“ಮುದ್ದು ಮನಸ್ಸೆ” ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ ಅರುಣ್ ರಾಮ್ ಗೌಡ, ನಂತರ 3 ಗಂಟೆ 30 ದಿನ 30 ಸೆಕೆಂಡ್, ಪತಿ ಬೇಕು. ಕಾಮ್ ಹಾಗೂ ಪುನೀತ್ ರಾಜಕುಮಾರ್ ಅಭಿನಯದ ಯುವರತ್ನ ಚಿತ್ರಗಳಲ್ಲಿ ನಟಿಸಿದ್ದರು. ಕೆಲವು ವರ್ಷಗಳ ಬಳಿಕ ಅರುಣ್ ರಾಮ್ ಗೌಡ ಪ್ಯಾನ್ ಇಂಡಿಯಾ ಚಿತ್ರವೊಂದರ ಮೂಲಕ ಚಿತ್ರರಂಗಕ್ಕೆ ರೀ ಎಂಟ್ರಿ ಕೊಡುತ್ತಿದ್ದಾರೆ. ಅರುಣ್ ರಾಮ್ ಗೌಡ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದು, ಪ್ರಮುಖಪಾತ್ರದಲ್ಲೂ ನಟಿಸುತ್ತಿದ್ದಾರೆ. ಅರುಣ್ ರಾಮ್ ಗೌಡ ತಮ್ಮ ಹುಟ್ಟುಹಬ್ಬದ ದಿನ(ಜುಲೈ 7) […]readmore
ಭಾರತೀಯ ಚಿತ್ರರಂಗದ ದುಬಾರಿ ನಿರ್ಮಾಣ ಸಂಸ್ಥೆ ಎನಿಸಿಕೊಂಡಿರುವ ಲೈಕಾ ಮತ್ತೊಂದು ಹೊಸ ಸಿನಿಮಾ ಘೋಷಣೆ ಮಾಡಿದೆ. ಇಂಡಿಯನ್, ಖೈದಿ-150, ವಡಾ ಚೆನ್ನೈ, ದರ್ಬಾರ್, ಪೊನ್ನಿಯಿನ್ ಸೆಲ್ವನ್ ನಂತಹ ಸೂಪರ್ ಹಿಟ್ ಚಿತ್ರಗಳನ್ನು ನಿರ್ಮಿಸಿರುವ ಇಂಡಿಯನ್-2, ರಜನಿ ಜೊತೆ ಲಾಲ್ ಸಲಾಂ ಸೇರಿದಂತೆ ಹಲವು ಚಿತ್ರಗಳಿಗೆ ಹಣ ಸುರಿದಿರುವ ಸುಭಾಷ್ ಕರಣ್ ಈಗ ಸೆನ್ಸೇಷನಲ್ ಮೂವೀ 2018 ನಿರ್ದೇಶಕರ ಜೊತೆ ಕೈ ಜೋಡಿಸಿದ್ದಾರೆ. ಲೈಕಾ ಬರೀ ಸೂಪರ್ ಸ್ಟಾರ್ಸ್ ಸಿನಿಮಾಗಳನ್ನು ಮಾತ್ರವಲ್ಲ ಹೊಸ ಪ್ರತಿಭೆಗಳಿಗೂ ವೇದಿಕೆ ಕಲ್ಪಿಸಿಕೊಡುತ್ತಿದೆ. […]readmore
ಟಾಲಿವುಡ್ ನಟ ಕಲ್ಯಾಣ್ ರಾಮ್ ಅವರಿಗಿಂದು ಹುಟ್ಟುಹಬ್ಬದ ಸಂಭ್ರಮ. ಅವರ ಜನ್ಮದಿನದ ಉಡುಗೊರೆಯಾಗಿ ಡೆವಿಲ್ ಸಿನಿಮಾದ ಸಣ್ಣ ಗ್ಲಿಂಪ್ಸ್ ರಿಲೀಸ್ ಮಾಡಲಾಗಿದೆ. ಸದಾ ಹೊಸಬಗೆಯ ಕಥೆಗಳನ್ನು ಆಯ್ಕೆ ಮಾಡಿಕೊಳ್ಳುವ ಕಲ್ಯಾಣ್ ರಾಮ್ ಈ ಬಾರಿಯೂ ವಿಶಿಷ್ಟ ಕಥೆಯೊಂದಿಗೆ ಪ್ರೇಕ್ಷಕರನ್ನು ರಂಜಿಸಲು ರೆಡಿಯಾಗಿದ್ದಾರೆ. ಅದರ ಮುಂದುವರೆದ ಭಾಗವೇ ಡೆವಿಲ್. ಫಸ್ಟ್ ಲುಕ್ ಮೂಲಕ ನಿರೀಕ್ಷೆ ಹೆಚ್ಚಿಸಿದ್ದ ಡೆವಿಲ್ ಗ್ಲಿಂಪ್ಸ್ ಭಾರೀ ಸದ್ದು ಮಾಡುತ್ತಿದೆ. 1 ನಿಮಿಷ 2 ಸೆಕೆಂಡ್ ಇರುವ ಝಲಕ್ ನಲ್ಲಿ ಡೆವಿಲ್ ಸ್ವಾತಂತ್ರ್ಯ ಪೂರ್ವದ […]readmore
