ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ವರಮಹಾಲಕ್ಷ್ಮಿ ಹಬ್ಬದಂದು ದರ್ಶನ್ ನಟನೆಯ ಹೊಸ ಸಿನಿಮಾಗೆ ಚಾಲನೆ
ಸಾಮಾನ್ಯವಾಗಿ ದರ್ಶನ್ ಒಂದು ಸಿನಿಮಾದಿಂದ ಮತ್ತೊಂದು ಸಿನಿಮಾಗೆ ಕೊಂಚ ಗ್ಯಾಪ್ ತೆಗೆದುಕೊಳ್ಳುತ್ತಾರೆ. ಆದರೆ ಈ ಭಾರಿ ದರ್ಶನ್ ಕ್ರಾಂತಿ ಸಿನಿಮಾದ ಶೂಟಿಂಗ್ ಮುಗಿಯುತ್ತಿದ್ದಂತೆ ಹೊಸ ಸಿನಿಮಾದ ಶೂಟಿಂಗ್ ನಲ್ಲಿ ಭಾಗಿಯಾಗಲಿದ್ದಾರೆ.
ವರಮಹಾಲಕ್ಷ್ಮಿ ಹಬ್ಬದಂದು ಅಂದರೆ ಇದೇ ಶುಕ್ರವಾರ ದರ್ಶನ್ ನಟನೆಯ ಹೊಸ ಸಿನಿಮಾದ ಮುಹೂರ್ತ ಅದ್ದೂರಿಯಾಗಿ ನಡೆಯಲಿದೆ. ಇದು ದರ್ಶನ್‌ರ 56ನೇ ಸಿನಿಮಾವಾಗಿದ್ದು ತರುಣ್ ಸುಧೀರ್ ನಿರ್ದೇಶನ ಮಾಡುತ್ತಿದ್ದಾರೆ. ಈ ಹಿಂದೆ ದರ್ಶನ್ ನಟನೆಯ ‘ರಾಬರ್ಟ್’ ಸಿನಿಮಾ ನಿರ್ದೇಶಿಸಿದ್ದ ತರುಣ್ ಸುಧೀರ್ ಈ ಚಿತ್ರಕ್ಕೂ ಆಕ್ಷನ್ ಕಟ್ ಹೇಳ್ತಿದ್ದಾರೆ.
ದರ್ಶನ್ ರ 56ನೇ ಚಿತ್ರಕ್ಕೆ ರಾಕ್‌ಲೈನ್ ವೆಂಕಟೇಶ್ ಬಂಡವಾಳ ಹೂಡುತ್ತಿದ್ದು, ಸಿನಿಮಾದ ಮುಹೂರ್ತದ ದಿನದಿಂದಲೇ ಚಿತ್ರೀಕರಣ ಆರಂಭವಾಗಲಿದೆ. ಸದ್ಯ ಸಿನಿಮಾದ ಹೆಸರು ‘ಕಾಟೇರ’ ಎನ್ನಲಾಗುತ್ತಿದೆ.
