ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ನಟಿ, ಬಿಜೆಪಿ ನಾಯಕಿ ಸೋನಾಲಿ ಫೋಗಟ್ ಹೃದಯಾಘಾತದಿಂದ ನಿಧನ
ಹರಿಯಾಣದ ಫತೇಹಾಬಾದ್‌ನ ಭೂತಾನ್ ಗ್ರಾಮದಲ್ಲಿ ಮಧ್ಯಮ ವರ್ಗದ ಕುಟುಂಬದಲ್ಲಿ ಹುಟ್ಟಿ ಬೆಳೆದ ಸೋನಾಲಿ ಫೋಗಟ್ ಆರಂಭದಲ್ಲಿ ಟಿವಿ ಆ್ಯಂಕರ್ ಆಗಿ ಗುರುತಿಸಿಕೊಂಡಿದ್ದರು. ಬಳಿಕ ಕಿರುತೆರೆಯಲ್ಲಿ ಕಾಣಿಸಿಕೊಂಡು ಆನಂತರ ರಾಜಕೀಯಕ್ಕೆ ಎಂಟ್ರಿಕೊಟ್ಟಿದ್ದರು. 2019 ರ ವಿಧಾನಸಭಾ ಚುನಾವಣೆಯಲ್ಲಿ ಹರಿಯಾಣದಿಂದ ಆದಂಪುರ ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ನಲ್ಲಿ ಕುಲದೀಪ್ ಬಿಷ್ಣೋಯ್ ವಿರುದ್ಧ ಸ್ಪರ್ಧಿಸಿದ್ದರು.
ಚುನಾವಣೆಯಲ್ಲಿ ಕುಲದೀಪ್ ವಿರುದ್ಧ ಸೋತರೂ ಸೋನಾಲಿ ಫೋಗಟ್ ಅವರ ಜನಪ್ರಿಯತೆ ಕಡಿಮೆಯಾಗಿರಲಿಲ್ಲ. ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಖ್ಯಾತಿ ಘಳಿಸಿದ್ದ ಪೋಗಟ್, ಆದಂಪುರ ಮಾತ್ರವಲ್ಲದೆ ಇಡೀ ರಾಜ್ಯಾದ್ಯಂತ ಫಾಲೋವರ್ಗಳನ್ನು ಹೊಂದಿದ್ದರು. ಕುಲದೀಪ್ ಬಿಷ್ಣೋಯ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಈಗ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಕಳೆದ ವಾರವಷ್ಟೇ ಸೋನಾಲಿ ಅವರನ್ನು ಭೇಟಿಯಾಗಿದ್ದರು. ಹೀಗಾಗಿ ಮುಂಬರುವ ಆದಂಪುರ್ ಉಪಚುನಾವಣೆಯಲ್ಲಿ ಸೋನಾಲಿ ಬಿಜೆಪಿಯಿಂದ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗಿತ್ತು.
2020ರಲ್ಲಿ ಹರಿಯಾಣದ ಹಿಸಾರ್‌ನಲ್ಲಿ ಸಾರ್ವಜನಿಕವಾಗಿ ಅಧಿಕಾರಿಯೊಬ್ಬರನ್ನು ಥಳಿಸಿ ಸೋನಾಲಿ ಸಾಕಷ್ಟು ಸುದ್ದಿಯಾಗಿದ್ದರು. ಸೋನಾಲಿ ಫೋಗಟ್ ತನ್ನ ಪಾದರಕ್ಷೆಯಿಂದ ವ್ಯಕ್ತಿಯನ್ನು ಹೊಡೆಯುತ್ತಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಸದ್ದು ಮಾಡಿತ್ತು.
ಟಿಕ್‌ಟಾಕ್‌ನಲ್ಲಿ ಹೆಚ್ಚಿನ ಫಾಲೋವರ್ಗಳನ್ನು ಹೊಂದಿದ್ದ ಸೋನಾಲಿ ಫೋಗಟ್ ಬಿಗ್ ಬಾಸ್ 14 ರ ಸ್ಪರ್ಧಿಯಾಗಿ ವೈಲ್ಡ್ ಕಾರ್ಡ್ ಎಂಟ್ರಿ ಪಡೆದಿದ್ದರು
