ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಬನಾರಸ್ ಸಿನಿಮಾದ ಕರ್ನಾಟಕ ವಿತರಣ ಹಕ್ಕು ಪಡೆದ ಡಿ ಬೀಟ್ಸ್
ಬನಾರಸ್ ಚಿತ್ರತಂಡದ ಕಡೆಯಿಂದ ಒಂದರ ಹಿಂದೊಂದರಂತೆ ಖುಷಿಯ ವಿಚಾರಗಳು ಹೊರ ಬೀಳುತ್ತವೆ. ಈಗಾಗ್ಲೆ ಕೇರಳದಲ್ಲಿ ಪ್ರಖ್ಯಾತ ವಿತರಣಾ ಸಂಸ್ಥೆಯಾಗಿರುವ ಮಲಕುಪ್ಪಡಮ್, ಬನಾರಸ್ ಸಿನಿಮಾದ ವಿತರಣಾ ಹಕ್ಕುಗಳನ್ನು ಪಡೆದುಕೊಂಡಿದೆ. ಈಗಾಗಲೇ ಕೇರಳದಲ್ಲಿ ದೊಡ್ಡ ಹೆಸರು ಮಾಡಿರುವ ಸದರುಇ ಸಂಸ್ಥೆ ಹಲವಾರು ಹಿಟ್ ಸಿನಿಮಾಗಳನ್ನು ಕೇರಳದಲ್ಲಿ ಬಿಡುಗಡೆಗೊಳಿಸಿದೆ. ಇದೀಗ ಕರ್ನಾಟಕದ ವಿತರಣಾ ಹಕ್ಕನ್ನು ಖ್ಯಾತ ವಿತರಣಾ ಸಂಸ್ಥೆ ಡಿ ಬೀಟ್ಸ್ ಪಡೆದುಕೊಂಡಿದೆ.
ಶೈಲಜಾ ನಾಗ್ ಹಾಗೂ ಬಿ ಸುರೇಶ್ ಸಾರಥ್ಯದ ಡಿ ಬೀಟ್ಸ್ ಗುಣಮಟ್ಟದ ಸಿನಿಮಾಗಳನ್ನು ಪಡೆದುಕೊಳ್ಳುವ ಮೂಲಕ ಸಾಕಷ್ಟು ಗಮನ ಸೆಳೆದಿದೆ. ಎಲ್ಲಾ ಕಡೆಯಿಂದಲೂ ಉತ್ತಮ ಸಿನಿಮಾ ಎನಿಸಿದರೆ ಮಾತ್ರವೇ ಡಿ ಬೀಟ್ಸ್ ಸಂಸ್ಥೆ ಖರೀದಿಸುತ್ತದೆ. ಇದೀಗ ಬನಾರಸ್ ಸಿನಿಮಾವನ್ನು ಡಿ ಬೀಟ್ಸ್ ಖರೀದಿಸಿದ್ದು ಚಿತ್ರದ ಕುರಿತು ಮತ್ತಷ್ಟು ನಿರೀಕ್ಷೆ ಮೂಡಿಸಿದೆ.
ಬನಾರಸ್ ಅನ್ನು ವಿಶಾಲ ಕರ್ನಾಟಕಕ್ಕೆ ಯಾವ ಸಂಸ್ಥೆಯ ಮೂಲಕ ವಿತರಣೆ ಮಾಡುತ್ತಾರೆಂಬ ಕುತೂಹಲಕ್ಕೆ ಈ ಮೂಲಕ ತೆರೆಬಿದ್ದಿದೆ. ನಿರೀಕ್ಷೆಯಂತೆಯೇ ಡಿ ಬೀಟ್ಸ್ ವಿತರಣಾ ಹಕ್ಕನ್ನು ಖರೀದಿಸಿದೆ. ಜಯತೀರ್ಥ ನಿರ್ದೇಶನದಲ್ಲಿ ಮೂಡಿ ಬಂದಿರುವ ‘ಬನಾರಸ್’, ಕನ್ನಡವೂ ಸೇರಿದಂತೆ ಐದು ಭಾಷೆಗಳಲ್ಲಿ ಏಕಕಾಲದಲ್ಲಿ ತೆರೆಕಾಣಲಿದೆ. ಇತ್ತೀಚಿನ ದಿನಗಳಲ್ಲಿ ಕೆಲವು ಕನ್ನಡ ಚಿತ್ರಗಳು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆಯಾಗುತ್ತಿವೆ. ಈ ಮೂಲಕ ಕನ್ನಡದ ಕೀರ್ತಿಪತಾಕೆ ರಾಷ್ಟ್ರಮಟ್ಟದಲ್ಲಿ ಹಾರುತ್ತಿದೆ. ಬನಾರಸ್ ಮೂಲಕ ಕನ್ನಡ ಚಿತ್ರರಂಗದ ಘನತೆಗೆ ಮತ್ತೊಂದು ಗರಿ ಮೂಡಲಿದೆ.
