ದಕ್ಷಿಣ ಭಾರತದ ನಂಬರ್ 1 ಸಿನಿಮಾ ಪ್ರಚಾರ ಕಂಪನಿಯಾಗಿ ಹೊರಹೊಮ್ಮಿರುವ ಶ್ರೇಯಸ್ ಮೀಡಿಯಾ ಭಾರತದಲ್ಲಿ ತನ್ನ ಶಾಖೆಯನ್ನು ವಿಸ್ತರಿಸುತ್ತಿದೆ. ಹೈದ್ರಾಬಾದ್ ನಲ್ಲಿ ಯಶಸ್ವಿ ಕಾರ್ಯಕ್ರಮಗಳನ್ನು ಕೊಟ್ಟಿರುವ ಶ್ರೇಯಸ್ ಕಂಪನಿ, ಶ್ರೇಯಸ್ ಲೈವ್ ನಡಿ ಇದೀಗ ಬೆಂಗಳೂರಿನಲ್ಲಿಯೂ ಹೊಸ ವೆಂಚರ್ ಪ್ರಾರಂಭ ಮಾಡಿದೆ. ಸಿಲಿಕಾನ್ ಸಿಟಿಯಲ್ಲಿ ನಿನ್ನೆ ಶುಭಾರಂಭಗೊಂಡ ಶ್ರೇಯಸ್ ಮೀಡಿಯಾದ ಹೊಸ ಶಾಖೆಯನ್ನು ತೆಲುಗಿನ ಖ್ಯಾತ ನಿರ್ದೇಶಕ ಮಾರುತಿ ಉದ್ಘಾಟಿಸಿದರು. Biz-Bash ಸಹಯೋಗದೊಂದಿಗೆ ಶ್ರೇಯಸ್ ಕೆಲಸಕ್ಕೆ ಸಾಥ್ ಕೊಟ್ಟಿದೆ. ಬಳಿಕ ಮಾತನಾಡಿದ ನಿರ್ದೇಶಕ ಮಾರುತಿ, ಕಳೆದ 20 […]readmore
ರಾಯ್ಸ್ ಎಂಟರ್ ಟೈನ್ಮೆಂಟ್ ಲಾಂಛನದಲ್ಲಿ ಕೆ.ವಿ.ಶಶಿಧರ್ ನಿರ್ಮಿಸುತ್ತಿರುವ, ಕೆ.ಎಂ.ರಘು ನಿರ್ದೇಶನದಲ್ಲಿ ಶ್ರೀ ಹಾಗೂ ಪ್ರಣತಿ ನಾಯಕ- ನಾಯಕಿಯಾಗಿ ನಟಿಸಿರುವ “ಜಸ್ಟ್ ಪಾಸ್” ಚಿತ್ರದ ಟೀಸರ್ A2 music ಮೂಲಕ ಬಿಡುಗಡೆಯಾಗಿ, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಜನಮನಸೂರೆಗೊಳ್ಳುತ್ತಿದೆ. ಈ ವಿಷಯವನ್ನು ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಹಂಚಿಕೊಂಡರು. ನಾನು ನಮ್ಮಊರಿನ ಜಾತ್ರೆಗೆ ಹೋಗಿದಾಗ ನನ್ನ ಸ್ನೇಹಿತರೊಬ್ಬರು ಫೋನ್ ಮಾಡಿ ಮೈಸೂರಿನಲ್ಲಿ ನಿರ್ಮಾಪಕ ಶಶಿಧರ್ ಇದ್ದಾರೆ. ಅವರು ಚಿತ್ರ ನಿರ್ಮಾಣ ಮಾಡಲು ಹೊರಟಿದ್ದಾರೆ. ಕಥೆ ಹೇಳಬೇಕು ಬಾ ಎಂದರು. ನಾನು ಶಶಿಧರ್ […]readmore
