ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ವೇಮಗಲ್ ಜಗನ್ನಾಥ ರಾವ್ ನಿರ್ದೇಶನದ “ನನ್ನ ಹುಡುಕಿ ಕೊಡಿ” ಚಿತ್ರದಲ್ಲಿ ಧನ್ವಿತ್ ಗೆ ಜೋಡಿಯಾದ ಇಬ್ಬರು ನಾಯಕಿಯರು
ಮುಂದಿನವಾರದಿಂದ ಚಿತ್ರೀಕರಣ ಆರಂಭಿಸುತ್ತೇವೆ. ಬೆಂಗಳೂರಿನಲ್ಲೇ ಹೆಚ್ಚಿನ ಚಿತ್ರೀಕರಣ ನಡೆಯಲಿದೆ. ಮೀನಾಕ್ಷಿ ಜೈಸ್ವಾಲ್ ಹಾಗೂ ಸಾಯಿ ನಯನ ಈ ಚಿತ್ರದ ನಾಯಕಿಯರು. ಪೋಷಕಪಾತ್ರಗಳಲ್ಲಿ ಕನ್ನಡದ ಪ್ರಸಿದ್ದ ಕಲಾವಿದರು ಅಭಿನಯಿಸಲಿದ್ದಾರೆ ಎಂದು ನಿರ್ದೇಶಕ ವೇಮಗಲ್ ಜಗನ್ನಾಥ ರಾವ್ ಚಿತ್ರದ ಬಗ್ಗೆ ಮಾಹಿತಿ ನೀಡಿದರು.
ನಾನು ಮೂಲತಃ ಕನಕಪುರದವನು. ಹಿಂದೆ ವೇಮಗಲ್ ಜಗನ್ನಾಥ ರಾವ್ ಅವರ ನಿರ್ದೇಶನದ “ಆವರ್ತ” ಚಿತ್ರದಲ್ಲಿ ಒಂದು ಪಾತ್ರ ಮಾಡಿದ್ದೆ. ಈ ಚಿತ್ರದ ಮೂಲಕ ಪೂರ್ಣಪ್ರಮಾಣದ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದೇನೆ. ಧನ್ವಿತ್ ಫಿಲಂ ಫ್ಯಾಕ್ಟರಿ ಎಂಬ ನಿರ್ಮಾಣ ಸಂಸ್ಥೆಯ ಮೂಲಕ ಈ ಚಿತ್ರವನ್ನು ನಾನೇ ನಿರ್ಮಾಣ ಮಾಡುತ್ತಿದ್ದೇನೆ. ವಾಸುಕಿ ಭುವನ್ ಅವರು ನಿರ್ಮಾಣಕ್ಕೆ ಜೊತೆಯಾಗಿದ್ದಾರೆ. ನಿರ್ದೇಶಕರು ಪೂರ್ತಿ ಕಥೆ ಹೇಳಿಲ್ಲ. ಒಂದೆಳೆ ಹೇಳಿದ್ದಾರೆ. ತುಂಬಾ ಚೆನ್ನಾಗಿದೆ ಎಂದರು ನಾಯಕ ಹಾಗೂ ನಿರ್ಮಾಪಕ ಧನ್ವಿತ್. ನಾಯಕಿಯರಾದ ಮೀನಾಕ್ಷಿ ಜೈಸ್ವಾಲ್, ಸಾಯಿ ನಯನ ಹಾಗೂ ಛಾಯಾಗ್ರಾಹಕ ಸೂರ್ಯಕಾಂತ್ “ನನ್ನ ಹುಡುಕಿ ಕೊಡಿ” ಬಗ್ಗೆ ಮಾತನಾಡಿದರು.
