ಕಂಟೆಂಟ್ ಆಧಾರಿತ ಒಳ್ಳೆ ಸಿನಿಮಾಗಳನ್ನು ಕನ್ನಡಪ್ರೇಕ್ಷಕ ಪ್ರಭು ಯಾವತ್ತು ಕೈ ಬಿಡೋದಿಲ್ಲ ಎಂಬ ನಂಬಿಕೆ ಗಾಂಧಿನಗರದಲ್ಲಿದೆ. ಇದು ಡೇರ್ ಡೆವಿಲ್ ಮುಸ್ತಾಫಾ ಸಿನಿಮಾ ವಿಚಾರದಲ್ಲಿ ಪ್ರೋವ್ ಆಗಿದೆ. ಖ್ಯಾತ ಸಾಹಿತಿ ಪೂರ್ಣಚಂದ್ರ ತೇಜಸ್ವಿ ಕಥೆಯಾಧಾರಿತ ಸಿನಿಮಾವಾಗಿರುವ ಡೇರ್ ಡೆವಿಲ್ ಮುಸ್ತಾಫಾ ಭರಪೂರ ಮೆಚ್ಚುಗೆ ಪಡೆದುಕೊಳ್ಳುತ್ತಿದೆ. ಸಿನಿಮಾ ಪ್ರೇಮಿಗಳಿಂದ ಹಾಗೂ ವಿಮರ್ಷಕರಿಂದಲೂ ಅಪ್ಪುಗೆ ಪಡೆದಿರುವ ಹೃದಯ ಬೆಸೆಯುವ ಕಥೆ ಯಶಸ್ವಿಯಾಗಿ ಮೂರನೇ ವಾರ ಪ್ರದರ್ಶನ ಕಂಡಿದೆ. ಇದೇ ಖುಷಿಯಲ್ಲಿ ಚಿತ್ರತಂಡ ಯಶಸ್ವಿ ಕಾರ್ಯಕ್ರಮ ಆಯೋಜಿಸಿತ್ತು. ಕೇಕ್ ಕಟ್ ಮಾಡಿ […]readmore
ಕನ್ನಡದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆಯಾದ ಹೊಂಬಾಳೆ ಫಿಲಂಸ್, ‘ಧೂಮಂ’ ಎಂಬ ಚಿತ್ರವನ್ನು ನಿರ್ಮಿಸುವ ಮೂಲಕ ಮಲಯಾಳಂ ಚಿತ್ರರಂಗಕ್ಕೆ ಕಾಲಿಟ್ಟಿರುವುದು ಗೊತ್ತೇ ಇದೆ. ಈ ಚಿತ್ರವು ಜೂನ್ 23ಕ್ಕೆ ಬಿಡುಗಡೆಯಾಗುತ್ತಿದ್ದು, ಇತ್ತೀಚೆಗೆ ಟ್ರೇಲರ್ ಬಿಡುಗಡೆಯಾಗಿದೆ. ವಿಜಯ್ ಕಿರಗಂದೂರು ನಿರ್ಮಾಣದ, ‘ಲೂಸಿಯಾ’ ಮತ್ತು ‘ಯೂ ಟರ್ನ್’ ಖ್ಯಾತಿಯ ಪವನ್ ಕುಮಾರ್ ನಿರ್ದೇಶನ ಈ ಚಿತ್ರದಲ್ಲಿ ಫಹಾದ್ ಫಾಸಿಲ್, ಅಪರ್ಣ ಬಾಲಮುರಳಿ, ಅಚ್ಯುತ್ ಕುಮಾರ್, ರೋಶನ್ ಮ್ಯಾಥ್ಯೂ, ವಿನೀತ್ ರಾಧಾಕೃಷ್ಣನ್, ಅನು ಮೋಹನ್, ಜಾಯ್ ಮ್ಯಾಥ್ಯೂ, ನಂದು ಮುಂತಾದವರು ನಟಿಸಿದ್ದಾರೆ. ಪೂರ್ಣಚಂದ್ರ […]readmore
“ಆಪರೇಶನ್ ಅಲಮೇಲ್ಲಮ್ಮ”, “ಕವಲುದಾರಿ” ಮುಂತಾದ ಚಿತ್ರಗಳ ಮೂಲಕ ಮನೆಮಾತಾಗಿರುವ ನಟ ರಿಷಿ ನಾಯಕರಾಗಿ ನಟಿಸುತ್ತಿರುವ, ಕೆ.