• March 14, 2026

ಹಿಟ್ ಲೀಸ್ಟ್ ಗೆ ಸೇರಿದ ಗಾಳಿಪಟ 2 ಸಾಂಗ್: ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಯ್ತು ದೇವ್ಲೆ ದೇವ್ಲೆ ಹಾಡು

ಯೋಗರಾಜ್ ಭಟ್ ನಿರ್ದೇಶನದ ಗಾಳಿಪಟ ಸಿನಿಮಾ ಬಿಡುಗಡೆ ಆಗೋಕೆ ಇನ್ನೂ ಕೆಲವೇ ದಿನಗಳು ಮಾತ್ರವೇ ಭಾಕಿ ಇದೆ. ಈ ಮಧ್ಯೆ ಚಿತ್ರತಂಡ ಒಂದೊಂದೇ ಹಾಡುಗಳನ್ನು ಬಿಡುಗಡೆ ಮಾಡಿದೆ. ಸದ್ಯ ಚಿತ್ರತಂಡ ರಿಲೀಸ್ ಮಾಡಿರುವ ದೇವ್ಲೆ ದೇವ್ಲೆ ಹಾಡು ದೊಡ್ಡ ಮಟ್ಟದಲ್ಲಿ ಹಿಟ್ ಆಗಿದ್ದು ಅಭಿಮಾನಿಗಳು ರೀಲ್ಸ್ ಮಾಡೋದ್ರಲ್ಲಿ ಬ್ಯುಸಿಯಾಗಿದ್ದಾರೆ. ಗಾಳಿಪಟ 2 ಸಿನಿಮಾದ ಮೂರನೇ ಹಾಡು ‘ದೇವ್ಲೆ ದೇವ್ಲೆ’ ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಕೇಳುಗರ ಮನ ಮುಟ್ಟಿದ್ದು ಹಿಟ್ ಲಿಸ್ಟ್ ಸೇರಿದೆ. ಜೊತೆಗೆ ಸೋಷಿಯಲ್ ಮೀಡಿಯಾದಲ್ಲಿ ರೀಲ್ಸ್ ಗಳು ಹರಿದಾಡುತ್ತಿದೆ. ದೇವ್ಲೆ ದೇವ್ಲೆ ಹಾಡಿಗೆ ಯೋಗರಾಜ್ ಭಟ್ ಸಾಹಿತ್ಯ ಬರೆದಿದ್ದು, ವಿಜಯ್ ಪ್ರಕಾಶ್ ಹಾಡಿದ್ದು, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಮಾಡಿದ್ದಾರೆ. ದೇವ್ಲೆ ದೇವ್ಲೆ ಹಾಡನ್ನು ಕಝಾಕಿಸ್ತಾನ್‌ದ ಹಿಮಭರಿತ ಹಿನ್ನೆಲೆ ಮತ್ತು ತಂಪಾದ ವಾತಾವರಣದಲ್ಲಿ ಚಿತ್ರೀಕರಿಸಲಾಗಿದೆ. ಗಾಳಿಪಟ 2 ಸಿನಿಮಾ ಆಗಸ್ಟ್ 12 ರಂದು ಬಿಡುಗಡೆ ಆಗುತ್ತಿದ್ದು, ಸೂರಜ್ ಪ್ರೊಡಕ್ಷನ್ಸ್ ಅಡಿಯಲ್ಲಿ ನಿರ್ಮಾಣಗೊಂಡಿದೆ.  ಚಿತ್ರದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್, ದಿಗಂತ್, ಪವನ್ ಕುಮಾರ್, ಅನಂತ್ ನಾಗ್, ಶರ್ಮಿಳಾ ಮಾಂಡ್ರೆ, ಸಂಯುಕ್ತಾ ಮೆನನ್ ಮತ್ತು ವೈಭವಿ ಶಾಂಡಿಲ್ಯ, ಸುಧಾ ಬೆಳವಾಡಿ ಪ್ರಮುಖ ಪಾತ್ರಗಳನ್ನು ಕಾಣಿಸಿಕೊಂಡಿದ್ದಾರೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now