ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಠಾಣೆ ಸಿನಿಮಾದ ಪೋಸ್ಟರ್ ರಿಲೀಸ್ ಮಾಡಿದ ಧ್ರುವ ಸರ್ಜಾ
ನಟ, ನಿರ್ದೇಶಕ ಕಾಶಿನಾಥ್, ರಾಮನಾಥ್ ಋಗ್ವೇದಿ, ಗುರುಪ್ರಸಾದ್ ಮುಂತಾದವರ ಬಳಿ ಕೆಲಸ ಮಾಡಿರುವ ಎಸ್ ಭಗತ್ ರಾಜ್ ಠಾಣೆ ಚಿತ್ರಕ್ಕೆ ಆಕ್ಷನ್ ಕಟ್ ಹೇಳ್ತಿದ್ದಾರೆ. ಈ ಹಿಂದೆ ‘ದಿ ಸೂಟ್’ ಸಿನಿಮಾದ ನಿರ್ದೇಶಿಸಿದ್ದ ಭಗತ್ ರಾಜ್ ಗೆ ಇದು ಎರಡನೇ ಸಿನಿಮಾ.
‘ಠಾಣೆ’ ಚಿತ್ರದಲ್ಲಿ 1962ರ ಕಾಲಘಟ್ಟದಲ್ಲಿ ನಡೆಯುವ ಕಥೆಯನ್ನು ಹೇಳಲು ನಿರ್ದೇಶಕರು ಮುಂದಾಗಿದ್ದಾರೆ. ಸ್ಲಂ ನಲ್ಲೇ ಹುಟ್ಟಿಬೆಳೆದ ಯುವಕ ಅಲ್ಲಿನ ಜನರಿಗೆ ನ್ಯಾಯ ಕೊಡಿಸಲು ಹೋರಾಡುವ ಕಥೆಯನ್ನು ಠಾಣೆ ಸಿನಿಮಾ ಒಳಗೊಂಡಿದೆ.