ಮರ್ಡರ್ ಮಿಸ್ಟ್ರಿ ಕ್ರೈಂ ಜೊತೆಗೆ ಇನ್ ವೆಸ್ಟಿಗೇಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರ 4 n 6. ಪರ್ಪಲ್ ಪ್ಯಾಚ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಸಾಯಿಪ್ರೀತಿ ಅವರು ನಿರ್ಮಾಣ ಮಾಡುತ್ತಿರುವ ಈ ಚಿತ್ರಕ್ಕೆ ಬೆಂಗಳೂರು ಸುತ್ತಮುತ್ತ 30 ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿದೆ, ಬಾಕಿ ಉಳಿದಿದ್ದ ವಿಶಿಷ್ಟ ಶೈಲಿಯ, ಆಂಗ್ಲ ಸಾಹಿತ್ಯವಿರುವ ಹಾಡನ್ನು ಚಿತ್ರೀಕರಿಸುವುದರೊಂದಿಗೆ ಕುಂಬಳಕಾಯಿ ಒಡೆಯಲಾಯಿತು, ಲವ್ ಮಾಕ್ಟೇಲ್ ಹಾಗೂ ಲವ್ 360 ಚಿತ್ರಗಳ ಖ್ಯಾತಿಯ ರಚನಾ ಇಂದರ್ ಹಾಗೂ ನವೀನ್ ಕುಮಾರ್ ಪ್ರಮುಖ ಪಾತ್ರಗಳಲ್ಲಿ […]readmore
“ಚಮಕ್”, ” ಅಯೋಗ್ಯ” ಸೇರಿದಂತೆ ಅನೇಕ ಸೂಪರ್ ಹಿಟ್ ಚಿತ್ರಗಳನ್ನು ನಿರ್ಮಾಣ ಮಾಡಿರುವ ಡಾ.ಟಿ.ಆರ್ ಚಂದ್ರಶೇಖರ್, ತಮ್ಮ ಕ್ರಿಸ್ಟಲ್ ಪಾರ್ಕ್ ಸಿನಿಮಾಸ್ ಲಾಂಛನದಲ್ಲಿ ಮತ್ತೊಂದು ಬಹುನಿರೀಕ್ಷಿತ ಚಿತ್ರ ಹಾಗೂ ತಮ್ಮ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನಗೆದ್ದಿರುವ ರಿಯಲ್ ಸ್ಟಾರ್ ಉಪೇಂದ್ರ ದ್ವಿಪಾತ್ರದಲ್ಲಿ ನಟಿಸಿರುವ ಚಿತ್ರ “ಬುದ್ದಿವಂತ 2”. ನಿರ್ಮಾಣ ಪೂರ್ಣ ಗೊಂಡಿದ್ದು ಇದೀಗ ಬಿಡುಗಡೆ ಸಮಯವನ್ನು ಚಿತ್ರದ ನಿರ್ಮಾಪಕರು ಬಹಿರಂಗಗೊಳಿಸಿದ್ದಾರೆ. ಈ ಬಾರಿಯ ಉಪೇಂದ್ರ ಅವರ ಹುಟ್ಟುಹಬ್ಬಕ್ಕೆ ಅವರ ಅಭಿಮಾನಿಗಳಿಗೆ ಉಡುಗೊರೆಯಾಗಿ ಚಿತ್ರವನ್ನು ಬೃಹತ್ ಪ್ರಮಾಣದಲ್ಲಿ […]readmore
