• March 14, 2026

ಭೂತಕೋಲ ಹಿಂದೂ ಸಂಸ್ಕೃತಿಯಲ್ಲ: ನಟ ಚೇತನ್ ಕುಮಾರ್

ರಿಷಬ್‌ ಶೆಟ್ಟಿ ನಟನೆಯ ಕಾಂತಾರ ಸಿನಿಮಾ ದೇಶ-ವಿದೇಶಗಳಲ್ಲಿ ಭರ್ಜರಿ ಪ್ರದರ್ಶನ ಕಾಣ್ತಿದೆ. ಚಿತ್ರ ಬಿಡುಗಡೆ ಆಗಿ ಮೂರು ವಾರ ಕಳೆದಿದ್ದರು ಸಾಕಷ್ಟು ಕಡೆಗಳಲ್ಲಿ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ.  ಇದೀಗ ಚಿತ್ರದ ಕುರಿತು ಪ್ರತಿಕ್ರಿಯಿಸಿರುವ ನಟ ಚೇತನ್ ಅಹಿಂಸಾ ಭೂತಕೋಲವು ಹಿಂದೂ ಸಂಸ್ಕೃತಿಯಲ್ಲ ಎಂದಿದ್ದಾರೆ. ಕರಾವಳಿಯ ಪ್ರಮುಖ ದೈವವಾದ ಭೂತಕೋಲ ಹಾಗು ದೈವಗಳ ಆರಾಧನೆಯ ಕುರಿತಾಗಿ ಕಾಂತಾರ ಸಿನಿಮಾ ರೆಡಿಯಾಗಿದೆ. ಇದರ ಕುರಿತು ಸಾಕಷ್ಟು ಚರ್ಚೆ ಹಾಗೂ ವಿಮರ್ಶೆಗಳು ನಡೆಯತ್ತಿದೆ. ಭೂತ ಕೋಲ ಹಿಂದೂ ಸಂಸ್ಕೃತಿ ಎಂದು ನಿರ್ದೇಶಕ ರಿಷಬ್ ಶೆಟ್ಟಿ ಹೇಳಿಕೆಯನ್ನು ನಟ ಚೇತನ್ ಕುಮಾರ್ ತಳ್ಳಿ ಹಾಕಿದ್ದಾರೆ. ನಮ್ಮ ಕನ್ನಡದ ಚಲನಚಿತ್ರ `ಕಾಂತಾರ’ವು ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿರುವುದು ಖುಷಿಯ ಸಂಗತಿ. ಭೂತಕೋಲವು ಹಿಂದೂ ಸಂಸ್ಕೃತಿಗೆ ಸೇರುತ್ತದೆ ಎಂದು ನಿರ್ದೇಶಕ ರಿಷಬ್ ಶೆಟ್ಟಿಯವರು ಹೇಳಿದ್ದಾರೆ. ಇದು ನಿಜವಲ್ಲ. ನಮ್ಮ ಪಂಬದ, ನಲಿಕೆ, ಪರವರ ಬಹುಜನ ಸಂಪ್ರದಾಯಗಳು, ವೈದಿಕ-ಬ್ರಾಹ್ಮಣ್ಯದ ಹಿಂದೂ ಧರ್ಮಕ್ಕಿಂತ ಹಿಂದಿನವು. ಮೂಲನಿವಾಸಿ ಸಂಸ್ಕೃತಿಗಳನ್ನು ಪರದೆಯ ಮೇಲೆಯಾಗಲಿ, ಅದರಾಚೆಯಾಗಲಿ, ಸತ್ಯ ಸಂಗತಿಗಳೊಂದಿಗೆ ತೋರಿಸಬೇಕೆಂದು ನಾವು ಕೇಳುತ್ತೇವೆ ಎಂದು ತಮ್ಮ ಟ್ವೀಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಇನ್ನೂ ಕಾಂತಾರ ಸಿನಿಮಾಗೆ ಪರಭಾಷೆಯ ಸ್ಟಾರ್ ಕಲಾವಿದರು ಮನಸೋತಿದ್ದಾರೆ. ನಟ ಪ್ರಭಾಸ್, ಅನುಷ್ಕಾ ಶೆಟ್ಟಿ, ಶಿಲ್ಪಾ ಶೆಟ್ಟಿ ಸೇರಿದಂತೆ ಸಾಕಷ್ಟು ಮಂದಿ ಕಾಂತಾರ ಚಿತ್ರದ ಕುರಿತಾಗಿ ಮೆಚ್ಚುಗೆಯ ಮಾತನಾಡಿದ್ದಾರೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now