ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಕೋಮಾದಲ್ಲಿದ್ದ ಖ್ಯಾತ ಹಾಸ್ಯ ನಟ ರಾಜು ಶ್ರೀವತ್ಸವ್ ನಿಧನ: ಕಂಬನಿ ಮಿಡಿದ ಚಿತ್ರರಂಗ
ಆಗಸ್ಟ್ 10ರಂದು ರಾಜು ಶ್ರೀವತ್ಸವ್ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಗೆ ದಾಖಲಾದ ದಿನದಿಂದಲೂ ರಾಜು ಅವರನ್ನು ಉಳಿಸಿಕೊಳ್ಳಲು ವೈದ್ಯರು ಸಾಕಷ್ಟು ಶ್ರಮ ಹಾಕಿದ್ದರು. ಆದರೆ ಅವರು ಕೋಮದಿಂದ ಹೊರ ಬರಲೇ ಇಲ್ಲ. ವೈದ್ಯರು ತಮ್ಮೆಲ್ಲ ಪ್ರಯತ್ನಗಳನ್ನು ಮಾಡಿದರೂ, ರಾಜು ಅವರನ್ನು ಉಳಿಸಿಕೊಳ್ಳಲು ಆಗಲಿಲ್ಲ ಎಂದು ವೈದ್ಯರು ಹೇಳಿದ್ದಾರೆ.
ಸಾಕಷ್ಟು ವರ್ಷಗಳಿಂದ ಹಾಸ್ಯನಟರಾಗಿ ಬಾಲಿವುಡ್ ನಲ್ಲಿ ಗುರುತಿಸಿಕೊಂಡಿದ್ದ ರಾಜು ಶ್ರೀವತ್ಸವ್ ಅಪಾರ ಅಭಿಮಾನಿಗಳನ್ನು ಹೊಂದಿದ್ದರು. ಅಲ್ಲದೆ ರಾಜು ಅವರು ಗ್ರೇಟ್ ಇಂಡಿಯನ್ ಲಾಫ್ಟರ್ ಚಾಲೇಂಜ್’ ಹಾಸ್ಯ ಕಾರ್ಯಕ್ರಮದ ಮೂಲಕ ಸಾಕಷ್ಟು ಜನಪ್ರಿಯತೆ ಘಳಿಸಿದ್ದರು. ರಾಜು ಅವರು ಆರೋಗ್ಯವಾಗಿ ಮತ್ತೆ ಮರಳುತ್ತಾರೆ ಎಂದು ಕಾದು ಕೂತಿದ್ದ ಅಭಿಮಾನಿಗಳಿಗೆ ಅವರ ನಿಧನದ ಸುದ್ದ ನೋವು ನೀಡಿದೆ. ರಾಜು ನಿಧನಕ್ಕೆ ಬಾಲಿವುಡ್ ಚಿತ್ರರಂಗ ಕಂಬನಿ ಮಿಡಿದಿದೆ.
