• February 10, 2026

ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ರಾಜೀನಾಮೆ

ಬ್ರಿಟನ್ ಸರ್ಕಾರದಲ್ಲಿನ ಸಚಿವರು ಒಬ್ಬೊಬ್ಬರೆ ರಾಜೀನಾಮೆ ನೀಡಿ ಹೊರ ನಡೆಯುತ್ತಿದ್ದಂತೆ, ಪ್ರಧಾನಿ ಬೋರಿಸ್ ಜಾನ್ಸನ್ ಅವರ ಸ್ಥಾನಕ್ಕೆ ಕಂಟಕ ಎದುರಾಗಿತ್ತು. ಹಗರಣದ ಸುಳಿಯಲ್ಲಿ ಸಿಲುಕಿದ್ದ ಜಾನ್ಸನ್ ರಾಜೀನಾಮೆಗೆ ಎಲ್ಲ ಕಡೆಯಿಂದಲೂ ಒತ್ತಡ ಶುರುವಾಗಿತ್ತು. ಮೊದಲು ರಾಜೀನಾಮೆ ನೀಡುವುದಿಲ್ಲ ಎಂದು ಪಟ್ಟು ಹಿಡಿದಿದ್ದ ಬೋರಿಸ್ ಜಾನ್ಸನ್ ಕೊನೆಗೂ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ. ಬ್ರಿಟನ್ ಸರ್ಕಾರದಲ್ಲಿ ಕಳೆದ 48 ಗಂಟೆಗಳಲ್ಲಿ 5 ಕ್ಯಾಬಿನೆಟ್ ಸಚಿವರು ಅಧಿಕಾರಿಗಳು ಸೇರಿದಂತೆ 40ಕ್ಕೂ ಹೆಚ್ಚು ಮಂದಿ ರಾಜೀನಾಮೆ ನೀಡಿದ ಬೆನ್ನಲ್ಲೇ ಬೋರಿಸ್ ಜಾನ್ಸನ್ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಒಂದು ದಿನದ ಹಿಂದಷ್ಟೇ ಬ್ರಿಟನ್ ಸರ್ಕಾರವನ್ನು ಉಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಸಚಿವರಾದ ರಿಷಿ ಸುನಕ್ ಮತ್ತು ಸಾಜಿದ್ ಜಾವಿದ್ ಕೂಡ ಜಾನ್ಸ್ನ್ ಕೂಡ ಬೋರಿಸ್ ಜಾನ್ಸನ್ ಸರ್ಕಾರದಿಂದ ಹೊರ ನಡೆದಿದ್ದರು. ಶಿಕ್ಷಣ ಇಲಾಖೆಯ ಕಿರಿಯ ಕಾರ್ಯದರ್ಶಿ ಅಲೆಕ್ಸ್ ಬರ್ಗರ್ಟ್ ಜಾನ್ ಗ್ಲೇನ್, ಭದ್ರತಾ ಕಾರ್ಯದರ್ಶಿ ರಾಚೆಲ್ ಮೆಕ್ಲೀನ್, ರಫ್ತು ಸಚಿವ ಮೈಕ್ ಫ್ರೀರ್, ವಸತಿ ಮತ್ತು ಸಮುದಾಯಗಳ ಜೂನಿಯರ್ ಸಚಿವ ನೀಲ್ ಒಬ್ರೇನ್ ಸೇರಿ 40ಕ್ಕೂ ಹೆಚ್ಚು ಸಚಿವರು ಅವಿಶ್ವಾಸ ವ್ಯಕ್ತಪಡಿಸಿದ್ದರು. ರಾಜೀನಾಮೆ ನೀಡುವಂತೆ ಸಾಕಷ್ಟು ಒತ್ತಡ ಕೇಳಿ ಬಂದ ಹಿನ್ನೆಲೆಯಲ್ಲಿ ಬೋರಿಸ್ ಜಾನ್ಸನ್ ಈ ನಿರ್ಧಾರ ಕೈಗೊಂಡಿದ್ದಾರೆ. ಇಂದು ದೇಶವನ್ನೂದ್ದೇಶಿಸಿ ಮಾತನಾಡಿದ ಅವರು, ಕನ್ಸರ್ವೇಟಿವ್ ಪಕ್ಷದ ಸಚಿವರು ಮತ್ತು ಸಹೋದ್ಯೋಗಿಗಳು ರಾಜೀನಾಮೆ ನೀಡಬೇಕು ಎಂದು ಕೇಳಿದ್ದರಿಂದ ನಾನು ಬ್ರಿಟನ್ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದೇನೆ ಎಂದಿದ್ದಾರೆ. ನಾನು ಅಧಿಕಾರದ ಅವಧಿ ಪೂರ್ಣಗೊಳಿಸದೇ ಹೋಗುತ್ತಿರುವುದಕ್ಕೆ ನೋವಿದೆ. ಗುಂಪಿನ ಶಕ್ತಿಯು ಪ್ರಭಾವಶಾಲಿಯಾಗಿದ್ದು ರಾಜಕೀಯದಲ್ಲಿ ಯಾರೊಬ್ಬರೂ ಅನಿವಾರ್ಯವಲ್ಲ. ಮುಂದಿನ ಪ್ರಧಾನಿ ಬರುವವರೆಗೆ ಈ ಸ್ಥಾನದಲ್ಲಿ ಮುಂದುವರಿಯುತ್ತೇನೆ ಎಂದು ಹೇಳಿದ ಅವರು ಕುಟುಂಬ ಮತ್ತು ವ್ಯವಹಾರದ ಹೊರೆಯನ್ನು ಕಡಿಮೆ ಮಾಡಲಿರುವ ಮುಂದಿನ ಪ್ರಧಾನಿಗೆ ನನ್ನ ಪೂರ್ಣ ಬೆಂಬಲವಿದೆ ಎಂದರು.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now