ಬೆಂಗಳೂರಿನ ಟ್ರಾಫಿಕ್ ಸಮಸ್ಯೆಯಿಂದ ಜನ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಓಡಾಡುವುದೇ ಕಷ್ಟವಾಗಿದೆ. ಇದೇ ಕಾರಣಕ್ಕೆ ಬಿಎಂಟಿಸಿ ಹೊಸ ಹೊಸ ಪ್ರಯೋಗಕ್ಕೆ ಮುಂದಾಗಿದ್ದೆ. ಈಗಾಗ್ಲೆ ನಮ್ಮ ಮೆಟ್ರೋ ಬಂದ ಬಳಿಕ ಪ್ರಯಾಣಿಕರು ಕೊಂಚ ನಿಟ್ಟುಸಿರು ಬಿಟ್ಟಿದ್ದಾರೆ. ಈ ಮಧ್ಯೆ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಕೇಂದ್ರ ಸರ್ಕಾರದ 13 ಕೋಟಿ ಅನುದಾನದಿಂದ ಮಿನಿ ಎಲೆಕ್ಟ್ರಿಕ್ ಕಂಡಕ್ಟರ್ ಲೇಸ್ ಬಸ್ ಸೇವೆ ನೀಡಲು ಬಿಎಂಟಿಸಿ ಮುಂದಾಗಿದೆ. ಮೆಟ್ರೋ ನಿಲ್ದಾಣದಿಂದ ಇತರ ಸ್ಥಳಗಳಿಗೆ ಹೋಗಲು ಅನುಕೂಲವಾಗುವಂತೆ 100 […]readmore
ಬೆಂಗಳೂರಿನ ಟ್ರಾಫಿಕ್ ನಲ್ಲಿ ಮಣಿಪಾ ಆಸ್ಪತ್ರೆಯ ಗ್ಯಾಸ್ಟ್ರೋ ಎಂಟರಾಲಜಿ ತಜ್ಷ ಡಾ.ಗೋವಿಂದ ನಂದ ಕುಮಾರ್ ಅವರ ಕಾರು ಸಿಲುಕಿಕೊಂಡಿದರೆ. ಅತ್ತ ರೋಗಿಯೊಬ್ಬರು ಜೀವ ಕೈಯಲ್ಲಿ ಹಿಡಿದುಕೊಂಡು ಡಾಕ್ಟರ್ ರ ಬರುವಿಕೆಗಾಗಿ ಕಾದು ಕುಳಿತಿದ್ದರು. ಹೀಗಾಗಿ ತಕ್ಷಣವೇ ಹಿಂದೂ ಮುಂದು ನೋಡದ ಡಾ.ಗೋವಿಂದ ಟಾಫಿಕ್ ನಲ್ಲಿ ಸಿಲುಕಿಕೊಂಡಿದ್ದ ಕಾರನ್ನು ಅಲ್ಲಿಯೇ ಬಿಟ್ಟು ಬರೋಬ್ಬರಿ 3 ಕಿಲೋ ಮೀಟರ್ ಓಡಿ ಆಸ್ಪತ್ರೆ ತಲುಪಿದ್ದಾರೆ. ಆಸ್ಪತ್ರೆ ತಲುಪಿದ ವೈದ್ಯರು ಕೊಂಚವು ವಿಶ್ರಮಿಸಿಕೊಳ್ಳದೆ ತಮ್ಮ ಸಿಬ್ಬಂದಿಯೊಂದಿಗೆ ಸೇರಿ ಯಶಸ್ವಿಯಾಗಿ ಅಪರೇಷನ್ ಮಾಡಿದ್ದಾರೆ. ಸದ್ಯ […]readmore
ನಿನ್ನೆ ರಾತ್ರಿ ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದ ಆಹಾರ ಮತ್ತು ಅರಣ್ಯ ಖಾತೆ ಸಚಿವ ಉಮೇಶ್ ಕತ್ತಿ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ರಾತ್ರಿ ನಿಧನರಾಗಿದ್ದಾರೆ. ರಾತ್ರಿ 10 ಗಂಟೆ ಸುಮಾರಿಗೆ ನಗರದ ಡಾಲರ್ಸ್ ಕಾಲೋನಿಯಲ್ಲಿರುವ ನಿವಾಸದಲ್ಲಿ ಉಮೇಶ್ ಕತ್ತಿ ಅವರಿಗೆ ಹೃದಯಾಘಾತ ಸಂಭವಿಸಿದೆ. ತಕ್ಷಣವೇ ಅವರನ್ನು ಹತ್ತಿರದ ಎಂ.ಎಸ್.ರಾಮಯ್ಯ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಕತ್ತಿ ನಿಧನರಾಗಿದ್ದಾರೆ. 1961 ಮಾರ್ಚ್ 14ರಂದು ಬೆಳಗಾವಿ ಜಿಲ್ಲೆಯಲ್ಲಿ ಕೃಷಿಕ ಕುಟುಂಬದಲ್ಲಿ ಜನಿಸಿದ ಕತ್ತಿ […]readmore
