ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಹಾಸ್ಯ ನಟ ರಾಜು ಶ್ರೀವಾತ್ಸವ್ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರ: ನಿಷ್ಕ್ರಿಯಗೊಂಡ ಮೆದಳು
ರಾಜು ಅವರ ಮೆದುಳು ನಿಷ್ಕ್ರಿಯಗೊಂಡಿದೆ ಎಂದು ಮೂಲಗಳು ತಿಳಿಸಿವೆ. ಆದರೆ ಈ ಬಗ್ಗೆ ವೈದ್ಯರಾಗಲಿ ಅಥವಾ ರಾಜು ಕುಟುಂಬ ಸದಸ್ಯರಾಗಲಿದೆ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ. ರಾಜು ಅವರನ್ನು ಉಳಿಸಿಕೊಳ್ಳಲು ವೈದ್ಯರು ಸಕಲ ಪ್ರಯತ್ನವನ್ನು ಮಾಡುತ್ತಿದ್ದಾರೆ.
ಬಾಜಿಗರ್, ಮೈನೆ ಪ್ಯಾರ್ ಕಿಯಾ, ಬಾಂಬೆ ಟು ಗೋವಾ ಸೇರಿದಂತೆ ಹಲವು ಹಿಂದಿ ಸಿನಿಮಾಗಳಲ್ಲಿ ಹಾಸ್ಯ ನಟರಾಗಿ ಗುರುತಿಸಿಕೊಂಡಿರುವ ರಾಜು ಶ್ರೀವಾತ್ಸವ್ ತಮ್ಮದೇ ಆದ ಮ್ಯಾನರಿಸಂ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದಾರೆ. ಸಿನಿಮಾಗಳಲ್ಲಿ ಮಾತ್ರವಲ್ಲದೆ, ಸ್ಟ್ಯಾಂಡ್ ಅಪ್ ಕಾಮಿಡಿಯನ್ ಆಗಿದ್ದು, ಹಿಂದಿ ಬಿಗ್ ಬಾಸ್ ಎಂಟ್ರಿಕೊಟ್ಟಿದ್ದಾರೆ. ರಾಜು ಶ್ರೀವಾತ್ಸವ್ ಆದಷ್ಟು ಬೇಗ ಗುಣಮುಖರಾಗಿ ಬರಲಿ ಎನ್ನುವುದು ಅವರ ಅಭಿಮಾನಿಗಳ ಹಾರೈಕೆ.
