ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಗಂಧದ ಗುಡಿ ಸಾಕ್ಷ್ಯ ಚಿತ್ರ ತೆರೆಗೆ ಬರಲು ಇನ್ನೂ ಕೆಲವೇ ಕೆಲವು ದಿನಗಳು ಮಾತ್ರವೇ ಭಾಕಿ ಇದೆ. ಅದಕ್ಕೂ ಮುನ್ನ ರಾಜ್ ಕುಟುಂಬ ಪ್ರೀ ರಿಲೀಸ್ ಈವೆಂಟ್ ಹಮ್ಮಿಕೊಂಡಿದ್ದು ಅದಕ್ಕಾಗಿ ಭರ್ಜರಿ ತಯಾರಿ ಮಾಡಿಕೊಳ್ಳುತ್ತಿದೆ. ಇದೀಗ ಪುನೀತ್ ಪರ್ವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸರವಾಜ ಬೊಮ್ಮಾಯಿ ಅವರನ್ನು ಡಾ.ರಾಜ್ ಕುಟುಂಬ ಆಹ್ವಾನ ನೀಡಿದ್ದಾರೆ. ಪುನೀತ್ ರಾಜ್ ಕುಮಾರ್ ರ ಕನಸಿನ ಪ್ರಾಜೆಕ್ಟ್ ಗಂಧದ ಗುಡಿ ಟ್ರೈಲರ್ ಈಗಾಗ್ಲೆ ಅಭಿಮಾನಿಗಳ ಮನ […]readmore
ಸ್ಯಾಂಡಲ್ ವುಡ್ ನಟಿ, ಮೋಹಕ ತಾರೆ ಯಾವಾಗ ಕಂಬ್ಯಾಕ್ ಮಾಡ್ತಾರೆ ಎಂದು ಅಭಿಮಾನಿಗಳು ಸಾಕಷ್ಟು ವರ್ಷದಿಂದ ಕಾದು ಕೂತಿದ್ದರು. ಇದೀಗ ಆಪಲ್ ಬಾಕ್ಸ್ ನಿರ್ಮಾಣ ಸಂಸ್ಥೆ ಹುಟ್ಟುಹಾಕಿರುವ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಸ್ವಾತಿ ಮುತ್ತಿನ ಮಳೆ ಹನಿಯೇ ಸಿನಿಮಾದ ಮೂಲಕ ಅಭಿಮಾನಿಗಳ ಮುಂದೆ ಬರಲು ಭರ್ಜರಿ ತಯಾರಿ ನಡೆಸ್ತಿದ್ದಾರೆ. ಇದೀಗ ತಾವು ಮದುವೆಯಾಗುವ ಹುಡುಗ ಹೇಗಿರಬೇಕು ಎಂಬುದನ್ನು ರಮ್ಯಾ ಹೇಳಿದ್ದಾರೆ. ನಟಿ ರಮ್ಯಾ ಮದುವೆಯ ಕುರಿತ ಕೆಲವೊಮ್ಮೆ ಸುದ್ದಿಯಾಗಿತ್ತು, ಇದೀಗ ರಮ್ಯಾ ಕಾರ್ಯಕ್ರಮವೊಂದರಲ್ಲಿ ತಾವು ಮದುವೆಯಾಗುವ […]readmore
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕೋಟ್ಯಾಂತರ ಅಭಿಮಾನಿಗಳ ಆರಾಧ್ಯ ದೈವ. ಪುನೀತ್ ನಿಧನರಾಗಿ ಒಂದು ವರ್ಷವಾಗುತ್ತ ಬಂದರು ಇಂದಿಗೂ ಅವರ ಅಭಿಮಾನಿಗಳು ನಿತ್ಯ ಅಪ್ಪು ಜಪ ಮಾಡ್ತಿದ್ದಾರೆ. ಕೇವಲ ಅಭಿಮಾನಿಗಳು ಮಾತ್ರವಲ್ಲ ಸ್ಟಾರ್ ನಟ, ನಟಿಯರು ಕೂಡ ಪುನೀತ್ ರನ್ನು ನೆನಪು ಮಾಡಿಕೊಳ್ಳುತ್ತಿದ್ದಾರೆ. ಸಿನಿಮಾಗಳ ಜೊತೆಗೆ ಸಾಮಾಜಿಕ ಕೆಲಸಗಳ ಮೂಲಕವೂ ಅಭಿಮಾನಿಗಳ ಮನ ಗೆದ್ದವ್ರು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್. ಸದ್ಯ ಸಾಕಷ್ಟು ಮಂದಿ ಅಪ್ಪು ಅವರ ಗುಣಗಳನ್ನು ಅಳವಡಿಸಿಕೊಂಡು ಜೀವನ ನಡೆಸುತ್ತಿದ್ದಾರೆ. ಇದೀಗ […]readmore
ಕಾಂಗ್ರೆಸ್ ನಿಂದ ಈ ಬಾರಿ ನಾನೂ ಟಿಕೆಟ್ ಕೇಳ್ತೀನಿ. ಜನರ ಸೇವೆಗಾಗಿ ಚುನಾವಣೆಗೆ ನಿಲ್ತೀನಿ ಎಂದು ಕನ್ನಡದ ಖ್ಯಾತ ನಟಿ ಭಾವನಾ ಹೇಳಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗಿಯಾಗಿ ಮಾತನಾಡಿದ ಭಾವನ, ನಾನು ಈ ಬಾರಿ ಕಾಂಗ್ರೆಸ್ನಿಂದ ಟಿಕೆಟ್ ಕೇಳ್ತೀನಿ. ಜನರ ಸೇವೆಗಾಗಿ ನಾನು ಚುನಾವಣೆಗೆ ನಿಲ್ತೀನಿ. ಮುಂದೆ ಕೇಂದ್ರ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂದರು. ದೇಶದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ರಾಹುಲ್ ಗಾಂಧಿ […]readmore
ಈ ವರ್ಷ ಭಾರತದಿಂದ ಆಯ್ಕೆಯಾಗಿದ್ದ ಪ್ಯಾನ್ ನಳಿನ್ ನಿರ್ದೇಶನದ ಚೆಲ್ಲೋ ಶೋ ಚಿತ್ರದಲ್ಲಿ ನಟಿಸಿದ್ದ ಬಾಲಕ ರಾಹುಲ್ ಕೊಲಿ ಕ್ಯಾನ್ಸರ್ ಖಾಯಿಲೆಯಿಂದ ನಿಧನರಾಗಿದ್ದಾರೆ. ಇದೇ ಅ.14ರಂದ ರಾಹುಲ್ ಕೊಲಿ ನಟನೆಯ ಚೆಲ್ಲೋ ಶೋ ಸಿನಿಮಾ ಬಿಡುಗಡೆ ಆಗಬೇಕಿತ್ತು. ಆದರೆ ಅಷ್ಟರಲ್ಲಾಗಲೇ ಬಾಲಕ ನಿಧನರಾಗಿದ್ದು ಬಾಲಕನ ನಿಧನಕ್ಕೆ ಚೆಲ್ಲೋ ಶೋ ಸಿನಿಮಾ ತಂಡ ಕಂಬನಿ ಮಿಡಿದಿದೆ. ಮೂಲಗಳ ಪ್ರಕಾರ ಅಕ್ಟೋಬರ್ 2ರಂದು ರಾಹುಲ್ ಕೊಲಿ ರಕ್ತ ವಾಂತಿ ಮಾಡಿಕೊಂಡಿದ್ದಾನೆ. ಅಲ್ಲದೆ ಈ ವೇಳೆ ಆತನಿಗೆ ಜ್ವರ ಕೂಡ ಕಾಣಿಸಿಕೊಂಡಿದ್ದು […]readmore
