ನಿತ್ಯ ಲಕ್ಷಾಂತರ ಭಕ್ತರು ಭೇಟಿ ನೀಡುವ ತಿರುಪತಿ ತಿಮ್ಮಪ್ಪನ ದರ್ಶನ ಇನ್ನೂ ಮೂರು ದಿನಗಳ ಕಾಲ ಸಿಗಲ್ಲ. ಸೂರ್ಯಗ್ರಹಣ, ಚಂದ್ರಗ್ರಹಣ ಹಾಗೂ ದೀಪಾವಳಿ ಹಿನ್ನೆಲೆಗಳ ಕಾರಣದಿಂದ ಮೂರು ದಿನಗಳ ಕಾಲ ತಿಮ್ಮಪ್ಪನ ದರ್ಶನಕ್ಕೆ ಬ್ರೇಕ್ ಹಾಕಲಾಗಿದೆ. ಅಕ್ಟೋಬರ್ 24ರಿಂದ 25 ಹಾಗೂ ನವೆಂರ್ 8ರಂದು ತಿಮ್ಮಪ್ಪನ ದರ್ಶನ ಇರುವುದಿಲ್ಲ. ಅಕ್ಟೋಬರ್ 24ರಂದು ದೀಪಾವಳಿ, ಅಕ್ಟೋಬರ್ 25ರಂದು ಸೂರ್ಯಗ್ರಹಣ ಮತ್ತು ನವೆಂಬರ್ 8ರಂದು ಚಂದ್ರಗ್ರಹಣದಿಂದಾಗಿ ಮೂರು ದಿನಗಳ ಕಾಲ ಭಕ್ತರಿಗೆ ಶ್ರೀವೆಂಕಟೇಶ್ವರ ಸ್ವಾಮಿ ದರ್ಶನ ಇರುವುದಿಲ್ಲ ಎಂದು […]readmore
ನವದೆಹಲಿ: ಕರಾವಳಿ ಕಾಲೇಜಿನಲ್ಲಿ ಹೊತ್ತಿಕೊಂಡ ಹಿಜಾಬ್ ವಿವಾದ ಕುರಿತು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಉಡುಪಿ ವಿದ್ಯಾರ್ಥಿನಿಯರು ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿಹೇಮಂತ್ ಗುಪ್ತಾ ವಜಾಗೊಳಿಸಿದ್ದಾರೆ. ಕರ್ನಾಟಕ ಹೈಕೋರ್ಟ್ ನೀಡಿದ ತೀರ್ಪನ್ನು ರದ್ದು ಗೊಳಿಸಿರುವ ನ್ಯಾಯಮೂರ್ತಿ ಸುಧಾಂಶ ಧುಲಿಯಾ ಪ್ರಕಣವನ್ನು ವಿಸ್ತೃತ ಪೀಠಕ್ಕೆ ವರ್ಗಾವಣೆಗೊಳಿಸಿದ್ದಾರೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ವಿಸ್ತ್ರೃತ ಪೀಠ ರಚನೆ ಮಾಡಿ ಮತ್ತೆ ವಿಚಾರಣೆ ನಡೆಸಲಿದ್ದಾರೆ. ಅಲ್ಲಿಯವರೆಗೂ ಕರ್ನಾಟಕ ಹೈಕೋರ್ಟ್ ತೀರ್ಪಿನ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಆದೇಶ ಹೊರಡಿಸಿದ್ದಾರೆ. ರಾಜ್ಯ ಸರ್ಕಾರ ಶಾಲಾ- […]readmore
ನವದೆಹಲಿ: ಉಡುಪಿಯಲ್ಲಿ ಆರಂಭವಾಗಿ ರಾಷ್ಟ್ರ ಮಟ್ಟದಲ್ಲಿ ಭಾರೀ ಸದ್ದು ಮಾಡಿದ ಹಿಜಾಬ್ ವಿವಾದಕ್ಕೆ ಸಂಬಂಧಿಸಿದ ಮಹತ್ವದ ತೀರ್ಪನ್ನು ಇಂದು ಸುಪ್ರೀಂ ಕೋರ್ಟ್ ಪ್ರಕಟಿಸುವ ಸಾಧ್ಯತೆ ಇದೆ. ಶಾಲಾ ಕಾಲೇಜುಗಳಲ್ಲಿ ಹುಟ್ಟಿಕೊಂಡ ಹಿಜಾಬ್ ನಿರ್ಬಂಧ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಹಲವು ಅರ್ಜಿಗಳ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ಕಳೆದ ಮೂರು ವಾರಗಳ ಹಿಂದೆ ತೀರ್ಪು ಕಾಯ್ದಿರಿಸಿತ್ತು. ಇದೀಗ ಇಂದು ತೀರ್ಪು ಪ್ರಕಟವಾಗಲಿದೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಹೇಮಂತ್ ಗುಪ್ತಾ ಇದೇ 16ರಂದು ನಿವೃತ್ತಿಯಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ತೀರ್ಪು […]readmore
ಚಿತ್ರದುರ್ಗ: ಪೋಕ್ಸೋ ಪ್ರರಕಣದಲ್ಲಿ ಜೈಲು ಸೇರಿರುವ ಮುರುಘ ಮಠದ ಮುರುಘ ಶ್ರೀ ಸ್ಥಾನಕ್ಕೆ ನೂತನ ಪೀಠಾಧಿಪತಿ ನೇಮಿಸುವಂತೆ ದೊಡ್ಡ ಮಟ್ಟದಲ್ಲಿ ಕೂಗು ಕೇಳಿ ಬರುತ್ತಿದೆ. ಇದರ ಬೆನ್ನಲ್ಲೇ ಶೂನ್ಯ ಪೀಠ ಪರಂಪರೆಯ ಮುರುಘಾ ಮಠಕ್ಕೆ ಶೂದ್ರರನ್ನು ಪೀಠಾಧಿಪತಿಯಾಗಿ ನೇಮಿಸುವಂತೆ ಚಿತ್ರದುರ್ಗ ನಗರಸಭೆಯ ಮಾಜಿ ಅಧ್ಯಕ್ಷ ಬಿ.ಕಾಂತರಾಜ್ ಹೇಳಿಕೆ ನೀಡಿದ್ದು ಈ ಹೇಳಿಕೆ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಮುರುಘಾ ಶ್ರೀ ಬದಲಾವಣೆಗೆ ಸಭೆ ನಡೆಸಿದವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಕಾಂತರಾಜ್, ಶೂನ್ಯಪೀಠದ ಪರಂಪರೆಯ ಮಠದಲ್ಲಿ ಸರ್ವಧರ್ಮ, ಜಾತಿಗಳಿಗೂ […]readmore
ಬೆಂಗಳೂರು: ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಅವರಿಗೆ ಗುತ್ತಿಗೆ ಆಧಾರದ ಮೇಲೆ ಮುಖ್ಯಮಂತ್ರಿ ಕಚೇರಿಯಲ್ಲಿ ಹಿರಿಯ ಸಹಾಯಕ ಹುದ್ದೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ದೊಡ್ಡಬಳ್ಳಾಪುರದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರವೀಣ್ ಕುಟುಂಬಕ್ಕೆ ಕೆಲಸ ನೀಡುವ ಭರವಸೆನೀಡಿದ್ದರು.ಅಂದರಂತೆ ಗುರುವಾಗಿ ಪ್ರವೀಣ್ ಪತ್ನಿ ನೂತನಾಕ ಕುಮಾರಿಗೆ ತಮ್ಮ ಕಚೇರಿಯಲ್ಲಿ ಗ್ರೂಪ್ ಸಿ ಹುದ್ದೆ ನೀಡಿ ಆದೇಶ ಹೊರಡಿಸಿದ್ದಾರೆ. ಈ […]readmore
