• March 14, 2026

‘ಬ್ರಹ್ಮಾಸ್ತ್ರ’ಚಿತ್ರದಲ್ಲಿ ರಣಬೀರ್ ತಾಯಿ ಪಾತ್ರ ಮಾಡಿದ ರಣಬೀರ್ ಮಾಜಿ ಪ್ರೇಯಸಿ: ವೈರಲ್ ಆಯ್ತು ಫೋಟೋ

ಆಲಿಯಾ ಭಟ್ ಹಾಗೂ ರಣಬೀರ್ ಕಪೂರ್ ನಟನೆಯ ಬ್ರಹ್ಮಾಸ್ತ್ರ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿದೆ.ಬಾಯ್ಕಾಟ್ ನಡುವೆಯೂ ತೆರೆಗೆ ಬಂದ ಬ್ರಹ್ಮಾಸ್ತ್ರ ಕೋಟಿ ಕೋಟಿ ಲೂಟಿ ಮಾಡುತ್ತಿದ್ದು ಇದರಿಂದ ಇಡೀ ಚಿತ್ರತಂಡ ಸಖತ್ ಖುಷಿಯಲ್ಲಿದೆ. ರಿಯಲ್ ಲೈಫ್ ನಲ್ಲಿ ಜೋಡಿಯಾಗಿರೋ ಆಲಿಯಾ ಹಾಗೂ ರಣಬೀರ್ ನನ್ನು ತೆರೆ ಮೇಲೆ ನೋಡಿದ ಪ್ರೇಕ್ಷಕರು ಕ್ಲೀನ್ ಬೋಲ್ಡ್ ಆಗಿದ್ದಾರೆ. ಇದೀಗ ಚಿತ್ರದ ಬಗ್ಗೆ ಮತ್ತೊಂದು ಇಂಟ್ರೆಸ್ಟಿಂಗ್ ನ್ಯೂಸ್ ಸಿಕ್ಕಿದೆ. ಇದೇ ಮೊದಲ ಭಾರಿಗೆ ಆಲಿಯಾ ಹಾಗೂ ರಣಬೀರ್ ಸ್ಕ್ರೀನ್ ನಲ್ಲಿ ಒಂದಾಗಿದ್ದಾರೆ.ಹೀಗಾಗಿ ಈ ಜೋಡಿಗಳನ್ನು ತೆರೆ ಮೇಲೆ ನೋಡಿದ ಪ್ರೇಕ್ಷಕರು ಮುದ್ದಾದ ಜೋಡಿಯನ್ನು ಮೆಚ್ಚಿಕೊಂಡಿದ್ದಾರೆ. ಅಲ್ಲದೆ ಚಿತ್ರದ ಮತ್ತೊಂದು ಪಾತ್ರದ ಕುರಿತಾಗಿ ಸೋಷಿಯಲ್ ಮೀಡಿಯಾದಲ್ಲಿ ಚರ್ಚೆ ಶುರುವಾಗಿದೆ. ಅದೇನೆಂದರೆ ರಣಬೀರ್ ಕಪೂರ್ ತಾಯಿಯ ಪಾತ್ರದಲ್ಲಿ ರಣಬೀರ್ ಮಾಜಿ ಪ್ರೇಯಸಿ ದೀಪಿಕಾ ಪಡುಕೋಣೆ ಬಣ್ಣ ಹಚ್ಚಿದ್ದಾರೆ ಅನ್ನೋದು. ಬ್ರಹ್ಮಾಸ್ತ್ರ ಸಿನಿಮಾದಲ್ಲಿ ಚಿಕ್ಕ ವಯಸ್ಸಿನಲ್ಲೇ ತಾಯಿಯನ್ನು ಕಳೆದುಕೊಂಡ ಶಿವ ಎಂಬ ಪಾತ್ರದಲ್ಲಿ ರಣಬೀರ್ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದ ದೃಶ್ಯವೊಂದಲ್ಲಿ ದೀಪಿಕಾ ಪಡುಕೋಣೆ ಮಗುವೊಂದನ್ನು ಹಿಡಿದುಕೊಂಡು ಕಾಣಿಸಿಕೊಂಡಿದ್ದಾರೆ. ಹೀಗಾಗಿ ಈ ಸಿನಿಮಾದಲ್ಲಿ ದೀಪಿಕಾ ರಣಬೀರ್ ಕಪೂರ್ ತಾಯಿಯಾಗಿ ಕಾಣಿಸಿಕೊಂಡಿದ್ದಾರೆ ಎಂಬ ಮಾಹಿತಿ ಹೊರ ಬಿದ್ದಿದೆ. ಸದ್ಯ ಈ ಪೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ರಣ್‌ಬೀರ್ ಕಪೂರ್ ಮತ್ತು ಆಲಿಯಾ ಭಟ್ ನಟನೆಯ `ಬ್ರಹ್ಮಾಸ್ತ್ರ’ ಚಿತ್ರಕ್ಕೆ ಸಾಕಷ್ಟು ಅಡೆತಡೆ ಎದುರಾಗಿದ್ದರು ಬ್ರಹ್ಮಾಸ್ತ್ರ ಎಲ್ಲವನ್ನು ಮೆಟ್ಟಿ ನಿಂತಿದೆ. ರಿಲೀಸ್ ಆದ ಎರಡೇ ದಿನಕ್ಕೆ ಚಿತ್ರ 160 ಕೋಟಿ ಕಲೆಕ್ಷನ್ ಮಾಡಿದೆ. ಚಿತ್ರದ ಕಥೆ ಮತ್ತು ಸಂಭಾಷಣೆಗೆ ವಿಮರ್ಶಕರು ಮಿಶ್ರ ಪ್ರತಿಕ್ರಿಯೆ ನೀಡಿದ್ದಾರೆ. ಹಿಂದೂ ಪುರಾಣವನ್ನು ಫ್ಯಾಂಟಸಿ ಅಂಶಗಳೊಂದಿಗೆ ಬೆರೆಸುವ ನಿರ್ದೇಶಕ ಅಯನ್ ಮುಖರ್ಜಿ ಅವರ ದೃಷ್ಟಿಕೋನವನ್ನು ಹಲವರು ಶ್ಲಾಘಿಸಿದ್ದಾರೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now