ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
12 ವರ್ಷಗಳ ಬಳಿಕ ಒಂದಾದ ‘ಪಂಚರಂಗಿ’ ಜೋಡಿ: ‘ಎಡಗೈ ಅಪಘಾತಕ್ಕೆ ಕಾರಣ’ ಚಿತ್ರದಲ್ಲಿ ದಿಗಂತ್ ಜೊತೆ ನಿಧಿ ನಟನೆ
ಕಳೆದ ಕೆಲ ಸಮಯದಿಂದ ಸಿನಿಮಾಗಳಿಂದ ದೂರವಾಗಿದ್ದ ನಿಧಿ ಸುಬ್ಬಯ್ಯ ಬಿಗ್ ಬಾಸ್ ಗೆ ಎಂಟ್ರಿಕೊಟ್ಟ ಬಳಿಕ ಮತ್ತೆ ಆಕ್ಟೀವ್ ಆಗಿದ್ದಾರೆ. ಎಡಗೈ ಬಳಸುವವರ ಸಮಸ್ಯೆಗಳ ಸುತ್ತ ಸುತ್ತುವ ಚಿತ್ರದಲ್ಲಿ ದಿಗಂತ್ ನಾಯಕನಾಗಿ ಕಾಣಿಸಿಕೊಂಡಿದ್ದು ದಿಗಂತ್ ಗೆ ಜೋಡಿಯಾಗಿ ಧನು ಹರ್ಷ ಬಣ್ಣ ಹಚ್ಚಿದ್ದಾರೆ. ಚಿತ್ರದ ಪ್ರಮುಖ ಪಾತ್ರದಲ್ಲಿ ನಿಧಿ ಸುಬ್ಬಯ್ಯ ಕಾಣಿಸಿಕೊಳ್ತಿದ್ದು ಈಗಾಗ್ಲೆ ನಿಧಿ ಚಿತ್ರತಂಡ ಸೇರಿಕೊಂಡಿದ್ದು ಶೂಟಿಂಗ್ ನಲ್ಲಿ ತೊಡಗಿಕೊಂಡಿದ್ದಾರೆ.
ಎಡಗೈಯೇ ಅಪಘಾತಕ್ಕೆ ಕಾರಣ ಚಿತ್ರವನ್ನು ಗುರುದತ್ತ ಗಾಣಿಗ ಮತ್ತು ನಿರ್ದೇಶಕ ಸಮರ್ಥ್ ಕಡಕೋಳ್ ಜಂಟಿಯಾಗಿ ನಿರ್ಮಿಸುತ್ತಿದ್ದಾರೆ. ಅಣ್ಣಾ ಬಾಂಡ್, ಕೃಷ್ಣನ ಮ್ಯಾರೇಜ್ ಸ್ಟೋರಿ, ಪಂಚರಂಗಿ ಸೇರಿದಂತೆ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿರುವ ನಿಧಿ ಸುಬ್ಬಯ್ಯ ಅಜಬ್ ಗಜಾಬ್ ಲವ್ ಮೂಲಕ ಬಾಲಿವುಡ್ ಗೂ ಎಂಟ್ರಿಕೊಟ್ಟಿದ್ದಾರೆ. ಕಳೆದ ಕೆಲ ವರ್ಷಗಳಿಂದ ಸೈಲೆಂಟ್ ಆಗಿದ್ದ ನಿಧಿ ಇದೀಗ ಮತ್ತೆ ಎಡಗೈಯೇ ಅಪಘಾತಕ್ಕೆ ಕಾರಣ ಚಿತ್ರದ ಮೂಲಕ ಗಾಂಧಿನಗರದಲ್ಲಿ ಸದ್ದು ಮಾಡೋಕೆ ರೆಡಿಯಾಗಿದ್ದಾರೆ.
