• December 22, 2025

T20 ವಿಶ್ವಕಪ್ ನಿಂದ ಬುಮ್ರಾ ಔಟ್: ಹೇಳಿಕೆ ಬಿಡುಗಡೆ ಮಾಡಿದ BCCI

ನವದೆಹಲಿ: 2022ರ ಐಸಿಸಿ ಟಿ20 ವಿಶ್ವಕಪ್ ನಿಂದ ಟೀಂ ಇಂಡಿಯಾದ ಸ್ಟಾರ್ ಆಟಗಾರ ಜಸ್ಪ್ರೀತ್ ಬುಮ್ರಾ ಹೊರಗುಳಿದಿದ್ದಾರೆ. ಈ ಮೂಲಕ ಆಸ್ಟ್ರೇಲಿಯದಲ್ಲಿ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್‌ ಆರಂಭಕ್ಕೂ ಮುನ್ನ ಟೀಂ ಇಂಡಿಯಾ ಭಾರೀ ಹಿನ್ನಡೆ ಅನುಭವಿಸಿದೆ. ಕಳೆದ ಕೆಲವು ದಿನಗಳಿಂದ ಈ ಕುರಿತು ಸುದ್ದಿ ಹರಿದಾಡುತ್ತಿದ್ದು ಇದೀಗ ಬಿಸಿಸಿಐ ಹೇಳಿಕೆ ಬಿಡುಗಡೆ ಮಾಡುವ ಮೂಲಕ ಊಹಾಪೋಹಗಳಿಗೆ ತೆರೆ ಎಳೆದಿದೆ. ಜಸ್ಪ್ರೀತ್ ಬುಮ್ರಾ ಹೊರಗುಳಿದಿರುವ ಬಗ್ಗೆ ಟ್ವೀಟ್ ಮಾಡಿರುವ ಬಿಸಿಸಿಐ, “ಬಿಸಿಸಿಐ ವೈದ್ಯಕೀಯ ತಂಡವು ಸಮಾಲೋಚಿಸಿ ನಿರ್ಧಾರ ತೆಗೆದುಕೊಂಡಿದ್ದು, ಐಸಿಸಿ ಟಿ 20 ವಿಶ್ವಕಪ್​ನಿಂದ ಜಸ್ಪ್ರೀತ್ ಬುಮ್ರಾ ಅವರನ್ನು ಕೈಬಿಡಲು ನಿರ್ಧರಿಸಲಾಗಿದೆ ಎಂದು ಬರೆದುಕೊಂಡಿದೆ.  ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಅಭ್ಯಾಸದ ವೇಳೆ ಜಸ್ಪ್ರೀತ್ ಬುಮ್ರಾಗೆ ಬೆನ್ನು ನೋವು ಕಾಣಿಸಿಕೊಂಡಿತ್ತು. ಹೀಗಾಗಿ ಸ್ಕ್ಯಾನಿಂಗ್ ಒಳಗಾಗಿದ್ದು ಈ ವೇಳೆ ಬುಮ್ರಾ ಬೆನ್ನು ಮೂಳೆ ಮುರಿತಕ್ಕೊಳಗಾಗಿದ್ದಾರೆ ಎಂಬ ಅರದಿ ಬಂದಿತ್ತು. ಇದರಿಂದ ಸೌತ್ ಆಫ್ರಿಕಾ ವಿರುದ್ದಧ ಟಿ20 ಸರಣಿಯಿಂದ ಬುಮ್ರಾ ಹೊರಬಿದ್ದಿದ್ದಾರೆ. ಜಸ್ಪ್ರೀತ್ ಬುಮ್ರಾ ಅವರಿಗೆ ಗಾಯದಿಂದ ಚೇತರಿಸಿಕೊಳ್ಳಲು ಹೆಚ್ಚಿನ ವಾರಗಳ ವಿಶ್ರಾಂತಿ ಅಗತ್ಯವಿರುವ ಕಾರಣ ಜಸ್ಪ್ರೀತ್ ಬುಮ್ರಾ ಪ್ರತಿಷ್ಠಿತ ಟಿ20 ವಿಶ್ವಕಪ್ ಟೂರ್ನಿಯಿಂದಲೂ ಹೊರಬಿದ್ದಿದ್ದಾರೆ. ರವೀಂದ್ರ ಜಡೇಜಾ ಬಳಿಕ ಟಿ20 ವಿಶ್ವಕಪ್ ಟೂರ್ನಿಯಿಂದ ಹೊರಬಿದ್ದ ಎರಡನೇ ಪ್ರಮುಖ ಕ್ರಿಕೆಟಿಗ ಜಸ್ಪ್ರೀತ್ ಬುಮ್ರಾ ಆಗಿದ್ದಾರೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now