ಚಿತ್ರದುರ್ಗ: ಪೋಕ್ಸೋ ಕಾಯಿದೆಯಡಿ ಬಂಧನಕ್ಕೊಳಗಾಗಿರುವ ಮುರುಘಾ ಶ್ರೀಗಳ ಬದಲಿಗೆ ನೂತನ ಸ್ವಾಮೀಜಿಯನ್ನು ನೇಮಕ ಮಾಡುವಂತೆ ಒತ್ತಾಯ ಕೇಳಿ ಬರುತ್ತಿದೆ. ಮುರುಘಾ ಮಠದ ಶ್ರೀಗಳು ನ್ಯಾಯಾಂಗ ಬಂಧನದಲ್ಲಿರುವ ಕಾರಣ ದೈನಂದಿನ ಧಾರ್ಮಿಕ ಕಾರ್ಯಗಳು ಹಾಗೂ ಆಡಳಿತಾತ್ಮಕ ಚಟುವಟಿಕೆಗಳನ್ನು ಮುಂದುವರಿಸಿಕೊಂಡು ಹೋಗಲು ಕಷ್ಟವಾಗುತ್ತಿದೆ. ಹೀಗಾಗಿ ನೂತನ ಸ್ವಾಮೀಜಿ ನೇಮಕ ಮಾಡುವ ಅಗತ್ಯವಿದೆ ಎಂದು ಕೆಲ ಲಿಂಗಾಯತ ಸಮಾಜದ ಮುಖಂಡರು ಒತ್ತಾಯಿಸಿದ್ದಾರೆ. ಈ ಬಗ್ಗೆ ಚಿತ್ರದುರ್ಗದಲ್ಲಿ ಸಭೆ ನಡೆಸಿದ ವೀರಶೈವ ಲಿಂಗಾಯತ ಸಮಾಜದ ಮುಖಂಡರು, ಮಠಕ್ಕೆ ನೂತನ ಪೀಠಾಧಿಪತಿಗಳನ್ನು ನೇಮಿಸಬೇಕು. ಅಲ್ಲದೆ ಕಳಂಕಿತ […]readmore
ಕೊರೋನಾ ಸಾಂಕ್ರಾಮಿಕ ರೋಗದ ಬಳಿಕ ಪ್ರತಿಯೊಂದು ವಸ್ತುಗಳ ಬೆಲೆಯಲ್ಲೂ ಏರಿಕೆಯಾಗಿ ಗ್ರಾಹಕರು ಕಂಗಾಲಾಗಿದ್ದಾರೆ. ಇದರಿಂದ ಸಾರ್ವಜನಿಕರು ಕೊಂಚ ಚೇತರಿಸಿಕೊಳ್ಳುತ್ತಿದ್ದು ಈ ಮಧ್ಯೆ ಮತ್ತೆ ಕರೆಂಟ್ ಬೆಲೆ ಏರಿಕೆ ಮಾಡಿ ಗ್ರಾಹಕರಿಗೆ ಕರೆಂಟ್ ಶಾಕ್ ನೀಡಿದೆ. ಕಲ್ಲಿದ್ದಲು ಖರೀದಿ ದರ ಹೆಚ್ಚಳವಾದ ಹಿನ್ನೆಲೆಯಲ್ಲಿ ಇಂಧನ ಹೊಂದಾಣಿಕೆ ಶುಲ್ಕವನ್ನು ಅಕ್ಟೋಬರ್ನಿಂದ ಅನ್ವಯವಾಗುವಂತೆ ಮುಂದಿನ 6 ತಿಂಗಳ ಅವಧಿಗೆ ಪರಿಷ್ಕರಿಸಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಆದೇಶ ಹೊರಡಿಸಿದೆ. ಇಂಧನ ಹೊಂದಾಣಿಕೆ ಶುಲ್ಕ ಸರಿದೂಗಿಸಲು ಮುಂದಿನ ಆರು ತಿಂಗಳ ಅವಧಿಗೆ 43 […]readmore
ಚಿಕ್ಕಮಗಳೂರು: ಬಸ್ನಿಂದ ಇಳಿಯುವಾಗ ಆಯಾ ತಪ್ಪಿ ಬಿದ್ದು ಬ್ರೈನ್ ಡೆಡ್ ಆಗಿದ್ದ ಚಿಕ್ಕಮಗಳೂರಿನ ಯುವತಿ ರಕ್ಷಿತಾ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ರಕ್ಷಿತಾ ಹೆತ್ತವರ ನಿರ್ಧಾರಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಬಸ್ ನಿಂದ ಬಿದ್ದು ಬ್ರೈನ್ ಡೆಡ್ ಆಗಿದ್ದ ರಕ್ಷಿತಾ ಅಂಗಾಗಳು 9 ಜನರ ಜೀವ ಉಳಿಸಿದೆ. ರಕ್ಷಿತಾ ಹೃದಯವನ್ನು ಬೆಂಗಳೂರಿಗೆ ಏರ್ಲಿಫ್ಟ್ ಮಾಡಲಾಗಿದ್ದು, ಅವರ ಕಣ್ಣು ಹಾಗೂ ಕಿಡ್ನಿಯನ್ನು ಮಂಗಳೂರಿಗೆ ಝೀರೋ ಟ್ರಾಫಿಕ್ ಮೂಲಕ ರವಾನಿಸಲಾಗಿದೆ. ರಕ್ಷಿತಾ ಅವರ ಲಿವರ್ ಉಡುಪಿಗೆ ಕಳಿಸಲಾಗಿದ್ದು, ಹೃದಯವನ್ನು ಬೆಂಗಳೂರಿನ ಆಸ್ಪತ್ರೆಯಲ್ಲಿರುವ 12 […]readmore
ಮಂಗಳೂರು: ನಗರದ ಖಾಸಗಿ ಕಾಲೇಜೊಂದರ ಹಾಸ್ಟೆಲ್ ನಲ್ಲಿ ವಾಸವಿದ್ದು ಮೂವರು ವಿದ್ಯಾರ್ಥಿನಿಯರು ರಾತ್ರಿ ಸಮಯದಲ್ಲಿ ಹಾಸ್ಟೆಲ್ ನ ಕಿಟಿಕಿಯ ರಾಡ್ ಮುರಿದು ಎಸ್ಕೇಪ್ ಆಗಿದ್ದು ಸದ್ಯ ಸಿಸಿಟಿವಿಯಲ್ಲಿ ಬಯಲಾಗಿದೆ. ನಗರದ ಪ್ರತಿಷ್ಠಿತ ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯರಾದ ಯಶಸ್ವಿನಿ, ದಕ್ಷತಾ, ಸಿಂಚನಾ ಅದೇ ಕಾಲೇಜಿಗೆ ಸಂಬಂಧಿಸಿದ ಹಾಸ್ಟೆಲ್ ನಲ್ಲಿ ವಾಸವಿದ್ದರು. ಆದರೆ ಇಂದು ಮುಂಜಾನೆ 3 ಗಂಟೆ ಸುಮಾರಿಗೆ ನಾವು ಹೋಗುತ್ತಿದ್ದೇವೆ, ನಮ್ಮನ್ನು ಕ್ಷಮಿಸಿ ಎಂದು ಪತ್ರದಲ್ಲಿ ಬರೆದಿಟ್ಟು ಹಾಸ್ಟೆಲ್ನ ಕಿಟಕಿಯ ರಾಡ್ ಮುರಿದು ಹೊರ ಹೋಗಿದ್ದಾರೆ. […]readmore
ಇಂದು ಪ್ರಧಾನಿ ನರೇಂದ್ರ ಮೋದಿಗೆ 72ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ. ಈ ವಿಶೇಷ ದಿನದಿಂದ ಅಳಿವಿನಂಚಿನಲ್ಲಿರುವ ಚಿರತೆಗಳು ಭಾರತಕ್ಕೆ ಬರಲಿವೆ. ನಮೀಬಿಯಾದ ಐದು ಹೆಣ್ಣು ಹಾಗೂ ಮೂರು ಗಂಡು ಚಿರತೆಗಳನ್ನು ಹೊತ್ತು ವಿಂಡ್ ಹೋಕ್ ನ ಹೋಸಿಯಾ ಕುಟಾಕೊ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಮಾನ ಹೊರಡಲಿದೆ. ವಿಶೇಷ B747 ವಿಮಾನವು 8 ಚಿರತೆಗಳನ್ನು ಹೊತ್ತು ಹೊರಡಲಿದ್ದು ನಮೀಬಿಯಾದಿಂದ ನೇರವಾಗಿ ಭಾರತಕ್ಕೆ ಬಂದಿಳಿಯಲಿದೆ. ಈ ಬೃಹತ್ ವಿಮಾನವು 16 ಗಂಟೆಗಳ ಕಾಲ ಹಾರುವ ಸಾಮರ್ಥ್ಯ ಹೊಂದಿದ್ದು ಎಲ್ಲಿಯೂ ನಿಲ್ಲದೆ […]readmore
