯಾ’ ಮತ್ತು ‘ಯೂ ಟರ್ನ್’ ಖ್ಯಾತಿಯ ಪವನ್ ಕುಮಾರ್ ನಿರ್ದೇಶನ ಈ ಚಿತ್ರದಲ್ಲಿ ಫಹಾದ್ ಫಾಸಿಲ್, ಅಪರ್ಣ ಬಾಲಮುರಳಿ, ಅಚ್ಯುತ್ ಕುಮಾರ್, ರೋಶನ್ ಮ್ಯಾಥ್ಯೂ, ವಿನೀತ್ ರಾಧಾಕೃಷ್ಣನ್, ಅನು ಮೋಹನ್, ಜಾಯ್ ಮ್ಯಾಥ್ಯೂ, ನಂದು ಮುಂತಾದವರು ನಟಿಸಿದ್ದಾರೆ. ಪೂರ್ಣಚಂದ್ರ […]readmore

TV9 ಕನ್ನಡ ಶಿಕ್ಷಣ ಶೃಂಗಸಭೆ’2023 ಬೆಂಗಳೂರು, ಜೂನ್ 9, 10 ಮತ್ತು 11,

ಹುಬ್ಬಳ್ಳಿ ಮತ್ತು ಗುಲ್ಬರ್ಗಾದಲ್ಲಿ ಅಭೂತಪೂರ್ವ ಯಶಸ್ಸಿನ ನಂತರ. ಇದೀಗ ಬೆಂಗಳೂರಿಗೆ ಸರದಿ, TV9 ಕನ್ನಡ ಶಿಕ್ಷಣ ಶೃಂಗಸಭೆ’2023- ಬೆಂಗಳೂರು, ಜೂನ್ 9, 10 ಮತ್ತು 11, 2023 ರಂದು ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ನಡೆಯಲಿರುವ 6 ನೇ ಆವೃತ್ತಿಯಾಗಿದೆ. ಈ ಅನನ್ಯ ಎಕ್ಸ್‌ಪೋ ವಿದ್ಯಾರ್ಥಿಗಳನ್ನು ಒಂದು ಹೆಜ್ಜೆ ಹತ್ತಿರಕ್ಕೆ ಕೊಂಡೊಯ್ಯುತ್ತದೆ. ಅವರ ಕನಸುಗಳ ಕಾಲೇಜುಗಳು ಮತ್ತು ಕೋರ್ಸ್‌ಗಳು. ಈವೆಂಟ್‌ನಲ್ಲಿ ವಿಶ್ವವಿದ್ಯಾನಿಲಯಗಳೆಂದು ಪರಿಗಣಿಸಲ್ಪಟ್ಟಿರುವ ಹೆಚ್ಚಿನ ಇಂಜಿನಿಯರಿಂಗ್ ಕಾಲೇಜುಗಳು, ಖಾಸಗಿ ವಿಶ್ವವಿದ್ಯಾಲಯಗಳು, M e d i c a […]readmore

ಬಂಗಾಳ ಕೊಲ್ಲಿಯಲ್ಲಿ 3.9 ತೀವ್ರತೆಯ ಭೂಕಂಪ

ಇಂದು ಬೆಳಗ್ಗೆ ಬಂಗಾಳ ಕೊಲ್ಲಿಯಲ್ಲಿ ರಿಕ್ಟರ್ ಮಾಪಕದಲ್ಲಿ 3.9 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ತಿಳಿಸಿದೆ. ಸೋಮವಾರ ಬೆಳಗ್ಗೆ(05-06-2023) 7:40 ಕ್ಕೆ ಬಂಗಾಳ ಕೊಲ್ಲಿಯಲ್ಲಿ ಭೂಮಿಯಿಂದ 10 ಕಿಮೀ ಆಳದಲ್ಲಿ 3.9 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು NCS ಟ್ವೀಟ್ ಮಾಡಿದೆ. ಭೂಕಂಪದಿಂದಾದ ಹಾನಿಯ ಬಗ್ಗೆ ಇಲ್ಲಿಯವರೆಗೆ ಇನ್ನೂ ಯಾವುದೇ ವರದಿಯಾಗಿಲ್ಲ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ ಎಂದು ಸಂಸ್ಥೆ ತಿಳಿಸಿದೆ.readmore

