• December 22, 2025

‘ಉತ್ತರಕಾಂಡ’ ಚಿತ್ರದ ಮುಹೂರ್ತದಲ್ಲಿ ಮಿಂಚಿದ ರಮ್ಯಾ, ಡಾಲಿ

ಸ್ಯಾಂಡಲ್ ವುಡ್ ನ ಮೋಹಕ ತಾರೆ ಅಭಿಮಾನಿಗಳಿತೆ ಮತ್ತೆ ಗುಡ್ ನ್ಯೂಸ್ ನೀಡಿದ್ದಾರೆ. ಈ ಹಿಂದೆ ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರದ ಮೂಲಕ ಕಂಬ್ಯಾಕ್ ಮಾಡುವ ಸುದ್ದಿ ನೀಡಿದ್ದ ರಮ್ಯಾ ಬಳಿಕ ಚಿತ್ರದಲ್ಲಿ ನಟಿಸುತ್ತಿಲ್ಲ ಎಂದು ಹೇಳಿ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದರು. ಇದೀಗ ರಮ್ಯಾ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಡಾಲಿ ಧನಂಜಯ್ ನಟನೆಯ ಉತ್ತರಕಾಂಡ ಸಿನಿಮಾದ ಮೂಲಕ ರಮ್ಯಾ ಕಂಬ್ಯಾನ್ ಆಗುವ ಸುದ್ದಿ ನೀಡಿದ್ದಾರೆ. ಇತ್ತೀಚೆಗಷ್ಟೇ ಚಿತ್ರದ ಟೀಸರ್ ರಿಲೀಸ್ ಆಗಿದ್ದು ಅದರಲ್ಲಿ ರಮ್ಯಾ ಧ್ವನಿ ಕೇಳಿದೆ. ಅಲ್ಲದೆ ಚಿತ್ರದ ಮುಹೂರ್ತದಲ್ಲಿ ಭಾಗಿಯಾದ ನಟಿ ರಮ್ಯಾ ಧನಂಜಯ್ ಗೆ ಸಾಥ್ ನೀಡಿದ್ದಾರೆ. ಗಟ್ಟಿ ಕಥೆಯ ಮೂಲಕವೇ ರಮ್ಯಾ ಕಂಬ್ಯಾಕ್ ಮಾಡುತ್ತಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ರಮ್ಯಾ ಡಾಲಿ ಚಿತ್ರದ ಮೂಲಕ ಕಂಬ್ಯಾಕ್ ಆಗುತ್ತಿದ್ದಾರೆ ಎಂಬ ಸುದ್ದಿ ಕೇಳಿ ಬಂದಿತ್ತು. ಇದೀಗ ಅದು ನಿಜವಾಗಿದೆ. ಈ ಬಗ್ಗೆ ಟ್ವಿಟರ್ ನಲ್ಲಿ ಧನಂಜಯ್ ಬರೆದುಕೊಂಡಿದ್ದಾರೆ. ವಿಜಯ್ ಕಿರಗಂದೂರು ಅವರು ಪ್ರಸ್ತುತ ಪಡಿಸುತ್ತಿರುವ ಚಿತ್ರ “ಉತ್ತರಕಾಂಡ ” ವನ್ನು ಕೆ.ಆರ್.ಜಿ. ಸ್ಟುಡಿಯೋಸ್ ಸಂಸ್ಥೆಯ ಕಾರ್ತಿಕ್ ಮತ್ತು ಯೋಗಿ.ಜಿ.ರಾಜ್ ಅವರು ನಿರ್ಮಿಸುತ್ತಿದ್ದು, ಡಾಲಿ ಧನಂಜಯ ಮುಖ್ಯ ಪಾತ್ರದಲ್ಲಿ ಈ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಹಿಂದೆ ರತ್ನನ್ ಪ್ರಪಂಚ ಸಿನಿಮಾದಲ್ಲಿ ಕೈ ಜೋಡಿಸಿದ್ದ ತಂಡವೇ ಉತ್ತರಕಾಂಡದಲ್ಲೂ ಒಂದಾಗಲಿದೆ. ಚಿತ್ರಕ್ಕೆ ರೋಹಿತ್ ಪದಕಿ ನಿರ್ದೇಶನ ಮಾಡ್ತಿದ್ದಾರೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now