ತಮಿಳಿನ ಖ್ಯಾತ ನಟ ಸೂರ್ಯ ಹಾಗೂ ನಿರ್ದೇಶಕಿ ಸುಧಾ ಕೊಂಗರ ಮತ್ತೊಮ್ಮೆ ಕೈ ಜೋಡಿಸಿದ್ದಾರೆ. ಕನ್ನಡಿಗ ಕ್ಯಾಪ್ಟನ್ ಗೋಪಿನಾಥ್ ಜೀವನ ಆಧಾರಿತ ಸಿನಿಮಾ ಸೂರರೈ ಪೋಟ್ರು ಮೂಲಕ ಸಂಚಲನ ಸೃಷ್ಟಿಸಿದ್ದ ಈ ಜೋಡಿ ಮಗದೊಮ್ಮೆ ಒಂದಾಗಿದ್ದಾರೆ. ಸೂರ್ಯ ನಟಿಸಲಿರುವ 43ನೇ ಸಿನಿಮಾಗೆ ಸುಧಾ ಕೊಂಗರ ಆಕ್ಷನ್ ಕಟ್ ಹೇಳ್ತಿದ್ದಾರೆ. ಸೂರರೈ ಪೋಟ್ರು ಸಿನಿಮಾ ಪ್ರೇಕ್ಷಕರು ಹಾಗೂ ವಿಮರ್ಷಕರಿಂದಲೂ ಭಾರೀ ಮೆಚ್ಚುಗೆ ಪಡೆದುಕೊಂಡಿತ್ತು. ಆಸ್ಕರ್ ರೇಸ್ ಗೂ ಇಳಿದಿದ್ದ ಈ ಚಿತ್ರ ಹಲವು ವಿಭಾಗದಲ್ಲಿ ರಾಷ್ಟ್ರಪ್ರಶಸ್ತಿ ಬಾಚಿಕೊಂಡಿತ್ತು. ಅತ್ಯುತ್ತಮ […]readmore
ವಿಜಯ್ ದೇವರಕೊಂಡ ಹಾಗೂ ಸಮಂತಾ ನಟನೆಯ ‘ಖುಷಿ’ ಸಿನಿಮಾದ ಟ್ರೈಲರ್ ಬಿಡುಗಡೆಯಾಗಿದೆ. ಕಾಶ್ಮೀರಕ್ಕೆ ಹೋಗುವ ಕ್ರಿಶ್ಚಿಯನ್ ಯುವಕ ವಿಪ್ಲವ್ ಹಾಗೂ ಮುಸ್ಲಿಂ ಯುವತಿ ಬೇಗಂ ಭೇಟಿಯಾಗುತ್ತದೆ. ಆಕೆಯನ್ನು ನೋಡಿ ನಾಯಕ ಪ್ರೀತಿಯಲ್ಲಿ ಬೀಳುತ್ತಾನೆ. ನಂತರ ಆಕೆ ಮುಸ್ಲಿಂ ಅಲ್ಲ ಬ್ರಾಹ್ಮಣ ಕುಟುಂಬದ ಯುವತಿ ಅನ್ನೋದು ಗೊತ್ತಾಗುತ್ತದೆ. ಅಂದರೆ ಇದು ಕ್ರಿಶ್ಚಿಯನ್ ಯುವಕ ಹಾಗೂ ಹಿಂದೂ ಯುವತಿಯ ಪ್ರೇಮಕಥೆ ಅನ್ನೋದು ಅರ್ಥವಾಗುತ್ತದೆ. ಇಬ್ಬರ ಮನೆಯಲ್ಲೂ ಮದುವೆಗೆ ಒಪ್ಪುವುದಿಲ್ಲ. ನಾಯಕಿಯ ತಂದೆಯಂತೂ ಇವರಿಬ್ಬರು ಮದುವೆ ಆದರೆ ಭಾರೀ ಸಮಸ್ಯೆಗಳಾಗುತ್ತದೆ ಎಂದು […]readmore
ಉದ್ಯಮ ವಲಯದಲ್ಲಿ ಭಾರೀ ಹೆಸರು ಮಾಡಿರುವ ನನ್ಬನ್ ಗ್ರೂಪ್ ಮನರಂಜನಾ ಲೋಕಕ್ಕೆ ಹೊಸ ಹೆಜ್ಜೆ ಇಟ್ಟಿದೆ. ನನ್ಬನ್ ಗ್ರೂಪ್ ವತಿಯಿಂದ ನನ್ಬನ್ ಎಂಟರ್ಟೈನ್ಮೆಂಟ್ ಎಂಬ ನಿರ್ಮಾಣ ಸಂಸ್ಥೆ ಪ್ರಾರಂಭವಾಗಿದೆ. ಆಗಸ್ಟ್ 3ರಂದು ಚೆನ್ನೈನಲ್ಲಿ ಅದ್ಧೂರಿಯಾಗಿ ನನ್ಬನ್ ಎಂಟರ್ಟೈನ್ಮೆಂಟ್ ಉದ್ಘಾಟನಾ ಕಾರ್ಯಕ್ರಮ ನೆರವೇರಿತು. ನನ್ಬನ್ ಗ್ರೂಪ್ ಮುಖ್ಯಸ್ಥ ನರೈನ್ ರಾಮಸ್ವಾಮಿ, ನನ್ಬನ್ ಗ್ರೂಪ್ ಸಹ ಸಂಸ್ಥಾಪಕ ಮಣಿವಣ್ಣನ್, ನನ್ಬನ್ ಗ್ರೂಪ್ ಸಂಸ್ಥಾಪಕ ಗೋಪಾಲ ಕೃಷ್ಣನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ನನ್ಬನ್ ಗ್ರೂಪ್ ಭಾರತದ ರಾಯಭಾರಿ ನಟ ಆರಿ ಅರ್ಜುನನ್ […]readmore