ಎಸ್ ನಂದೀಶ್ ನಿರ್ದೇಶನದ ನೂತನ ಚಿತ್ರದ ಮುಹೂರ್ತ ಸಮಾರಂಭ ಹಾಗೂ ಶೀರ್ಷಿಕೆ ಅನಾವರಣ ಕಾರಂಜಿ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ನೆರವೇರಿತು. ನಟ ನೀನಾಸಂ ಸತೀಶ್ ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು ಹಾಗೂ ಶೀರ್ಷಿಕೆ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. “ರುದ್ರ ಗರುಡ ಪುರಾಣ” ಎಂದು ಚಿತ್ರಕ್ಕೆ ಹೆಸರಿಡಲಾಗಿದೆ. “ಚಂಬಲ್”, ” ಡಿಯರ್ ವಿಕ್ರಮ್” ಚಿತ್ರಗಳು ಸೇರಿದಂತೆ ಕೆಲವು ಚಿತ್ರಗಳನ್ನು […]readmore
ಮತೀನ್ ಹುಸೇನ್ ಅಭಿನಯದ ‘ರೋಡ್ ಕಿಂಗ್’ ಚಿತ್ರವು ಇದೇ ತಿಂಗಳ 23ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ವಿಶೇಷವೆಂದರೆ, Randy Kent ಎಂಬ ಹಾಲಿವುಡ್ ನಿರ್ದೇಕರು ಈ ಚಿತ್ರವನ್ನು ನಿರ್ದೇಶಸಿದ್ದಾರೆ. ‘ರೋಡ್ ಕಿಂಗ್’ ಚಿತ್ರದ ನಾಯಕ ಮತ್ತು ನಿರ್ಮಾಪಕರೂ ಆಗಿರುವ ಮತೀನ್ ಹುಸೇನ್, ಮೂಲತಃ ಬೆಂಗಳೂರಿನವರಾದರೂ ಬೆಳೆದಿದ್ದೆಲ್ಲಾ ಅಮೇರಿಕಾದಲ್ಲಿ. ಕೋಲಾರದಲ್ಲಿ ನಡೆದ ನೈಜ ಘಟನೆ ಆಧರಿಸಿ ಒಂದು ಸಣ್ಣ ಬಜೆಟ್ನ ಚಿತ್ರ ಮಾಡುವುದಕ್ಕೆ ಹೊರಟಾಗ, ಸೂಕ್ತ ನಿರ್ದೇಶಕರು ಸಿಗಲಿಲ್ಲವಂತೆ. ಆಗ ಅವರಿಗೆ ನೆನಪಾಗಿದ್ದೇ ರಾಂಡಿ ಕೆಂಟ್. ಮತೀನ್ ಮತ್ತು ರಾಂಡಿ […]readmore
ಕಿರುತೆರೆ ಹಾಗೂ ಹಿರಿತೆರೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ನಟ ಜೆ.ಕೆ ನಾಯಕರಾಗಿ ನಟಿಸಿರುವ “ಐರಾವನ್” ಚಿತ್ರ ಇದೇ ಜೂನ್ ಹದಿನಾರರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಚಿತ್ರದ ಕುರಿತು ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ನಾನು ಮೂಲತಃ ವೈದ್ಯ. ಕೋವಿಡ್ ಸಮಯದಲ್ಲಿ ನಿರ್ದೇಶಕ ರಾಮ್ಸ್ ರಂಗ ಈ ಚಿತ್ರದ ಕಥೆ ಹೇಳಿದರು. ಕಥೆ ಇಷ್ಟವಾಯಿತು. ಆ ಸಮಯದಲ್ಲಿ ಚಿತ್ರರಂಗದ ಬಹುತೇಕರು ಸಂಕಷ್ಟದಲ್ಲಿದ್ದರು. ಈ ಸಂದರ್ಭದಲ್ಲಿ ನಾನು ಸಿನಿಮಾ ನಿರ್ಮಾಣ ಮಾಡಿದರೆ ಅನೇಕ ಜನರಿಗೆ ಅನುಕೂಲವಾಗುತ್ತದೆ ಎಂಬ […]readmore
