• January 1, 2026

ಡಾಲಿ ಧನಂಜಯ್ ನಟನೆಯ 25ನೇ ಚಿತ್ರ ‘ಹೊಯ್ಸಳ’ ರಿಲೀಸ್ ಡೇಟ್ ಫಿಕ್ಸ್

ಸ್ಯಾಂಡಲ್ ವುಡ್ ಚಿತ್ರರಂಗದ ಖ್ಯಾತ ನಟ ಡಾಲಿ ಧನಂಜಯ್ ಕೈಯಲ್ಲಿ ಸದ್ಯ ಸಾಕಷ್ಟು ಸಿನಿಮಾಗಳಿವೆ.ತಮ್ಮ ಅದ್ಭುತ ನಟನೆಯಿಂದಲೇ ಕನ್ನಡದ ಜೊತೆಗೆ ಪರಭಾಷೆಯಲ್ಲೂ ಡಾಲಿ ಧನಂಜಯ್ ಹೆಸರು ಮಾಡಿದ್ದು ಅಭಿಮಾನಿಗಳು ಧನಂಜಯ್ ನಟನೆಯ ಸಿನಿಮಾಗಾಗಿ ಕಾದು ಕೂತಿದ್ದಾರೆ. ಸದ್ಯ ಡಾಲಿ ಧನಂಜಯ್ ನಟನೆಯ ‘ಹೊಯ್ಸಳ’ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದ್ದು ಸಿನಿಮಾ ಸೆಟ್ ನಿಂದ ಹೊಸ ಸುದ್ದಿಯೊಂದು ಹೊರ ಬಿದ್ದಿದೆ. ಕೆ.ಆರ್.ಜಿ ಸ್ಟುಡಿಯೋ ಬ್ಯಾನರ್ಸ್ ಅಡಿಯಲ್ಲಿ ಮೂಡಿ ಬರುತ್ತಿರುವ ಧನಂಜಯ್ ನಟನೆಯ 25ನೇ ಚಿತ್ರ ಹೋಯ್ಸಳದಲ್ಲಿ ಧನಂಜಯ್ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗ್ಲೆ ಚಿತ್ರದ ಫಸ್ಟ್ ಲುಕ್ ರಿಲೀಸ್ ಆಗಿದ್ದು ಸಾಕಷ್ಟು ಕುತೂಹಲ ಮೂಡಿಸಿತ್ತು. ಫಸ್ಟ್ ಲುಕ್ ನೋಡಿದ ಮೇಲೆ ಸಿನಿಮಾ ನೋಡೋಕೆ ಅಭಿಮಾನಿಗಳು ಕಾದು ಕೂತಿದ್ದು ಸಿನಿಮಾದ ರಿಲೀಸ್ ಡೇಟ್ ನ ಚಿತ್ರತಂಡ ಅನೌನ್ಸ್ ಮಾಡಿದೆ. ಹೊಯ್ಸಳ ಧನಂಜಯ್ ನಟನೆಯ 25ನೇ ಸಿನಿಮಾವಾಗಿದ್ದು ಸಾಕಷ್ಟು ಅದ್ದೂರಿಯಾಗಿ ರೆಡಿಯಾಗುತ್ತಿದೆ. ವಿಜಯ್ ಎನ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಹೊಯ್ಸಳ ಸಿನಿಮಾ ಮುಂದಿನ ವರ್ಷ ಮಾರ್ಚ್ 30ರಂದು ತೆರೆಗೆ ಬರಲಿದೆ. , ಹೊಯ್ಸಳ ಉತ್ಸವಕ್ಕೆ ಎಲ್ಲರೂ ರೆಡಿಯಾಗಿರಿ ಎಂದು ನಿರ್ಮಾಪಕರು ಹೇಳಿದ್ದಾರೆ. ಡಾಲಿಗೆ ಜೋಡಿಯಾಗಿ ನಟಿ ಅಮೃತಾ ಅಯ್ಯಂಗಾರ್ ಬಣ್ಣ ಹಚ್ಚಿದ್ದಾರೆ. ಈ ಚಿತ್ರಕ್ಕಾಗಿ ಧನಂಜಯ್ ಒಂದಷ್ಟು ತೂಕ ಕಳೆದುಕೊಂಡು ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಹಿಂದೆ ದುನಿಯಾ ವಿಜಯ್ ನಟನೆ ಸಲಗ ಸಿನಿಮಾದಲ್ಲಿ ಡಾಲಿ ಧನಂಜಯ್ ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು, ಆದರೆ ಅದಕ್ಕಿಂತಲೂ ಸಾಕಷ್ಟು ಭಿನ್ನವಾಗಿ ಹೊಯ್ಸಳ ಸಿನಿಮಾದಲ್ಲಿ ಕಾಣಿಸಿಕೊಳ್ಳಿದ್ದಾರಂತೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now