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕನಸಿನ ಗಂಧದ ಗುಡಿ ಟ್ರೈಲರ್ ಬಿಡುಗಡೆ ಆಗಿದ್ದು ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಬಿಡುಗಡೆ ಆದ ಒಂದೇ ದಿನಕ್ಕೆ ಕೋಟಿ ವೀಕ್ಷಣೆ ಪಡೆದುಕೊಂಡಿದ್ದು ಪ್ರತಿಯೊಬ್ಬರು ಗಂಧದ ಗುಡಿ ಸಾಕ್ಷ್ಯಾ ಚಿತ್ರಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಗಂಧದ ಗುಡಿ ಟ್ರೈಲರ್ ನೋಡಿ ಸ್ಯಾಂಡಲ್ ವುಡ್ ಜೊತೆಗೆ ಪರಭಾಷೆಯ ಮಂದಿಯೂ ಮೆಚ್ಚುಗೆ ಸೂಚಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಬಸವರಾಜ ಬೊಮ್ಮಾಯಿ ಸೇರಿದಂತೆ ಸಾಕಷ್ಟು ರಾಜಕೀಯ ನಾಯಕರು ಹ್ಯಾಟ್ಸ್ ಆಫ್ ಅಂತಿದ್ದಾರೆ. ಟ್ರೈಲರ್ ಬಿಡುಗಡೆ ಆದ […]readmore
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಕೊನೆಯ ಸಿನಿಮಾ ಗಂಧದ ಗುಡಿ ಟ್ರೈಲರ್ ಎರಡು ದಿನಗಳ ಹಿಂದಷ್ಟೇ ಬಿಡುಗಡೆ ಆಗಿದೆ. ಪುನೀತ್ ಪತ್ನಿ ಅಶ್ವೀನಿ ಪುನೀತ್ ರಾಜ್ ಕುಮಾರ್ ಬೆಂಗಳೂರಿನ ತ್ರಿವೇಣಿ ಚಿತ್ರಮಂದಿರದಲ್ಲಿ ಟ್ರೈಲರ್ ಬಿಡುಗಡೆ ಮಾಡಿದ್ದಾರೆ. ಇದೀಗ ಗಂಧದ ಗುಡಿ ಪ್ರೀ ರಿಲೀಸ್ ಈವೇಂಟ್ ಗೆ ಕೌಂಟ್ ಡೌ್ನ್ ಶುರುವಾಗಿದ್ದು ಅದಕ್ಕಾಗಿ ಭರ್ಜರಿ ತಯಾರಿ ನಡೆಯುತ್ತಿದೆ. ಇದೇ ತಿಂಗಳ 28ರಂದು ಗಂಧದ ಗುಡಿ ಸಿನಿಮಾ ಬಿಡುಗಡೆ ಆಗುತ್ತಿದೆ. ಅದಕ್ಕೂ ಮೊದಲು ಅಂದರೆ ಅ.21ರಂದು ಗಂಧದ […]readmore
ಕನ್ನಡದ ಜೊತೆಗೆ ಐದು ಭಾಷೆಗಳಲ್ಲಿ ಬಿಡುಗಡೆ ಆಗುತ್ತಿರುವ ಬನಾರಸ್ ಸಿನಿಮಾದ ಬಗ್ಗೆ ಈಗಾಗ್ಲೆ ದೊಡ್ಡ ಮಟ್ಟದಲ್ಲಿ ಕ್ರೇಜ್ ಕ್ರಿಯೇಟ್ ಆಗಿದೆ. ಈಗಾಗ್ಲೆ ಟ್ರೈಲರ್ ದೊಡ್ಟ ಮಟ್ಟದಲ್ಲಿ ಸದ್ದು ಮಾಡಿದ್ದು ಬನಾರಸ್ ಸಿನಿಮಾದ ಡಿಸ್ಟ್ರಿಬ್ಯೂಷನ್ ರೈಟ್ಸ್ ನ ದೊಡ್ಡ ದೊಡ್ಡ ಸಂಸ್ಥೆಗಳು ಖರೀದಿ ಮಾಡುತ್ತಿದೆ. ಇದೀಗ ಚಿತ್ರತಂಡದ ಕಡೆಯಿಂದ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದೆ. ಇದೇ ನವೆಂಬರ್ 4ರಂದು ಶಾಸಕ ಜಮೀರ್ ಅಹಮದ್ ಪುತ್ರ ಝೈದ್ ಖಾನ್ ನಟನೆಯ ಬನಾರಸ್ ಸಿನಿಮಾ ಸಾಕಷ್ಟು ಅದ್ದೂರಿಯಾಗಿ ತೆರೆಗೆ ಬರುತ್ತಿದೆ. ಈಗಾಗ್ಲೇ […]readmore
ನಿರ್ದೇಶಕ ಜೋಗಿ ಪ್ರೇಮ್ ಹಾಗೂ ಧ್ರುವ ಸರ್ಜಾ ಕಾಂಬಿನೇಷನ್ ನಲ್ಲಿ ಸಿನಿಮಾವೊಂದು ರೆಡಿಯಾಗುತ್ತಿದ್ದು ಈಗಾಗ್ಲೆ ಚಿತ್ರದ ಪೋಸ್ಟರ್ ರಿಲೀಸ್ ಆಗಿ ಮೆಚ್ಚುಗೆ ವ್ಯಕ್ತವಾಗಿದೆ. ಇದೀಗ ಚಿತ್ರದ ಟೈಟಲ್ ಟೀಸರ್ ಅನ್ನು ವಿಶೇಷವಾಗಿ ಬಿಡುಗಡೆ ಮಾಡಲು ಚಿತ್ರತಂಡ ಮುಂದಾಗಿದ್ದು ಅದಕ್ಕಾಗಿ ಭರ್ಜರಿ ತಯಾರಿ ಮಾಡಿಕೊಳ್ಳುತ್ತಿದೆ. ಪ್ರೇಮ್ ಹಾಗೂ ಧ್ರುವ ಸರ್ಜಾ ಕಾಂಬಿನೇಷನ್ ನ ಸಿನಿಮಾದ ಟೈಟಲ್ ಟೀಸರ್ ಕಾರ್ಯಕ್ರಮ ಸಾಕಷ್ಟು ಅದ್ದೂರಿಯಾಗಿ ನಡೆಸಲು ಸಕಲ ಸಿದ್ದತೆಗಳನ್ನು ಚಿತ್ರತಂಡ ಮಾಡಿಕೊಳ್ಳುತ್ತಿದೆ. ಇದಕ್ಕೆ ಚಿತ್ರರಂಗದ ಅನೇಕ ಗಣ್ಯರನ್ನು ಆಹ್ವಾನ ಮಾಡುತ್ತಿದೆ. ಇದೇ […]readmore
ಸ್ಟಾರ್ ನಟಿ ರಶ್ಮಿಕಾ ಮಂದಣ್ಣ ಹಾಗೂ ನಟ ವಿಜಯ್ ದೇವರಕೊಂಡ ಕಳೆದ ಒಂದೆರಡು ದಿನಗಳಿಂದ ಮತ್ತೆ ಸಖತ್ ಸದ್ದು ಮಾಡ್ತಿದ್ದಾರೆ. ಈ ಜೋಡಿ ಮಧ್ಯೆ ಬ್ರೇಕ್ ಅಪ್ ಆಗಿದೆ ಎಂಬ ಸುದ್ದಿ ಹರಿದಾಡಿದ ಬೆನ್ನಲ್ಲೆ ಇದೀಗ ಇಬ್ಬರು ಮಾಲ್ಡೀವ್ಸ್ ನಲ್ಲಿ ಎಂಜಾಯ್ ಮಾಡ್ತಿದ್ದಾರೆ ಎನ್ನಲಾಗುತ್ತಿದೆ. ಕಳೆದ ಎರಡು ದಿನಗಳ ಹಿಂದೆ ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ಕೆಲವೇ ಕೆಲವು ಸೆಕೆಂಡ್ ಗಳ ಅಂತರದಲ್ಲಿ ಏರ್ ಪೋರ್ಟ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಹೀಗಾಗಿ ಈ ಜೋಡಿಗಳು ಮಾಲ್ಡೀವ್ಸ್ ಗೆ ತೆರಳಿದ್ದಾರೆ […]readmore