ಪ್ರೈಮ್ ಸ್ಟಾರ್ ಸ್ಟುಡಿಯೋ ಲಾಂಛನದಲ್ಲಿ ಎಂ.ನಂಜುಂಡ ರೆಡ್ಡಿ ಅವರು ನಿರ್ಮಿಸಿರುವ, ಮಂಜು ಕಾರ್ತಿಕ್ ನಿರ್ದೇಶನದ “ಮೆಲೋಡಿ ಡ್ರಾಮ” ಚಿತ್ರಕ್ಕಾಗಿ ಹೃದಯ ಶಿವ ಬರೆದಿರುವ “ಯಾರು ಬರೆಯದ ಕವಿತೆ” ಎಂಬ ಹಾಡು ಇತ್ತೀಚೆಗೆ ಬಿಡುಗಡೆಯಾಗಿ, ಜನಮನಸೂರೆಗೊಳ್ಳುತ್ತಿದೆ. ಈಗಾಗಲೇ ಒಂದು ಮಿಲಿಯನ್ ಗೂ ಅಧಿಕ ವೀಕ್ಷಣೆಯಾಗಿ ಮುನ್ನುಗುತ್ತಿದೆ. ಕಿರಣ್ ರವೀಂದ್ರನಾಥ್ ಸಂಗೀತ ನೀಡಿರುವ ಈ ಹಾಡನ್ನು ಪಲಾಕ್ ಮುಚ್ಚಲ್ ಹಾಗೂ ವರುಣ್ ಪ್ರದೀಪ್ ಹಾಡಿದ್ದಾರೆ. ಚಿತ್ರದ ಮೊದಲ ಹಾಡು ಇದಾಗಿದ್ದು, ಒಟ್ಟು ಏಳು ಹಾಡುಗಳು ಈ ಚಿತ್ರದಲ್ಲಿದೆ. ಸೋನು […]readmore
ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ, ರಾಷ್ಟ್ರಪ್ರಶಸ್ತಿ ವಿಜೇತ ಸಂದೇಶ್ ನಾಗರಾಜ್ (MLC) ಅರ್ಪಿಸುವ, ಸಂದೇಶ್ ಎನ್ ನಿರ್ಮಿಸುತ್ತಿರುವ ಹಾಗೂ ಶ್ರೀನಿ ನಿರ್ದೇಶನದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ಅಭಿನಯಿಸುತ್ತಿರುವ “ಘೋಸ್ಟ್” ಚಿತ್ರದ ಚಿತ್ರೀಕರಣ ಚಾಮರಾಜಪೇಟೆ ಪೊಲೀಸ್ ಮೈದಾನದಲ್ಲಿ ನಿರ್ಮಿಸಲಾಗಿರುವ ಅದ್ದೂರಿ ಸೆಟ್ ನಲ್ಲಿ ನಡೆಯುತ್ತಿದೆ. ಚಿತ್ರೀಕರಣ ನಡೆಯುತ್ತಿರುವ ಸ್ಥಳಕ್ಕೆ ನೂತನ ಸಚಿವರಾದ ಮಧು ಬಂಗಾರಪ್ಪ ಭೇಟಿ ನೀಡಿದ್ದಾರೆ. ಚಿತ್ರತಂಡದವರ ಜೊತೆ ಸ್ವಲ್ಪ ಸಮಯ ಮಾತುಕತೆ ನಡೆಸಿದ್ದ ಸಚಿವರು ಚಿತ್ರ ಯಶಸ್ವಿಯಾಗಲಿ ಎಂದು ಹಾರೈಸಿದ್ದಾರೆ. readmore
ಅತ್ಯುತ್ತಮ ಧಾರಾವಾಹಿಗಳ ಮೂಲಕ ಕನ್ನಡಿಗರ ಮನ ಗೆದ್ದಿರುವ “ಸಿರಿಕನ್ನಡ” ವಾಹಿನಿಯಲ್ಲಿ ಇದೇ ಜೂನ್ 5 ರಿಂದ “ಊರ್ಮಿಳಾ”, “ಬ್ರಾಹ್ಮಿನ್ಸ್ ಕೆಫೆ” ಎಂಬ ಎರಡು ಮೆಗಾ ಧಾರಾವಾಹಿಗಳು ಹಾಗೂ “ಸಖತ್ ಜೋಡಿ” ಎಂ ರಿಯಾಲಿಟಿ ಶೋ ಆರಂಭವಾಗಲಿದೆ. ಈ ಕುರಿತು