ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ತಂದೆಯ ಆರೋಗ್ಯ ಸ್ಥಿರವಾಗಿದೆ, ವದಂತಿ ಹಬ್ಬಿಸಬೇಡಿ: ನಟ ರಾಜು ಶ್ರೀವಾತ್ಸವ್ ಪುತ್ರಿ ಅಂತರ
ಕಳೆದ 15 ದಿನಗಳ ಹಿಂದೆ ಜಿಮ್ನಲ್ಲಿ ವರ್ಕೌಟ್ ಮಾಡ್ತಿದ್ದ ವೇಳೆ ಕುಸಿದು ಬಿದ್ದ ರಾಶ್ರೀ ಶ್ರೀವಾತ್ಸವ್ ಅವರನ್ನು ತಕ್ಷಣವೇ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಏಮ್ಸ್ ನ ತೀವ್ರ ನಿಗಾ ಘಟಕದಲ್ಲಿ ರಾಜು ಅವರಿಗೆ ಚಿಕಿತ್ಸೆ ಮುಂದುವರೆದಿದೆ. ಈಗಾಗಲೇ ಅವರಿಗೆ ಆಂಜಿಯೋಪ್ಲ್ಯಾಸ್ಟಿ ಮಾಡಲಾಗಿದ್ದು, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆಂದು ತಿಳಿಸಿದ್ದಾರೆ.
ಡಾ.ನಿತೀಶ್ ನ್ಯಾಯ್ ನೇತೃತ್ವದ ಹೃದ್ರೋಗ ಮತ್ತು ತುರ್ತು ವಿಭಾಗದ ಎಐಐಎಂಎಸ್ ತಂಡ ಅವರಿಗೆ ಚಿಕಿತ್ಸೆ ನೀಡುತ್ತಿದೆ. ತಂದೆಗೆ ವೈದ್ಯರ ತಂಡದಿಂದ ಚಿಕಿತ್ಸೆ ಮುಂದುವರೆದಿದೆ. ನಮಗೆ ಯಾವುದೇ ನಕಾರಾತ್ಮಕ ಶಕ್ತಿ ಬೇಡ. ಸಕಾರಾತ್ಮಕವಾಗಿ ಚಿಂತಿಸುವ ಶಕ್ತಿ ಬೇಕು. ಅವರು ಶೀಘ್ರವಾಗಿ ಚೇತರಿಸಿಕೊಳ್ಳುವಂತೆ ಪ್ರಾರ್ಥಿಸಿ ಎಂದು ಅಂತರ ಮನವಿ ಮಾಡಿಕೊಂಡಿದ್ದಾರೆ.