ಈಗಂತೂ ಪ್ಯಾನ್ ಇಂಡಿಯಾ ಸಿನಿಮಾಗಳ ಟ್ರೆಂಡ್ ಜೋರಾಗಿದೆ. ಎಲ್ಲಾ ವುಡ್ ಗಳಲ್ಲಿಯೂ ಸಾಲು ಸಾಲು ಪ್ಯಾನ್ ಇಂಡಿಯಾ ಚಿತ್ರಗಳು ಅನೌನ್ಸ್ ಆಗುತ್ತಲೇ ಇದೆ. ಅದರ ಮುಂದುವರೆದ ಭಾಗವಾಗಿ ತೆಲುಗಿನಲ್ಲಿ ಸ್ಪಾರ್ಕ್ ಲೈಫ್ ಎಂಬ ಸಿನಿಮಾ ತಯಾರಾಗ್ತಿದ್ದು, ಈ ಚಿತ್ರದ ಟೀಸರ್ ಬಿಡುಗಡೆಯಾಗಿದೆ. 2 ನಿಮಿಷ 2 ಸೆಕೆಂಡ್ ಒರುವ ಟೀಸರ್ ಕಂಪ್ಲೀಟ್ ಆಕ್ಷನ್ಸ್ ಗಳಿಂದ ಕೂಡಿದೆ. ಯುವ ಪ್ರತಿಭೆ ವಿಕ್ರಾಂತ್ ನಾಯಕನಾಗಿ ನಟಿಸಿದ್ದು, ಮೆಹ್ರೀನ್ ಫಿರ್ಜಾದಾ ಹಾಗೂ ರುಕ್ಸಾರ್ ಧಿಲ್ಲೋನ್ ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ. ಧಗಧಗಿಸುವ ಬೆಂಕಿ, […]readmore
ಉಸ್ತಾದ್ ರಾಮ್ ಪೋತಿನೇನಿ ಹಾಗೂ ಬೋಯಾಪಾಟಿ ಶ್ರೀನು ಕಾಂಬಿನೇಷನ್ ಮಾಸ್ ಆಕ್ಷನ್ ಎಂಟರ್ ಟೈನರ್ ಸ್ಕಂದ ಸಿನಿಮಾದ ಮೊದಲ ಹಾಡು ಬಿಡುಗಡೆಯಾಗಿದೆ. ನಿನ್ ಸುತ್ತ ಸುತ್ತ ತಿರುಗಿದೆ ಎಂಬ ಗಾನಬಜಾನಕ್ಕೆ ವರದರಾಜು ಚಿಕ್ಕಬಳ್ಳಾಪುರ ಸಾಹಿತ್ಯ ಬರೆದಿದ್ದು, ಸಂತೋಷ್ ವೆಂಕಿ ಹಾಗೂ ಶ್ರೀನಿಧಿ ತಿರುಮಲ ಕಂಠ ಕುಣಿಸಿದ್ದಾರೆ. ಎಸ್ ಎಸ್ ತಮನ್ ಟ್ಯೂನ್, ರಾಮ್ ಎನರ್ಜಿ, ಶ್ರೀಲೀಲಾ ಗ್ಲಾಮರ್ ರಂಗು, ಅದ್ಧೂರಿ ಸೆಟ್ ಹಾಡಿನ ಶ್ರೀಮಂತಿಕೆಯನ್ನು ಹೆಚ್ಚಿಸಿದೆ. ಐದು ಭಾಷೆಯಲ್ಲಿಯೂ ಸ್ಕಂದ ಹಾಡು ಬಿಡುಗಡೆಯಾಗಿದೆ. ಲವರ್ ಬಾಯ್ […]readmore
ರಾಘವ್ ಲಾರೆನ್ಸ್ ಹಾಗೂ ಕಂಗನಾ ರಾಣಾವತ್ ನಟನೆಯ ಬಹುನಿರೀಕ್ಷಿತ ಚಂದ್ರಮುಖಿ-2 ಸಿನಿಮಾ ಬಿಡುಗಡೆಗೆ ಹೊಸ್ತಿಲಿನಲ್ಲಿ ನಿಂತಿದೆ. ಗಣೇಶ್ ಚತುರ್ಥಿಗೆ ಬೆಳ್ಳಿತೆರೆಗೆ ಎಂಟ್ರಿ ಕೊಡ್ತಿರುವ ಈ ಚಿತ್ರದ ಫಸ್ಟ್ ಲುಕ್ ರಿಲೀಸ್ ಆಗಿದೆ. ಸೂಪರ್ ಸ್ಟಾರ್ ರಜನಿಕಾಂತ್ ಫಸ್ಟ್ ಲುಕ್ ರಿವೀಲ್ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿರುವ ರಾಘವ್ ಲಾರೆನ್ಸ್, ವೆಟ್ಟೈಯನ್ ರಾಜನ ಫಸ್ಟ್ ಲುಕ್ ಬಿಡುಗಡೆ ಮಾಡಿದ ತಲೈವರ್ ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ನಿಮಗೆ ಧನ್ಯವಾದಗಳು. ನಿಮ್ಮ […]readmore
ಭಾರತದ ಬೃಹತ್ ಆಕ್ಷನ್ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಖ್ಯಾತ ನಟ ಮೋಹನ್ ಲಾಲ್ ಅಭಿನಯದ ‘ವೃಷಭ’ ಎಂಬ ಪ್ಯಾನ್ ಇಂಡಿಯಾ ಚಿತ್ರದ ಚಿತ್ರೀಕರಣ ಕಳೆದ ಭಾನುವಾರದಿಂದ ಪ್ರಾರಂಭವಾಗಿದೆ. ‘ವೃಷಭ’ ಚಿತ್ರದಲ್ಲಿ ಮೈ ಜುಂ ಎನಿಸುವಂತಹ ಆಕ್ಷನ್ ಮತ್ತು ರೋಚಕ ದೃಶ್ಯಗಳು ಇರಲಿದ್ದು, ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್ ಜೊತೆಗೆ ರೋಶನ್ ಮೇಕಾ, ಶನಾಯ ಕಪೂರ್, ಝಾರಾ ಖಾನ್, ಶ್ರೀಕಾಂತ್ ಮೇಕಾ ಮುಂತಾದವರು ನಟಿಸುತ್ತಿದ್ದಾರೆ. ಕನ್ನಡದ ರಾಗಿಣಿ ದ್ವಿವೇದಿ ಸಹ ಈ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ […]readmore
ತಮ್ಮ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ “ಬುದ್ದಿವಂತ 2” ಚಿತ್ರ ಯಾವಾಗ ಬಿಡುಗಡೆಯಾಗಬಹುದು? ಎಂಬ ಕುತೂಹಲ ಅಭಿಮಾನಿಗಳಲ್ಲಿ ಮನೆಮಾಡಿತ್ತು. ಈಗ ಆ ಕುತೂಹಲಕ್ಕೆ ತೆರೆ ಬಿದ್ದಿದೆ. ಬಹು ನಿರೀಕ್ಷಿತ ಈ ಚಿತ್ರ ಸೆಪ್ಟೆಂಬರ್ 15 ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ವಿಡಿಯೋ ತುಣುಕೊಂದರ(ಗ್ಲಿಂಪ್ಸ್) ಮೂಲಕ ಚಿತ್ರತಂಡ “ಬುದ್ದಿವಂತ 2” ಚಿತ್ರದ ಬಿಡುಗಡೆ ದಿನಾಂಕ ಘೋಷಣೆ ಮಾಡಿದೆ. “ಬುದ್ದಿವಂತ” ಎಂದೇ ಜನಪ್ರಿಯರಾಗಿರುವ ಉಪೇಂದ್ರ ಅವರ ಹುಟ್ಟುಹಬ್ಬ ಸೆಪ್ಟೆಂಬರ್ 18 […]readmore
