• January 2, 2026

ಜುಜುಬಿ ಕರಗ ಪದ ಮ್ಯೂಟ್ ಮಾಡಲು ಮುಂದಾದ ಹೆಡ್ ಬುಷ್ ಚಿತ್ರತಂಡ

ಡಾಲಿ ಧನಂಜಯ್ ನಟನೆಯ ಹೆಡ್ ಬುಷ್ ಸಿನಿಮಾ ಬಿಡುಗಡೆ ಆಗಿ ಒಂದು ವಾರವಷ್ಟೇ ಕಳೆದಿದೆ. ಆದರೆ ಸಿನಿಮಾ ಬಿಡುಗಡೆ ಆದ ದಿನದಿಂದಲೂ ಹೆಡ್ ಉಷ್ ಸಿನಿಮಾ ವಿವಾದದ ಮೂಲಕವೇ ಸದ್ದು ಮಾಡುತ್ತಿದೆ. ಚಿತ್ರದಲ್ಲಿ ವೀರಗಾಸೆಗೆ ಅವಮಾನ ಮಾಡಲಾಗಿದೆ ಎನ್ನುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಚಿತ್ರತಂಡ ಕ್ಷಮೆ ಯಾಚಿಸಿತ್ತು. ಇದೀಗ ಕರಗದ ಕುರಿತಾಗಿ ಹೇಳಿರುವ ಹೇಳಿಕೆಯನ್ನು ಮ್ಯೂಟ್ ಮಾಡಲು ಚಿತ್ರತಂಡ ಮುಂದಾಗಿದೆ. ಹೆಡ್ ಬುಷ್ ಚಿತ್ರದಲ್ಲಿ ವೀರಗಾಸೆಗೆ ಅವಮಾನ ಮಾಡಲಾಗಿದೆ ಎನ್ನುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಚಿತ್ರತಂಡ ಕ್ಷಮೆ ಯಾಚಿಸಿತ್ತು. ಆದರೆ ಯಾವುದೇ ಕಾರಣಕ್ಕೂ ಚಿತ್ರದಲ್ಲಿರುವ ದೃಶ್ಯವನ್ನು  ಕತ್ತರಿಸುವುದಿಲ್ಲ ಎಂದು ಹೇಳಿತ್ತು. ಇದೀಗ ಕರಗದ ಕುರಿತಾಗಿ ಇರುವ ಹೇಳಿಕೆಯನ್ನು ಮ್ಯೂಟ್ ಮಾಡಲು ಚಿತ್ರತಂಡ ಮುಂದಾಗಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನಡೆದ ಸಂಧಾನ ಸಭೆಯಲ್ಲಿ ಧರ್ಮರಾಯ ಸ್ವಾಮಿ ದೇವಸ್ಥಾನದ ಹಿರಿಯರು, ಚಿತ್ರತಂಡದ ಸದಸ್ಯರು ಮತ್ತು ವಾಣಿಜ್ಯ ಮಂಡಳಿಯ ಅಧ್ಯಕ್ಷ ಭಾ.ಮಾ ಹರೀಶ್, ಕಾರ್ಯದರ್ಶಿ ಸುಂದರರಾಜ್ ಸೇರಿದಂತೆ ಹಲವರು ಭಾಗಿಯಾಗಿದ್ದರು. ಸಂಧಾನ ಸಭೆಯಲ್ಲಿ ಜುಜುಬಿ ಕರಗ ಎನ್ನುವ ಪದವನ್ನು ಮ್ಯೂಟ್ ಮಾಡಲು ಚಿತ್ರತಂಡ ಒಪ್ಪಿಕೊಳ್ಳುವ ಮೂಲಕ ಒಂದು ವಿವಾದ ಸುಖಾಂತ್ಯ ಕಂಡಿದೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now