“ರುದ್ರ ಗರುಡ ಪುರಾಣ”ದಲ್ಲಿ ಪೊಲೀಸ್ ಅಧಿಕಾರಿಯಾದ ರಿಷಿ . ನೂತನ ಚಿತ್ರದ ಶೀರ್ಷಿಕೆ

“ಆಪರೇಶನ್ ಅಲಮೇಲ್ಲಮ್ಮ”, “ಕವಲುದಾರಿ” ಮುಂತಾದ ಚಿತ್ರಗಳ ಮೂಲಕ ಮನೆಮಾತಾಗಿರುವ ನಟ ರಿಷಿ ನಾಯಕರಾಗಿ ನಟಿಸುತ್ತಿರುವ, ಕೆ.ಎಸ್ ನಂದೀಶ್ ನಿರ್ದೇಶನದ ನೂತನ ಚಿತ್ರದ ಮುಹೂರ್ತ ಸಮಾರಂಭ ಹಾಗೂ ಶೀರ್ಷಿಕೆ ಅನಾವರಣ ಕಾರಂಜಿ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ನೆರವೇರಿತು. ನಟ ನೀನಾಸಂ ಸತೀಶ್ ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು ಹಾಗೂ ಶೀರ್ಷಿಕೆ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. “ರುದ್ರ ಗರುಡ ಪುರಾಣ” ಎಂದು ಚಿತ್ರಕ್ಕೆ ಹೆಸರಿಡಲಾಗಿದೆ. “ಚಂಬಲ್”, ” ಡಿಯರ್ ವಿಕ್ರಮ್” ಚಿತ್ರಗಳು ಸೇರಿದಂತೆ ಕೆಲವು ಚಿತ್ರಗಳನ್ನು […]readmore

ಹಾಲಿವುಡ್ ನಿರ್ದೇಶಕನ ಕನ್ನಡ ಸಿನಿಮಾ ‘ರೋಡ್ ಕಿಂಗ್’ ಜೂನ್ 23ಕ್ಕೆ ಬಿಡುಗಡೆಯಾಗಲಿದೆ

ಮತೀನ್ ಹುಸೇನ್ ಅಭಿನಯದ ‘ರೋಡ್ ಕಿಂಗ್’ ಚಿತ್ರವು ಇದೇ ತಿಂಗಳ 23ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ವಿಶೇಷವೆಂದರೆ, Randy Kent ಎಂಬ ಹಾಲಿವುಡ್ ನಿರ್ದೇಕರು ಈ ಚಿತ್ರವನ್ನು ನಿರ್ದೇಶಸಿದ್ದಾರೆ. ‘ರೋಡ್ ಕಿಂಗ್’ ಚಿತ್ರದ ನಾಯಕ ಮತ್ತು ನಿರ್ಮಾಪಕರೂ ಆಗಿರುವ ಮತೀನ್ ಹುಸೇನ್, ಮೂಲತಃ ಬೆಂಗಳೂರಿನವರಾದರೂ ಬೆಳೆದಿದ್ದೆಲ್ಲಾ ಅಮೇರಿಕಾದಲ್ಲಿ. ಕೋಲಾರದಲ್ಲಿ ನಡೆದ ನೈಜ ಘಟನೆ ಆಧರಿಸಿ ಒಂದು ಸಣ್ಣ ಬಜೆಟ್ನ ಚಿತ್ರ ಮಾಡುವುದಕ್ಕೆ ಹೊರಟಾಗ, ಸೂಕ್ತ ನಿರ್ದೇಶಕರು ಸಿಗಲಿಲ್ಲವಂತೆ. ಆಗ ಅವರಿಗೆ ನೆನಪಾಗಿದ್ದೇ ರಾಂಡಿ ಕೆಂಟ್. ಮತೀನ್ ಮತ್ತು ರಾಂಡಿ […]readmore

ಜೆ.ಕೆ ಅಭಿನಯದ “ಐರಾವನ್” ಜೂನ್ 16 ರಂದು ಬಿಡುಗಡೆ

ಕಿರುತೆರೆ ಹಾಗೂ ಹಿರಿತೆರೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ನಟ ಜೆ‌.ಕೆ ನಾಯಕರಾಗಿ ನಟಿಸಿರುವ “ಐರಾವನ್” ಚಿತ್ರ ಇದೇ ಜೂನ್ ಹದಿನಾರರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಚಿತ್ರದ ಕುರಿತು ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ನಾನು ಮೂಲತಃ ವೈದ್ಯ. ಕೋವಿಡ್ ಸಮಯದಲ್ಲಿ ನಿರ್ದೇಶಕ ರಾಮ್ಸ್ ರಂಗ ಈ ಚಿತ್ರದ ಕಥೆ ಹೇಳಿದರು. ಕಥೆ ಇಷ್ಟವಾಯಿತು. ಆ ಸಮಯದಲ್ಲಿ ಚಿತ್ರರಂಗದ ಬಹುತೇಕರು ಸಂಕಷ್ಟದಲ್ಲಿದ್ದರು. ಈ ಸಂದರ್ಭದಲ್ಲಿ ನಾನು ಸಿನಿಮಾ ನಿರ್ಮಾಣ ಮಾಡಿದರೆ ಅನೇಕ ಜನರಿಗೆ ಅನುಕೂಲವಾಗುತ್ತದೆ ಎಂಬ […]readmore