ಚಿತ್ರದುರ್ಗ: ಅಪ್ರಾಪ್ತೆಯರಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಚಿತ್ರದುರ್ಗ ಮುರುಘಾ ಮಠದ ಪೀಠಾದಿಪತಿ ಮುರುಘಾ ಶ್ರೀಗಳನ್ನು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಮುರುಘ ಶ್ರೀಗಳ ಕಸ್ಟಡಿ ಭಾನುವಾರ ಅಂತ್ಯವಾದ ಹಿನ್ನೆಲೆಯಲ್ಲಿ ಇಂದು ಪೊಲೀಸರು ಶ್ರೀಗಳನ್ನು ಜೆಎಂಎಫ್ ಸಿ ಕೋರ್ಟ್ ಮುಂದೆ ಹಾಜರು ಪಡಿಸಿದ್ದರು. ವಿಚಾರಣೆ ನಡೆಸಿದ 2ನೇ ಅಪರ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಕೋಮಲ ವಿಚಾರಣೆ ಮುಗಿದ ಹಿನ್ನೆಲೆಯಲ್ಲಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಶ್ರೀಗಳ ಸಂಪೂರ್ಣ ವಿಚಾರಣೆ ಮುಗಿದ ಹಿನ್ನೆಲೆಯಲ್ಲಿ ಸೆ.14ರ ವರೆಗೆ ನ್ಯಾಯಾಂಗ […]readmore
ಚಿತ್ರದುರ್ಗ: ಅಪ್ರಾಪ್ತೆಯರಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಚಿತ್ರದುರ್ಗ ಮುರುಘಾ ಮಠದ ಪೀಠಾದಿಪತಿ ಮುರುಘಾ ಶ್ರೀಗಳನ್ನು ಪೋಕ್ಸೋ ಕೇಸ್ ನಲ್ಲಿ ಶುಕ್ರವಾರದಿಂದ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಶ್ರೀಗಳನ್ನು ವಿಚಾರಣೆಗೆ ಒಳಪಡಿಸಿದ್ದು ಶ್ರೀಮಗಳು ಮಾತ್ರ ವಿಚಾರಣೆಗೆ ಸಹಕರಿಸದೆ ಆರೋಗ್ಯದ ನೆಪದಲ್ಲಿ ಆಸ್ಪತ್ರೆ ಸುತ್ತಾಟ ನಡೆಸುತ್ತಿದ್ದಾರೆ. ಮುರುಘ ಶ್ರೀಗಳ ಮೇಲಿನ ಆರೋಪಿಗಳನ್ನು ತಳ್ಳಿ ಹಾಕಿರುವ ಶ್ರೀಗಳು,ನನ್ನ ವಿರುದ್ಧ ಷಡ್ಯಂತ್ರ್ಯ ನಡೆದಿದೆ. ಬೇಕೆಂದು ಈ ಪ್ರಕರಣದಲ್ಲಿ ನನನ್ನು ಸಿಲುಕಿಸಿದ್ದಾರೆ ಎಂದು ಶ್ರೀಗಳು ಆರೋಪಿಸಿದ್ದಾರೆ. ವಿಚಾರಣೆ ಮಧ್ಯೆದಲ್ಲೇ […]readmore
ಚಿತ್ರದುರ್ಗ: ಹಾಸ್ಟೇಲ್ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶರಣರು ಬಂಧನ ಭೀತಿ ಎದುರಿಸುತ್ತಿದ್ದು ಈ ಹಿನ್ನೆಲೆಯಲ್ಲಿ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಚಿತ್ರದುರ್ಗದ ಎರಡನೇ ಸೆಷನ್ಸ್ ಕೋರ್ಟ್ ನಲ್ಲಿ ಮುರುಘಾ ಶ್ರೀಗಳ ಪರ ವಕೀಲರು ಇಂದು ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ಅರ್ಜಿಯ ವಿಚಾರಣೆಯನ್ನು ಕೋರ್ಟ್ ಸೆಪ್ಟೆಂಬರ್ 1ಕ್ಕೆ ನಿಗದಿಪಡಿಸಿದೆ. ಮುರುಘಾ ಮಠದ ಡಾ.ಶಿವಮೂರ್ತಿ ಶರಣರ ವಿರುದ್ಧ ಪೋಕ್ಸೋ ಕಾಯ್ದೆ ಅಡಿ […]readmore
