ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ನಟ ಚೇತನ್ ವಿರುದ್ಧ ಪಂಜರ್ಲಿ ದೈವಕ್ಕೆ ದೂರು ನೀಡಲು ಮುಂದಾದ ದೈವಾರಾಧಕರು
ನಟರಿಗೆ ನಟನೆ ಮಾಡಲು ಗೊತ್ತಿರಬಹುದು. ಆದರೆ ನಾವು ದೈವಾರಾಧಕರು ನಮಗೆ ನಟಿಸಲು ಗೊತ್ತಿಲ್ಲ. ನಾವು ತಲೆತಲಾಂತರಗಳಿಂದ ಸತ್ಯವನ್ನು ಪಾಲನೆ ಮಾಡಿಕೊಂಡು ಬಂದವರು. ಭೂತಾರಾಧನೆಗೆ ಇಂತಿಷ್ಟು ವರ್ಷದ ಹಿನ್ನೆಲೆ ಎಂಬ ದಾಖಲೆ ನಮ್ಮಲ್ಲಿ ಇಲ್ಲ. ಯಾವುದೋ ಒಂದು ಪುಸ್ತಕ ಹಿಡಿದುಕೊಂಡು ಮಾತನಾಡುವುದು ತಪ್ಪು ಎಂದರು.
ಕರಾವಳಿಯಾದ್ಯಂತ ಪರವ, ಪಂಪದ ನಲಿಕೆಯವರು ಜೀವಿಸುತ್ತಿದ್ದೇವೆ. ಚೇತನ್ ಹೇಳಿರುವ ಅಲೆಮಾರಿಗಳು ಎಂಬ ಮಾತನ್ನು ಒಪ್ಪಲು ಸಾಧ್ಯವಿಲ್ಲ. ನಮ್ಮ ಹಿರಿಯರ ಕಾಲದಿಂದ ನಾವು ಹಿಂದೂ ಸಂಪ್ರದಾಯವನ್ನು ಆರಾಧನೆ ಮಾಡಿಕೊಂಡು ಬರುತ್ತಿದ್ದೇವೆ. ನಮ್ಮ ದೈವಗಳಿಗೆ ಮೂಲ ಶಬ್ದವೇ ತುಳು. ನಾವು ನಂಬಿಕೊಂಡ ಸತ್ಯದ ಮೂಲಕ ಚೇತನ್ ಗೆ ಪ್ರತಿಕ್ರಿಯೆ ನೀಡುತ್ತವೆ ಎಂದು ತಿಳಿಸಿದರು.
ನಟ ಚೇತನ್ ಬಹಳ ದೊಡ್ಡ ಜ್ಞಾನಿ ಆಗಿರಬಹುದು. ನಮ್ಮ ನೆಲ, ನಮ್ಮ ಕುಲ ನಮ್ಮ ಆಚರಣೆಯ ಬಗ್ಗೆ ಮಾತನಾಡುವ ಜ್ಞಾನ ಇವರಿಗೆ ಇಲ್ಲ. ವ್ಯಕ್ತಿಗತವಾಗಿ ಇವರಿಗೆ ನಾವು ಉತ್ತರ ಕೊಡುವುದಿಲ್ಲ ಎಂದು ಚೇತನ್ ಕುಮಾರ್ ಹೇಳಿಕೆಯ ಕುರಿತು ಅಸಮಾಧಾನ ಹೊರ ಹಾಕಿದರು.