ಕೇಳುಗರ ಮನ ಗೆಲ್ಲುತ್ತಿದೆ “ಮೆಲೋಡಿ ಡ್ರಾಮ”.ದ ಹಾಡು .

ಪ್ರೈಮ್ ಸ್ಟಾರ್ ಸ್ಟುಡಿಯೋ ಲಾಂಛನದಲ್ಲಿ ಎಂ.ನಂಜುಂಡ ರೆಡ್ಡಿ ಅವರು ನಿರ್ಮಿಸಿರುವ, ಮಂಜು ಕಾರ್ತಿಕ್ ನಿರ್ದೇಶನದ “ಮೆಲೋಡಿ ಡ್ರಾಮ” ಚಿತ್ರಕ್ಕಾಗಿ ಹೃದಯ ಶಿವ ಬರೆದಿರುವ “ಯಾರು ಬರೆಯದ ಕವಿತೆ” ಎಂಬ ಹಾಡು ಇತ್ತೀಚೆಗೆ ಬಿಡುಗಡೆಯಾಗಿ, ಜನಮನಸೂರೆಗೊಳ್ಳುತ್ತಿದೆ. ಈಗಾಗಲೇ ಒಂದು ಮಿಲಿಯನ್ ಗೂ ಅಧಿಕ ವೀಕ್ಷಣೆಯಾಗಿ ಮುನ್ನುಗುತ್ತಿದೆ. ಕಿರಣ್ ರವೀಂದ್ರನಾಥ್ ಸಂಗೀತ ನೀಡಿರುವ ಈ ಹಾಡನ್ನು ಪಲಾಕ್ ಮುಚ್ಚಲ್ ಹಾಗೂ ವರುಣ್ ಪ್ರದೀಪ್ ಹಾಡಿದ್ದಾರೆ.   ಚಿತ್ರದ ಮೊದಲ ಹಾಡು ಇದಾಗಿದ್ದು, ಒಟ್ಟು ಏಳು ಹಾಡುಗಳು ಈ ಚಿತ್ರದಲ್ಲಿದೆ. ಸೋನು […]readmore

“ಘೋಸ್ಟ್‌” ಚಿತ್ರದ ಸೆಟ್ ನಲ್ಲಿ ಸಚಿವ ಮಧು ಬಂಗಾರಪ್ಪ.

ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ, ರಾಷ್ಟ್ರಪ್ರಶಸ್ತಿ ವಿಜೇತ ಸಂದೇಶ್ ನಾಗರಾಜ್ (MLC) ಅರ್ಪಿಸುವ, ಸಂದೇಶ್ ಎನ್ ನಿರ್ಮಿಸುತ್ತಿರುವ ಹಾಗೂ ಶ್ರೀನಿ ನಿರ್ದೇಶನದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ಅಭಿನಯಿಸುತ್ತಿರುವ “ಘೋಸ್ಟ್‌” ಚಿತ್ರದ ಚಿತ್ರೀಕರಣ ಚಾಮರಾಜಪೇಟೆ ಪೊಲೀಸ್ ಮೈದಾನದಲ್ಲಿ ನಿರ್ಮಿಸಲಾಗಿರುವ ಅದ್ದೂರಿ ಸೆಟ್ ನಲ್ಲಿ ನಡೆಯುತ್ತಿದೆ.   ಚಿತ್ರೀಕರಣ ನಡೆಯುತ್ತಿರುವ ಸ್ಥಳಕ್ಕೆ ನೂತನ ಸಚಿವರಾದ ಮಧು ಬಂಗಾರಪ್ಪ ಭೇಟಿ ನೀಡಿದ್ದಾರೆ. ಚಿತ್ರತಂಡದವರ ಜೊತೆ ಸ್ವಲ್ಪ ಸಮಯ ಮಾತುಕತೆ ನಡೆಸಿದ್ದ ಸಚಿವರು ಚಿತ್ರ ಯಶಸ್ವಿಯಾಗಲಿ ಎಂದು ಹಾರೈಸಿದ್ದಾರೆ.  readmore

Phone icon
Call Now
Reach us!
WhatsApp icon
Chat Now