ಈ ಹಿಂದೆ ಶ್ರೀಜಗನ್ನಾಥದಾಸರು ಎಂಬ ಚಿತ್ರ ನಿರ್ಮಾಣ ಮಾಡಿ, ನಿರ್ದೇಶಿಸಿದ್ದ ಮಧುಸೂದನ್ ಹವಾಲ್ದಾರ್, ಈಗ ಕರ್ನಾಟಕದ ಮತ್ತೊಬ್ಬ ಶ್ರೇಷ್ಠ ಹರಿದಾಸರಾದ ಶ್ರೀಪ್ರಸನ್ನವೆಂಕಟದಾಸರ ಕುರಿತಾದ ಚಿತ್ರವನ್ನು ಮಾತಾಂಬುಜ ಮೂವೀಸ್ ಲಾಂಛನದಲ್ಲಿ ನಿರ್ಮಾಣ ಮಾಡಿ, ನಿರ್ದೇಶನವನ್ನೂ ಮಾಡಿದ್ದಾರೆ. ಚಿತ್ರ ಜುಲೈ 7 ರಂದು ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಪತ್ರಿಕಾಗೋಷ್ಠಿ ಆಯೋಜಿಸಲಾಗಿತ್ತು. ಪ್ರಸನ್ನವೆಂಕಟದಾಸರ ವಂಶಸ್ಥರು ಹಾಗೂ ಜನಪ್ರಿಯ ಬರಹಗಾರರು ಆದ ರೇಖಾ ಕಾಖಂಡಕಿ ಅವರು ಬರೆದಿರುವ ಶ್ರೀಪ್ರಸನ್ನವೆಂಕಟದಾಸರ ಕುರಿತಾದ ಪುಸ್ತಕವನ್ನು ಆಧರಿಸಿ ಈ ಚಿತ್ರ ಮಾಡಿದ್ದೇನೆ. ಕಥೆ, ಚಿತ್ರಕಥೆ […]readmore
ಸಹಜ ಅಭಿನಯದ ಮೂಲಕ ಜನರ ಮನ ಗೆದ್ದಿರುವ ನಟ ಕೋಮಲ್ ಕುಮಾರ್ ನಾಯಕರಾಗಿ ನಟಿಸಿರುವ “ನಮೋ ಭೂತಾತ್ಮ 2 ” ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು. ನೃತ್ಯ ನಿರ್ದೇಶಕ ಮುರಳಿ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ನಟ ಧ್ರುವ ಸರ್ಜಾ ಟೀಸರ್ ಬಿಡುಗಡೆ ಮಾಡಿದರು. ಟೀಸರ್ ಬಿಡುಗಡೆ ಮಾಡಿ ಮಾತನಾಡಿದ ಧ್ರುವ ಸರ್ಜಾ, ನಾನು ಮೊದಲಿನಿಂದಲೂ ಕೋಮಲ್ ಅವರ ಅಭಿಮಾನಿ. ಅವರ ಅಭಿನಯದ ಎಲ್ಲಾ ಚಿತ್ರಗಳನ್ನು ನೋಡಿದ್ದೇನೆ. ಈ ಚಿತ್ರದ ಬಿಡುಗಡೆಗೂ ಕಾಯುತ್ತಿದ್ದೇನೆ. ಮುರಳಿ ಮಾಸ್ಟರ್ ಸಹ ನನ್ನ […]readmore
ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಪುಷ್ಪ-2 ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈ ಪ್ರಾಜೆಕ್ಟ್ ಹೊರತುಪಡಿಸಿ ಬನ್ನಿ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ ಒಪ್ಪಿಕೊಂಡಿದ್ದಾರೆ. ಅನಿಮಲ್ ಸಿನಿಮಾ ಖ್ಯಾತಿಯ ಸಂದೀಪ್ ರೆಡ್ಡಿ ವಂಗ ನಿರ್ದೇಶನದ ಟೀ-ಸೀರಿಸ್ ನಿರ್ಮಾಣ ಸಂಸ್ಥೆಯಲ್ಲಿ ಈ ಚಿತ್ರ ಮೂಡಿಬರಲಿದೆ. ಇದೀಗ ಅಲ್ಲು ಅರ್ಜುನ್ ತ್ರಿವಿಕ್ರಮ್ ಜೊತೆ ಕೈ ಜೋಡಿಸಿದ್ದಾರೆ. ಟಾಲಿವುಡ್ ಹಿಟ್ ಜೋಡಿ ಅಲ್ಲು ಅರ್ಜುನ್ ಹಾಗೂ ತ್ರಿವಿಕ್ರಮ್ ಮತ್ತೆ ಒಂದಾಗಿದ್ದಾರೆ. ‘ಜುಲಾಯಿ’, ‘ಸನ್ ಆಫ್ ಸತ್ಯಮೂರ್ತಿ’, ‘ಅಲ ವೈಕುಂಠಪುರಮುಲೋ’ ಸಿನಿಮಾಗಳಂತಹ ಮೆಗಾ ಬ್ಲಾಕ್ […]readmore
ಸೌತ್ ಸಿನಿ ದುನಿಯಾದ ಖ್ಯಾತ ನಿರ್ಮಾಣ ಸಂಸ್ಥೆ ಲೈಕಾ ಭತ್ತಳಿಕೆ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ ಚಂದ್ರಮುಖಿ-2 ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ. ಖ್ಯಾತ ನಿರ್ದೇಶಕ, ನಟ ಹಾಗೂ ಸ್ಟಾರ್ ಕೊರಿಯೋಗ್ರಾಫರ್ ರಾಘವ್ ಲಾರೆನ್ಸ್ ಹಾಗೂ ಬಾಲಿವುಡ್ ಬ್ಯೂಟಿ ಕಂಗನಾ ನಟನೆಯ ಈ ಚಿತ್ರ ಸೆಪ್ಟಂಬರ್ 19ರ ಗಣೇಶ್ ಚತುರ್ಥಿಗೆ ಸ್ಪೆಷಲ್ ಆಗಿ ವಿಶ್ವಾದ್ಯಂತ ತೆರೆಗಪ್ಪಳಿಸಲಿದೆ. ಖ್ಯಾತ ಹಿರಿಯ ನಿರ್ದೇಶಕ ಪಿ.ವಾಸು ನಿರ್ದೇಶನದ 65ನೇ ಚಿತ್ರ ಚಂದ್ರಮುಖ-2. 2005ರಲ್ಲಿ ಬಿಡುಗಡೆಯಾಗಿದ್ದ ಕ್ಲಾಸಿಕ್ ಸಿನಿಮಾ ಚಂದ್ರಮುಖಿ […]readmore
ಜುಲೈ 12, ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅವರ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಶಿವಣ್ಣ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ಘೋಸ್ಟ್” ಚಿತ್ರದ “BIG DADDY” ವಿಡಿಯೋ ಬಿಡುಗಡೆಯಾಗಲಿದೆ. “BIG DADDY” ವಿಡಿಯೋವನ್ನು ಅದ್ದೂರಿಯಾಗಿ ಬಿಡುಗಡೆ ಮಾಡಲು ನಿರ್ಮಾಪಕರು ನಿರ್ಧರಿಸಿದ್ದಾರೆ. ಕನ್ನಡ ಸೇರಿದಂತೆ ಮೂರು ಭಾಷೆಗಳಲ್ಲಿ ಈ ಚಿತ್ರ ಬರುತ್ತಿದೆ. ಈಗಾಗಲೇ ಈ ಕುರಿತು “July 12 “BD”(BIG DADDY)” ಎಂಬ ಪೋಸ್ಟರ್ ಸಹ ಬಿಡುಗಡೆಯಾಗಿದೆ. ಈ ವಿಡಿಯೋ ಬಿಡುಗಡೆಗಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಕನ್ನಡ […]readmore
