ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಮಿಸೆಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ನಿವೇದಿತಾ ಗೌಡ
ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟೀವ್ ಆಗಿರುವ ನಿವೇದಿತಾ ಗೌಡ ಅಭಿಮಾನಿಗಳ ಜೊತೆ ಅಪ್ ಡೇಟ್ ಗಳನ್ನ ಶೇರ್ ಮಾಡುತ್ತಿರುತ್ತಾರೆ. ರೀಲ್ಸ್ ಗಳನ್ನು ಮಾಡುತ್ತಲೇ ಪ್ರೇಕ್ಷಕರಿಗೆ ಮತ್ತಷ್ಟು ಹತ್ತಿರವಾದ ನಿವೇದಿತಾ ಮಿಸೆಸ್ ಇಂಡಿಯಾ ಆಗಲು ನಡೆಸುತ್ತಿದ್ದ ತಯಾರಿಗಳ ಬಗ್ಗೆಯೂ ಅಭಿಮಾನಿಗಳೊಂದಿಗೆ ವಿಡಿಯೋ ಮೂಲಕ ಹಂಚಿಕೊಂಡಿದ್ದರು. ಇದೀಗ ನಿವೇದಿತಾ ಗೌಡ ಮಿಸೆಸ್ ಇಂಡಿಯಾ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ.
ಮಿಸೆಸ್ ಇಂಡಿಯಾ ಆಗಿರುವ ಬಗ್ಗೆ ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಮಾಡಿದ ನಿವೇದಿತಾ ಗೌಡ ತಂಡ, ಕೊನೆಗೂ ಜನರ ಹೃದಯವನ್ನು ಗೆದ್ದು ಅವರಿಗೆ ಇಷ್ಟವಾಗುವಂತೆ ಮಾಡುವುದು ನಿಜವಾದ ಸಾಧನೆ, ಅಲ್ಲವೇ? ಮಿಸೆಸ್ ಇಂಡಿಯಾ ಇಂಕ್‍ನ ಪೀಪಲ್ಸ್ ಚಾಯ್ಸ್ 2022 ರ ವಿಜೇತರಾದ ಶ್ರೀಮತಿ ನಿವೇದಿತಾ ಗೌಡ ಅವರು ನಮ್ರತೆಯಿಂದ ಲಕ್ಷಾಂತರ ಹೃದಯಗಳನ್ನು ಗೆದ್ದಿದ್ದಾರೆ ಎಂದು ಬರೆದು ಪೋಸ್ಟ್ ಮಾಡಿದ್ದಾರೆ
