ಕನ್ನಡದ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ಎದೆನೋವಿನ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಸುದ್ದಿ ಅಭಿಮಾನಿಗಳನ್ನು ಆತಂಕಕ್ಕೆ ಈಡು ಮಾಡಿತ್ತು. ಹಂಸಲೇಖ ಆದಷ್ಟು ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳೂ ಪ್ರಾರ್ಥಿಸಿದಿದ್ದು. ಅಲ್ಲದೆ ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ಟ್ವೀಟ್ ಮೂಲಕ ಆದಷ್ಟು ಬೇಗ ಗುಣಮುಖರಾಗಿ ಎಂದು ಹಾರೈಸಿದ್ದು ಅಭಿಮಾನಿಗಳನ್ನು ಸಹಜವಾಗಿಯೇ ಗಭರಿಗೊಳಿಸಿತ್ತು.
ಇಂದು ಮುಂಜಾನೆ ಹಂಸಲೇಖ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂಬ ಸುದ್ದಿ ಹರಿದಾಡಿತ್ತು. ಹಂಸಲೇಖ ಆರೋಗ್ಯದ ಸುದ್ದಿ ಕಾಳ್ಗಿಚ್ಚಿನಂತೆ ಹರಿದಾಡಿದ್ದು ಅಭಿಮಾನಿಗಳು ಆಸ್ಪತ್ರೆಯತ್ತ ಮುಖ ಮಾಡಿದ್ದರು. ಇದೀಗ ಹಂಸಲೇಖ ಪುತ್ರಿ ತೇಜಸ್ವಿನಿ ಪ್ರತಿಕ್ರಿಯೆ ನೀಡಿದ್ದಾರೆ.
ಇಂದು ಮುಂಜಾನೆಯಿಂದ ನಮ್ಮ ತಂದೆ, ಡಾ. ಹಂಸಲೇಖಾರವರ ಆರೋಗ್ಯದ ಬಗ್ಗೆ ಹಾಗೂ ಅವರು ಆಸ್ಪತ್ರೆಯಲ್ಲಿ ದಾಖಲಾಗಿರುವುದಾಗಿ ಒಂದು ವದಂತಿ ಮಾದ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಕಂಡುಬಂದಿದೆ. ಈ ವದಂತಿಯು ಸುಳ್ಳಾಗಿದ್ದು, ಇದರಿಂದ ಅಭಿಮಾನಿಗಳು ಆತಂಕ ಪಡಬಾರದು. ಈ ವದಂತಿಯನ್ನು ಇನ್ನು ಹರಡದಂತೆ ನೋಡಿಕೊಳ್ಳಬೇಕು ಎಂದು ನಮ್ರತೆಯಿಂದ ಕೇಳಿಕೊಳ್ಳುತೇವೆ ಎಂದು ತೇಜಸ್ವಿನಿ ಹಂಸಲೇಖ ಪ್ರತಿಕ್ರಿಯೆ ನೀಡಿದ್ದಾರೆ.