ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಅಕ್ಷಿತ್ ಶಶಿಕುಮಾರ್ ಸಿನಿಮಾಗೆ ಸಾಥ್ ನೀಡಿದ ಡಾಲಿ ಧನಂಜಯ್
ವೃತ್ತಿಯಲ್ಲಿ ವೈದ್ಯರಾಗಿರುವ ಜಿ ವೆಂಕಟೇಶ್ ಪ್ರಸಾದ್ ಇದೇ ಮೊದಲ ಭಾರಿಗೆ ನಿರ್ದೇಶನಕ್ಕೆ ಇಳಿದಿದ್ದಾರೆ. ನಿರ್ದೇಶನದ ಕುರಿತು ಸಂಪೂರ್ಣ ತರಬೇತಿ ಪಡೆದುಕೊಂಡಿರುವ ಜಿ ವೆಂಕಟೇಶ್ ಪ್ರಸಾದ್ ಮೊದಲ ಚಿತ್ರದಲ್ಲಿ ಭರವಸೆ ಮೂಡಿಸಿದ್ದಾರೆ.ಇನ್ನೂ ಅಕ್ಷಿತ್ ಗೆ ಜೋಡಿಯಾಗಿ ನಟಿ ಅದಿತಿ ಪ್ರಭುದೇವ್ ಕಾಣಿಸಿಕೊಂಡಿದ್ದಾರೆ. ಇದೇ ಮೊದಲ ಭಾರಿಗೆ ಅಕ್ಷಿತ್ ಹಾಗೂ ಅದಿತಿ ಒಟ್ಟಿಗೆ ಸ್ಕ್ರೀನ್ ಶೇರ್ ಮಾಡಿದ್ದು ಸಾಕಷ್ಟು ಭರವಸೆ ಮೂಡಿಸಿದ್ದಾರೆ.
ಚಿತ್ರದಲ್ಲಿ ನಟ ಶಶಿಕುಮಾರ್ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಮೆಡಿಕಲ್ ಕ್ಯಾಂಪಸ್ ಸುತ್ತ ನಡೆಯುವ ಕಥೆಯಾಗಿದ್ದು ಚಿತ್ರದಲ್ಲಿ ಅಕ್ಷಿತ್ ಹಾಗೂ ಅದಿತಿ ಮೆಡಿಕಲ್ ಸ್ಟೂಡೆಂಟ್ ಪಾತ್ರದಲ್ಲಿ ಬಣ್ಣ ಹಚ್ಚಿದ್ದಾರೆ. ಸಿನಿಮಾದ ಶೂಟಿಂಗ್ ಬಹುತೇಕ ಮುಗಿದ್ದಿದ್ದು ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ತೊಡಗಿಕೊಂಡಿದೆ.