ಶಿವಮೊಗ್ಗ: ಜಿಲ್ಲೆಯಲ್ಲಿ ಸಾವರ್ಕರ್ ಫೋಟೋ ವಿವಾದದಿಂದ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಇದೀಗ ಪ್ರೇಮ್ಸಿಂಗ್ ಸ್ನೇಹಿತನ ಸ್ಫೋಟಕ ಹೇಳಿಕೆಯಿಂದಾಗಿ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಘಟನೆಯ ಬಗ್ಗೆ ಮಾತನಾಡಿದ ಪ್ರೇಮ್ ಸಿಂಗ್ ಸ್ನೇಹಿತ ಉತ್ತಮ್ ಭಾಟಿ, ಪ್ರೇಮ್ಸಿಂಗ್ ಕೈಗೆ ರಾಕಿ, ಹಣೆಗೆ ತಿಲಕ ಇಟ್ಟುಕೊಂಡಿದ್ದಕ್ಕೆ ಚಾಕು ಇರಿದಿದ್ದಾರೆ ಎಂದಿದ್ದಾರೆ. ಅಮೀರ್ ಅಹಮ್ಮದ್ ಸರ್ಕಲ್ ನಲ್ಲಿ ನಡೆದ ಗಲಾಟೆ ಬಗ್ಗೆ ನಮಗೆ ಮಾಹಿತಿ ಇರಲಿಲ್ಲ. ಪೊಲೀಸರು 144 ಸೆಕ್ಷನ್ ಇದೆ ಎಂದು ಹೇಳಿದಾಗ ನಾವು ಅಂಗಡಿ ಬಂದ್ ಮಾಡಿದೆವು. ಇದೇ ವೇಳೆ […]readmore
ಮಂಗಳೂರು: ದುಷ್ಕರ್ಮಿಗಳಿಂದ ಭೀಕರವಾಗಿ ಹತ್ಯೆಗೀಡಾದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ 25 ಲಕ್ಷ ಹಾಗೂ ಬಿಜೆಪಿ ಪಕ್ಷದಿಂದ 25 ಲಕ್ಷ ಸೇರಿ ಒಟ್ಟು 50 ಲಕ್ಷ ರೂ. ರೂಪಾಯಿ ಚೆಕ್ ಅನ್ನು ಪ್ರವೀಣ್ ಕುಟುಂಬಸ್ಥರಿಗೆ ಸಿಎಂ ಬಸವರಾಜ ಬೊಮ್ಮಾಯಿ ಹಸ್ತಾಂತರಿಸಿದರು. ಸರ್ಕಾರದ ವತಿಯಿಂದ 25 ಲಕ್ಷ, ಬಿಜೆಪಿ ವತಿಯಿಂದ 25 ಲಕ್ಷ ರೂ.ಗಳ ಚೆಕ್ ಅನ್ನು ಪ್ರವೀಣ್ ಪತ್ನಿಗೆ ನೀಡಾಯಿತು. ಸಿಎಂ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಲಾ […]readmore
ಮಂಗಳೂರು: ಯುವ ಬಿಜೆಪಿ ಕಾರ್ಯಕರ್ತ ಪ್ರವೀಣ್ ಕುಮಾರ್ ನೆಟ್ಟೂರ್ ಹತ್ಯೆ ಬೆನ್ನಲ್ಲೇ ಮತ್ತೊಬ್ಬ ವ್ಯಕ್ತಿಯ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆ ಮಾಡಿರುವ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ಬಳಿ ನಡೆದಿದೆ. ಫಾಜೀಲ್ ಮೃತ ದುರ್ದೈವಿ. ಸುರತ್ಕಲ್ ನಲ್ಲಿ ಎಸ್ ಕೆ ಮೊಬೈಲ್ ಅಂಗಡಿ ಬಳಿಕ ಫಾಜಿಲ್ ಮಂಗಲಪೇಟೆ ಮೇಲೆ ಅಪರಿಚಿತರ ತಂಡ ಮಾರಕಾಸ್ತ್ರದಿಂದ ದಾಳಿ ನಡೆಸಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಫಾಜೀಲ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಘಟನೆಗೆ ಸಂಬಂಧ ಸುರತ್ಕಲ್ ಠಾಣೆಯ ಪೋಲೀಸರು […]readmore
ಮಂಗಳೂರು: ಮಂಗಳವಾರ ರಾತ್ರಿ ದುಷ್ಕರ್ಮಿಗಳಿಂದ ಭೀಕರವಾಗಿ ಹತ್ಯೆಯಾದ ಬಿಜೆಪಿ ಯುವ ಮುಖಂಡ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳ ಬಂಧಿಸಲಾಗಿದೆ. ಪ್ರವೀಣ್ ಕುಮಾರ್ ಹತ್ಯೆಯ ಬಳಿಕ ಕರಾವಳಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಸವಣೂರು ಮೂಲದ ಎಸ್ ಡಿ ಪಿಐ ಗ್ರಾಮ ಸಮೀತಿ ಮುಖಂಡ ಝಕೀರ್ (29) ಹಾಗೂ ಎಸ್ ಡಿಪಿಐ ಪಕ್ಷದ ಸಕ್ರೀಯ ಕಾರ್ಯಕರ್ತ ಶಫೀಕ್ (27) ಬೆಳ್ಳಾರೆ ಬಂಧಿತ ಆರೋಪಿಗಳು. ಪ್ರವೀಣ್ ಕುಮಾರ್ […]readmore
