ತೆಲುಗು ಚಿತ್ರರಂಗದ ಖ್ಯಾತ ನಟ ಹಾಗೂ ಜನ ಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ ಫುಲ್ ಗರಂ ಆಗಿದ್ದಾರೆ. ವೇದಿಕೆ ಮೇಲೆ ನಿಂತೂ ತಮ್ಮನ್ನು ಪ್ಯಾಕೇಜ್ ಸ್ಟಾರ್ ಎಂದು ಟೀಕಿಸಿದವರಿಗೆ ಚಪ್ಪಲಿಯಲ್ಲಿ ಹೊಡೆಯುತ್ತೇನೆ ಎಂದು ಬೆದರಿಕೆ ಹಾಕಿದ್ದಾರೆ. ಗುಂಟೂರಿನಲ್ಲಿ ಕಾರ್ಯಕ್ರಮವೊಂದಕ್ಕೆ ಹೋಗಿದ್ದ ಪವನ್ ಕಲ್ಯಾಣ್ ವೇದಿಕೆಯ ಮೇಲೆಯೇ ಕೈಯಲ್ಲಿ ಚಪ್ಪಲಿ ಹಿಡಿದು ನನ್ನನ್ನು ಪ್ಯಾಕೇಜ್ ಸ್ಟಾರ್ ಎಂದು ಅಣುಕಿಸುವವರಿಗೆ ಚಪ್ಪಲಿಯಲ್ಲಿ ಹೊಡೆಯುತ್ತೇನೆ ಎಂದಿದ್ದಾರೆ. ಪವನ್ ಕಲ್ಯಾಣ್ ಆಂಧ್ರಪ್ರದೇಶದಲ್ಲಿ ತೆಲುಗು ದೇಶಂ ಪಕ್ಷದೊಂದಿಗೆ ಕೈ ಜೋಡಿಸಿದ್ದಾರೆ ಎಂದು ಇತ್ತೀಚೆಗೆ […]readmore
ರಿಷಬ್ ಶೆಟ್ಟಿ ನಟನೆಯ ಕಾಂತಾರ ಸಿನಿಮಾ ದೇಶ-ವಿದೇಶಗಳಲ್ಲಿ ಭರ್ಜರಿ ಪ್ರದರ್ಶನ ಕಾಣ್ತಿದೆ. ಚಿತ್ರ ಬಿಡುಗಡೆ ಆಗಿ ಮೂರು ವಾರ ಕಳೆದಿದ್ದರು ಸಾಕಷ್ಟು ಕಡೆಗಳಲ್ಲಿ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಇದೀಗ ಚಿತ್ರದ ಕುರಿತು ಪ್ರತಿಕ್ರಿಯಿಸಿರುವ ನಟ ಚೇತನ್ ಅಹಿಂಸಾ ಭೂತಕೋಲವು ಹಿಂದೂ ಸಂಸ್ಕೃತಿಯಲ್ಲ ಎಂದಿದ್ದಾರೆ. ಕರಾವಳಿಯ ಪ್ರಮುಖ ದೈವವಾದ ಭೂತಕೋಲ ಹಾಗು ದೈವಗಳ ಆರಾಧನೆಯ ಕುರಿತಾಗಿ ಕಾಂತಾರ ಸಿನಿಮಾ ರೆಡಿಯಾಗಿದೆ. ಇದರ ಕುರಿತು ಸಾಕಷ್ಟು ಚರ್ಚೆ ಹಾಗೂ ವಿಮರ್ಶೆಗಳು ನಡೆಯತ್ತಿದೆ. ಭೂತ ಕೋಲ ಹಿಂದೂ ಸಂಸ್ಕೃತಿ ಎಂದು […]readmore
ಈಗ ಎಲ್ಲಿ ನೋಡಿದ್ರು ಕಾಂತಾರ ಸಿನಿಮಾದ್ದೆ ಸದ್ದು. ಕನ್ನಡದ ಜೊತೆಗೆ ಪರಭಾಷೆಯಲ್ಲೂ ಕಾಂತಾರದ ಬಗ್ಗೆ ದೊಡ್ಡ ಮಟ್ಟದಲ್ಲಿ ಚರ್ಚೆ ಹುಟ್ಟುಹಾಕಿದೆ. ಕಳೆದ ಮೂರು ವಾರಗಳ ಹಿಂದೆ ಬಿಡುಗಡೆಯಾದ ಕಾಂತಾರ ಬೇರೆಲ್ಲಾ ಸ್ಟಾರ್ ಕಲಾವಿಧರ ಸಿನಿಮಾಗಳನ್ನು ಹಿಂದಿಕ್ಕಿ ಸಿನಿಮಾ ಗೆದ್ದು ಬೀಗಿದೆ. ಕಥೆಯಲ್ಲಿ ಮಾತ್ರವಲ್ಲ ರಿಷಬ್ ಶೆಟ್ಟಿ ಪಾತ್ರಗಳ ಆಯ್ಕೆಯಲ್ಲೂ ಸೈ ಎನಿಸಿಕೊಂಡಿದ್ದಾರೆ. ಪಾತ್ರಕ್ಕೆ ಒಪ್ಪುವಂತ ಕಲಾವಿದರನ್ನೇ ಆಯ್ಕೆ ಮಾಡಿ ಪಾತ್ರಕ್ಕೆ ಮತ್ತಷ್ಟು ಬಲ ತಂದುಕೊಟ್ಟಿದ್ದಾರೆ. ನಟಿ ಸಪ್ತಮಿ ಗೌಡ ಲೀಲಾ ಪಾತ್ರದಲ್ಲಿ ನಟಿಸಿದ್ದು ತಮ್ಮ ಪಾತ್ರಕ್ಕೆ ನ್ಯಾಯ […]readmore
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಕೊನೆಯ ಹಾಗೂ ಕನಸಿನ ಸಿನಿಮಾ ಗಂಧದ ಗುಡಿ ರಿಲೀಸ್ ಗೆ ಇನ್ನೂ ಕೆಲವೇ ಕೆಲವು ದಿನಗಳು ಮಾತ್ರವೇ ಭಾಕಿ ಇದೆ. ಅಪ್ಪು ಚಿತ್ರವನ್ನು ಕಣ್ಮುಂಬಿಕೊಳ್ಳಲು ಅಭಿಮಾನಿಗಳು ಕಾಯ್ತಿದ್ದಾರೆ. ಅದಕ್ಕೂ ಮುನ್ನ ದೊಡ್ಮನೆ ಕುಟುಂಬ ಚಿತ್ರದ ಪ್ರೀರಿಲೀಸ್ ಕಾರ್ಯಕ್ರಮ ಹಮ್ಮಿಕೊಂಡಿದ್ದು ಡಾ.ರಾಜ್ ಕುಟುಂಬ ಅದಕ್ಕೆ ಭರ್ಜರಿ ತಯಾರಿ ನಡೆಸುತ್ತಿದೆ. ಗಂಧದ ಗುಡಿ ಸಿನಿಮಾ ಇದೇ ಅಕ್ಟೋಬರ್ 28ರಂದು ಬಿಡುಗಡೆ ಆಗಲಿದೆ. ಅದಕ್ಕೂ ಮೊದಲ ಬೆಂಗಳೂರಿನ ಅರಮನೆ ಮೈದಾನದಲ್ಲಿ ಚಿತ್ರದ ಪ್ರೀರಿಲೀಸ್ […]readmore
ಕಳೆದ ಮೂರು ದಿನಗಳ ಹಿಂದೆ ಹಿಂದಿಯ ಖ್ಯಾತ ಕಿರುತೆರೆ ನಟಿ ಹಾಗೂ ಮಾಜಿ ಬಿಗ್ ಬಾಸ್ ಸ್ಪರ್ಧಿ ವೈಶಾಲಿ ಠಕ್ಕರ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೊದಲು ಖಿನ್ನತೆಯಿಂದ ವೈಶಾಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿತ್ತು. ಆದರೆ ಇದೀಗ ವೈಶಾಲಿ ಡೆತ್ ನೋಟ್ ನಲ್ಲಿ ಆಕೆಗೆ ಕಿರುಕುಳ ನೀಡುತ್ತಿದ್ದ ವ್ಯಕ್ತಿಯ ಕುರಿತು ಬರೆದಿದ್ದಾರೆ. ನಟಿ ವೈಶಾಲಿ ಇಂದೋರ್ ನಲ್ಲಿರುವ ತಮ್ಮ ಅಪಾರ್ಟ್ ಮೆಂಟ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ದಾವಿಸಿದ್ದು ತನಿಖೆ ಕೈಗೊಂಡಿದ್ದರು. ಈ […]readmore
