ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ದೈವಾರಾಧನೆಯನ್ನು ಹಿಂದೂ ಧರ್ಮಕ್ಕೆ ವಿಮರ್ಶೆ ಮಾಡುವ ಅಗತ್ಯವಿಲ್ಲ: ಡಾ.ಡಿ.ವೀರೇಂದ್ರ ಹೆಗ್ಗಡೆ
ತುಳುನಾಡಿದ ದೈವಾರಾಧನೆಯನ್ನು ಇಡೀ ವಿಶ್ವಕ್ಕೆ ತೋರಿಸಿಕೊಟ್ಟಿರುವ ರಿಷಬ್ ಶೆಟ್ಟಿ ದೈವಾರಾಧನೆಯ ಸೂಕ್ಷ್ಮತೆಯನ್ನು ಬಹಳ ಚೆನ್ನಾಗಿ ಚಿತ್ರಿಸಿದ್ದಾರೆ. ದೈವಗಳು ಅಧರ್ಮಕ್ಕೆ ಬೆಂಬಲ ಕೊಡೋದಿಲ್ಲ ಎನ್ನುವುದು ಈ ಸಿನಿಮಾದ ಸಂದೇಶ. ಸಮಾಜದಲ್ಲಿ ಸ್ವಾರ್ಥಿಗಳು ಇರುತ್ತಾರೆ. ಆದರೆ ನಮ್ಮ ದೈವಗಳು ಯಾವುದಕ್ಕೂ ಬೆಂಬಲ ಕೊಡೋದಿಲ್ಲ ಎನ್ನುವುದನ್ನು ಈ ಸಿನಿಮಾ ಮತ್ತೆ ತೋರಿಸಿಕೊಟ್ಟಿದೆ. ಇದು ಒಳ್ಳೆಯ ಸಂದೇಶ ಅಂತ ಅನಿಸಿದೆ ಎಂದರು.
ನಮ್ಮ ನಂಬಿಕೆ ಆಚರಣೆಗಳು ಸ್ವಾಭಾವಿಕವಾಗಿ ಬೆಳೆದು ಬಂದದ್ದು ಅದನ್ನು ಬಿಟ್ಟಿರಲು ಸಾಧ್ಯವಿಲ್ಲ. ನಾವೆಲ್ಲ ಇವತ್ತಿಗೂ ದೈವಾರಾಧನೆ ಮಾಡುತ್ತೇವೆ. ದೈವದ ನುಡಿಗೆ ಗೌರವ ಕೊಡುತ್ತೇವೆ. ದೈವ ಮೈಮೇಲೆ ಬಂದಾಗ ಅದಕ್ಕೆ ಗೌರವ ಕೊಡುತ್ತೇವೆ. ಇದನ್ನು ಹಿಂದೂ ಧರ್ಮಕ್ಕೆ ವಿಮರ್ಶೆ ಮಾಡುವ ಅಗತ್ಯ ಇಲ್ಲ ಎಂದು ಹೆಗ್ಗಡೆಯವರು ಅಭಿಪ್ರಾಯಪಟ್ಟಿದ್ದಾರೆ.