ಮಾಹಿತಿ ನೀಡಲು ವಾಹಿನಿ ಪತ್ರಿಕಾಗೋಷ್ಠಿ ಆಯೋಜಿಸಿತ್ತು. ನಮ್ಮ “ಸಿರಿಕನ್ನಡ” ವಾಹಿನಿಗೆ ಪ್ರೋತ್ಸಾಹ ನೀಡುತ್ತಿರುವ ಪ್ರತಿಯೊಬ್ಬರಿಗೂ ಧನ್ಯವಾದ. ಈಗಾಗಲೇ ಸಾಕಷ್ಟು ಜನಪ್ರಿಯ ಧಾರಾವಾಹಿಗಳ ಮೂಲಕ “ಸಿರಿಕನ್ನಡ” ಕನ್ನಡಿಗರ ಮನ ಗೆದ್ದಿದೆ. ಜೂನ್ 5 ರಿಂದ “ಊರ್ಮಿಳಾ” […]readmore
ನಟರಾಕ್ಷಸ ಡಾಲಿ ಧನಂಜಯ್ ತಮ್ಮದೇ ಡಾಲಿ ಪಿಕ್ಚರ್ಸ್ ನಡಿ ನಿರ್ಮಿಸುತ್ತಿರುವ ಸಿನಿಮಾ ಟಗರು ಪಲ್ಯ..ಯೋಗರಾಜ್ ಭಟ್ಟರ ಗರಡಿಯಲ್ಲಿ ಮತ್ತು ಹಲವು ಖ್ಯಾತ ನಿರ್ದೇಶಕರ ಜೊತೆ ನಿರ್ದೇಶನದ ವಿಭಾಗದಲ್ಲಿ ದುಡಿರುವ ಉಮೇಶ್ ಕೆ ಕೃಪ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಕಳೆದ ನವೆಂಬರ್ ನಲ್ಲಿ ಸೆಟ್ಟೇರಿದ ಟಗರು ಪಲ್ಯ ಸಿನಿಮಾಗೆ ಕುಂಬಳಕಾಯಿ ಪ್ರಾಪ್ತಿಯಾಗಿದೆ. ಮಂಡ್ಯ, ಮಳವಳ್ಳಿ, ಮುತತ್ತಿ ಹಾಗೂ ಶಿಂಶ ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದೆ. ಹೊಸ ಪ್ರತಿಭೆಗಳಿಗೆ ಅವಕಾಶ ನೀಡಲೆಂದು ಹಾಗೂ ಕಂಟೆಂಟ್ ಆಧಾರಿತ […]readmore
ಮಹಿಳಾ ದಿನದ ಅಂಗವಾಗಿ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಹಿರಿಯ ನಟಿ ಲೀಲಾವತಿ ಅವರನ್ನು ಸನ್ಮಾನಿಸುವ ಕಾರ್ಯಕ್ರಮವನ್ನು ಈ ಹಿಂದೆಯೇ ಆಯೋಜಿಸಿತ್ತು. ಆದರೆ ವಯೋಸಹಜ ಕಾಯಿಲೆ ಅವರು ಕಾರ್ಯಕ್ರಮಕ್ಕೆ ಬರಲು ಆಗಲಿಲ್ಲ. ಹೀಗಾಗಿ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯ ಅವರ ತೋಟದ ಮನೆಗೆ ಭೇಟಿ ನೀಡಿ ಹಿರಿಯ ನಟಿಯನ್ನು ಕನ್ನಡ ಕಲಾಬಳಗ ಸನ್ಮಾನ ಮಾಡುವ ಕಾರ್ಯಕ್ರಮ ಇಂದು ನೆರವೇರಿತು. ಅವರ ನಿವಾಸದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕನ್ನಡ ಕಲಾವಿದರು ನಮ್ಮಮ್ಮ ಲೀಲಮ್ಮ ನಿಮ್ಮೊಳಗೆ ನಾವಮ್ಮ ಪ್ರಶಸ್ತಿ ಪ್ರದಾನ […]readmore