ಬಿಗ್ ಬಾಸ್ ಓಟಿಟಿಯಲ್ಲಿ ಸಖತ್ ಖ್ಯಾತಿ ಘಳಿಸಿ ಬಳಿಕ ಬಿಗ್ ಬಾಸ್ ಸೀಸನ್ 9ರಲ್ಲೂ ಪ್ರಣಯ ಪಕ್ಷಿಗಳಂತೆ ಹಾರಾಡುತ್ತಿರುವ ಸಾನ್ಯಾ ಹಾಗೂ ರೂಪೇಶ್ ಶೆಟ್ಟಿ ಮಧ್ಯೆ ಬಿರುಕು ಮೂಡಿದೆ. ಸದಾ ಕೈ ಕೈ ಹಿಡಿದು ಸುತ್ತಾಡುತ್ತಿದ್ದ ಜೋಡಿ ಹಕ್ಕಿಗಳು ಇದೀಗ ನಾನೊಂದು ತೀರಾ ನೀನೊಂದು ತೀರಾ ಅಂತಿದ್ದಾರೆ. ಇದಕ್ಕೆಲ್ಲಾ ಕಾರಣ ಸುದೀಪ್ ರ ಖಡಕ್ ವಾರ್ನಿಂಗ್. ರೂಪೇಶ್ ಹಾಗೂ ಸಾನ್ಯಾ ಬಿಗ್ ಬಾಸ್ ಓಟಿಟಿಯಲ್ಲಿ ಇದ್ದಷ್ಟು ದಿನವೂ ಸಖತ್ ಅನ್ಯೋನ್ಯವಾಗಿದ್ದರು. ಅದು ಟಿವಿ ಸೀಸನ್ ನಲ್ಲೂ ಮುಂದುವರೆದಿದೆ. […]readmore
ಆಕಾಶ ದೀಪ ಧಾರವಾಹಿ ಮೂಲಕ ಖ್ಯಾತಿ ಘಳಿಸಿ ತಮಿಳು ಕಿರುತೆರೆಯಲ್ಲಿ ಹೆಸರು ಮಾಡಿದ್ದ ನಟಿ ದಿವ್ಯಾ ಶ್ರೀಧರ್ ಹಾಗೂ ಅಮ್ಜಾದ್ ಖಾನ್ ಗಲಾಟೆ ಇದೀಗ ಬೀದಿಗೆ ಬಂದು ನಿಂತಿದೆ. ಸದ್ಯ ಅಮ್ಜಾದ್ ಖಾನ್ ನನ್ನು ಪೊಲೀಸರು ಬಂಧಿಸಿದ್ದು ಇದೀಗ ಕೇಸ್ ಗೆ ಮತ್ತೊಂದು ಬಿಗ್ ಟ್ವೀಸ್ಟ್ ಸಿಕ್ಕಿದೆ. ಈ ಸುದ್ದಿ ಕೇಳಿ ಸ್ವತಃ ದಿವ್ಯಾ ಶ್ರೀಧರ್ ಶಾಕ್ ಆಗಿದ್ದಾರೆ. ಅಮ್ಜಾದ್ ಖಾನ್ ಗೆ ಮಂಗಳ ಮುಖಿಯೊಂದಿಗೆ ಸಂಬಂಧ ಇತ್ತು ಎಂಬ ಆಡಿಯೋ ವೈರಲ್ ಆಗಿದೆ. ಈ ಬಗ್ಗೆ […]readmore
ಪವರ್ಸ್ಟಾರ್ ಪುನೀತ್ ರಾಜಕುಮಾರ್ ಕೋಟ್ಯಾಂತರ ಅಭಿಮಾನಿಗಳನ್ನು ಹೊಂದಿದ್ದಾರೆ. ಅಪ್ಪು ಹೆಸರಿಗೆ ಯಾವುದೇ ಚ್ಯುತಿ ಬಂದರು ಅವರು ಸಹಿಸಿಕೊಳ್ಳುವುದಿಲ್ಲ. ಅಂತೆಯೇ ಪುನೀತ್ ರಾಜ್ ಕುಮಾರ್ ಅವರಿಗೆ ಅವಮಾನ ಮಾಡಿದ ವ್ಯಕ್ತಿಯೋರ್ವ ಇದೀಗ ಕ್ಷಮೆ ಯಾಚಿಸಿದ್ದು ಮುಂದೆಂದೆ ಹೀಗೆ ಮಾಡುವುದಿಲ್ಲ ಎಂದು ಬೇಡಿಕೊಂಡಿದ್ದಾನೆ. ತಾನು ದರ್ಶನ್ ಅಭಿಮಾನಿ ಎಂದು ಹೇಳಿಕೊಂಡಿರುವ ವ್ಯಕ್ತಿಯೋರ್ವ ಪುನೀತ್ ಅವರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿ ವಿಡಿಯೋ ಮಾಡಿದ್ದ. ಬಳಿಕ ಆ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದ. ಈ ವಿಡಿಯೋ ವೈರಲ್ ಆಗಿ ಆತನ ವಿರುದ್ಧ ಅಪ್ಪು […]readmore
