• January 1, 2026

ಕಾಂತಾರದ ವರಾಹ ರೂಪಂ ಹಾಡಿಗೆ ತಡೆ ಸಂಕಷ್ಟ ತಂದ ಪಾಲಕ್ಕಾಡ್ ಕೋರ್ಟ್

ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾದ ‘ವರಾಹ ರೂಪಂ’ ಸಖತ್ ಖ್ಯಾತಿ ಘಳಿಸಿದೆ. ಚಿತ್ರದ ಕೊನೆಯಲ್ಲಿ ಬರುವ ಈ ಹಾಡಿಗೆ ವಿವಾದಗಳು ಅಂಟಿಕೊಂಡಿದೆ. ಇತ್ತೀಚಿಗೆ ಈ ಹಾಡಿಗೆ ಟ್ಯೂನ್ ಕದ್ದ ಆರೋಪವನ್ನು ಮಾಡಿದ್ದ ತೈಕ್ಕುಡಂ ಬ್ರಿಡ್ಜ್ ಬ್ಯಾಂಡ್‍ ನ ಸದಸ್ಯರು ಕೋರ್ಟ್ ಮೊರೆ ಹೋಗಿದ್ದರು. ಹಾಗಾಗಿ ಕೋಯಿಕ್ಕೋಡ್ ಕೋರ್ಟ್ ಸಿನಿಮಾದಲ್ಲಿ ವರಾಹ ರೂಪಂ ಹಾಡು ಬಳಸದಂತೆ ತಡೆಯಾಜ್ಞೆ ನೀಡಿತ್ತು. ಕೋರ್ಟ್ ತಡೆಯಾಜ್ಞೆ ನೀಡಿದ್ದರು ಕಾಂತಾರ ಚಿತ್ರದಲ್ಲಿ ಹಾಡನ್ನು ಮುಂದುವರೆಸಲಾಗುತ್ತಿದೆ. ಅಲ್ಲದೆ ಈ ಹಾಡನ್ನು ಕದ್ದಿಲ್ಲ ಎಂದು ನಿರ್ದೇಶಕ ರಿಷಬ್ ಶೆಟ್ಟಿ ಹಾಗೂ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಹೇಳಿದ್ದರು. ಇದೀಗ ಮತ್ತೊಂದು ಕೇಸ್ ದಾಖಲಾಗಿದೆ. ಮಾತೃಭೂಮಿ ಮ್ಯೂಸಿಕ್ ಸಂಸ್ಥೆಯು ಮತ್ತೆ ಕೋರ್ಟ್ ಮೊರೆ ಹೋಗಿದೆ. ಹಾಗಾಗಿ ಅರ್ಜಿಯ ವಿಚಾರಣೆ ನಡೆಸಿರುವ ಪಾಲಕ್ಕಾಡ್ ಕೋರ್ಟ್ ಮುಂದಿನ ಆದೇಶ ಬರುವವರೆಗೂ ಈ ಹಾಡನ್ನು ಎಲ್ಲಿಯೂ ಹಂಚಿಕೆ ಮಾಡುವಂತಿಲ್ಲ ಎಂದು ತಡೆಯಾಜ್ಞೆ ನೀಡಿದೆ. ‘ಕೋರ್ಟ್​ನ ಆದೇಶದ ಪ್ರತಿ ಕೈ ಸೇರಿದ ನಂತರದಲ್ಲಿ ಕಾಂತಾರ ತಂಡದವರು ಯಾವ ರೀತಿಯ ನಿರ್ಧಾರ ತೆಗೆದುಕೊಳ್ಳುತ್ತಾರೆ ಅನ್ನೋದು ತುಂಬಾನೇ ಮುಖ್ಯ. ನಮಗೆ ಕ್ರೆಡಿಟ್ ಕೊಟ್ಟರೆ ಈ ಹಾಡನ್ನು ಅವರು ಪ್ಲೇ ಮಾಡಿಕೊಳ್ಳುವುದರಲ್ಲಿ ಯಾವುದೇ ಸಮಸ್ಯೆ ಇಲ್ಲ’ ಎಂದು ‘ತೈಕ್ಕುಡಂ ಬ್ರಿಡ್ಜ್​​’ ಬ್ಯಾಂಡ್​ನ ವಿಯಾನ್ ಫರ್ನಾಂಡಿಸ್ ಇತ್ತೀಚೆಗೆ ಪ್ರತಿಕ್ರಿಯೆ ನೀಡಿದ್ದರು.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now