ಕಿರಿಕ್ ಪಾರ್ಟಿ ಬ್ಯೂಟಿ ನಟಿ ರಶ್ಮಿಕಾ ಮಂದಣ್ಣ ಸದ್ಯ ಬಹುಬೇಡಿಕೆಯ ನಟಿಯಾಗಿ ಖ್ಯಾತಿ ಘಳಿಸಿದ್ದಾರೆ. ದಕ್ಷಿಣ ಭಾರತದ ಸಿನಿಮಾಗಳ ಜೊತೆಗೆ ಬಾಲಿವುಡ್ ಚಿತ್ರರಂಗದಲ್ಲೂ ರಶ್ಮಿಕಾ ಖ್ಯಾತಿ ಘಳಿಸುತ್ತಿದ್ದಾರೆ. ಒಂದರ ಹಿಂದೊಂದರಂತೆ ಸಿನಿಮಾಗಳಲ್ಲಿ ನಟಿಸುತ್ತಿರುವ ರಶ್ಮಿಕಾರನ್ನು ಇದೀಗ ಸ್ಟಾರ್ ನಟನ ಸಿನಿಮಾದಿಂದ ಕೈ ಬಿಡಲಾಗಿದೆಯಂತೆ. ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್ ಸಿನಿಮಾ ದೇಶ, ವಿದೇಶದಲ್ಲೂ ಸಖತ್ ಸದ್ದು ಮಾಡಿತ್ತು. ಈ ಬೆನ್ನಲ್ಲೇ ತಮಿಳಿನಲ್ಲಿ ಕೆಜಿಎಫ್ ಕುರಿತಾದ ಮತ್ತೊಂದು ಸಿನಿಮಾ ತಯಾರಾಗುತ್ತಿದೆ. ಖ್ಯಾತ ನಿರ್ದೇಶಕ ಪಾ.ರಂಜಿತ್ ಕೆಜಿಎಫ್ ನ […]readmore
ಬಹುಭಾಷಾ ನಟಿ ಹನ್ಸಿಕಾ ಮೋಟ್ವಾನಿ ಹಸೆಮಣೆ ಏರಲು ಸಜ್ಜಾಗಿದ್ದಾರೆ. ದಕ್ಷಿಣ ಭಾರತದ ರಾಜಕೀಯ ನಾಯಕರೊಬ್ಬರ ಮಗನನ್ನು ವರಿಸಲು ಹನ್ಸಿಕಾ ರೆಡಿಯಾಗಿದ್ದು ಅದಕ್ಕಾಗಿ ತೆರೆ ಮರೆಯಲ್ಲಿ ಭರ್ಜರಿ ತಯಾರಿ ನಡೆಯುತ್ತಿದೆ. ಬಾಲನಟಿಯಾಗಿ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ಹನ್ಸಿಕಾ ಬಳಿಕ ಬಹುಭಾಷ ನಟಿಯಾಗಿ ಖ್ಯಾತಿ ಘಳಿಸಿದ್ದಾರೆ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಬಿಂದಾಸ್ ಸಿನಿಮಾದಲ್ಲಿ ನಟಿಸಿ ಕನ್ನಡಿಗರ ಮನಸ್ಸನ್ನು ಗೆದ್ದಿದ್ದರು. ಸದ್ಯ ಇದೀಗ ಹನ್ಸಿಕಾ ಗೃಹಸ್ಥಾಶ್ರಮಕ್ಕೆ ಕಾಲಿಡಲು ನಿರ್ಧರಿಸಿದ್ದು ಈ ಮೂಲಕ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ತಮಿಳು, […]readmore
