• January 1, 2026

ಖ್ಯಾತ ಕಿರುತೆರೆ ನಟ ಮಂಡ್ಯ ರವಿ ಸ್ಥಿತಿ ಚಿಂತಾಜನಕ: ಬೆಂಗಳೂರಿನಿಂದ ಮಂಡ್ಯ ಆಸ್ಪತ್ರೆಗೆ ಶಿಫ್ಟ್

ಮಗಳು ಜಾನಕಿ ಖ್ಯಾತಿಯ ಕಿರುತೆರೆ ನಟ ಮಂಡ್ಯ ರವಿ ಆರೋಗ್ಯ ಸ್ಥಿತಿ ಚಿಂತಾಜನಕ ಆಗಿದ್ದು ಅವರನ್ನು ಬೆಂಗಳೂರಿನಿಂದ ಮಂಡ್ಯ ಜಿಲ್ಲಾಸ್ಪತ್ರೆಗೆ ಶಿಫ್ಟ್ ಮಾಡಲಾಗುತ್ತಿದೆ ಎಂದು ರವಿ ತಂದೆ ಮುದ್ದೇಗೌಡ ಹೇಳಿದ್ದಾರೆ. ಕಿಡ್ನಿ ಸಮಸ್ಯೆ ಹಾಗೂ ಜಾಂಡೀಸ್ ಸಮಸ್ಯೆಯಿಂದ ಬಳಲುತ್ತಿದ್ದ ರವಿ ಅವರನ್ನು ಬೆಂಗಳೂರಿನ ಪ್ರಸಿದ್ಧ ಆಸ್ಪತ್ರೆಗೆ ಸೇರಿಸಲಾಗಿತ್ತು. ಇದೀಗ ಬೆಂಗಳೂರಿನಿಂದ ಮಂಡ್ಯ ಜಿಲ್ಲಾಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಬಾಲ್ಯದಿಂದಲೇ ನಾಟಕಗಳಲ್ಲಿ ಅಭಿನಯಿಸುತ್ತ ಬಣ್ಣದ ಬದುಕಿನತ್ತ ಒಲವು ಹೊಂದಿದ್ದ ರವಿ ಬಳಿಕ ಧಾರವಾಹಿ ಹಾಗೂ ಸಿನಿಮಾಗಳಲ್ಲಿ ನಟಿಸುತ್ತ ಖ್ಯಾತಿ ಘಳಿಸಿದರು. ಎಂಎ ಇಂಗ್ಲೀಷ್ ಹಾಗೂ ಎಲ್ ಎಲ್ ಬಿ ಓದಿದ್ದ ರವಿ 1996ರಲ್ಲಿ ಜನದನಿ ಹವ್ಯಾಸಿ ನಾಟಕ ತಂಡ ಸೇರಿದರು. ಅಲ್ಲಿಂದ ಟಿ ಎಸ್ ನಾಗಾಭರಣ ನಿರ್ದೇಶನದ ಮಹಾಮಾಯಿ ಧಾರಾವಾಹಿಯಲ್ಲಿ ನಟಿಸುವ ಮೂಲಕ ಕಿರುತೆರೆಗೆ ಎಂಟ್ರಿಕೊಟ್ಟರು. ಮಿಂಚು ಧಾರಾವಾಹಿ ರವಿಗೆ ಸಾಕಷ್ಟು ಹೆಸರು ತಂದುಕೊಟ್ಟಿತ್ತು. ಬಳಿಕ ಮುಕ್ತಮುಕ್ತ, ಚಿತ್ರಲೇಖ, ಯಶೋಧೆ, ವರಲಕ್ಷ್ಮಿ ಸ್ಟೋರ್ಸ್  ಸೇರಿದಂತೆ ಸಾಕಷ್ಟು ಸೀರಿಯಲ್ ಗಳಲ್ಲಿ ನಟಿಸಿದ್ದಾರೆ. ಕೆಲ ವರ್ಷಗಳ ಹಿಂದೆ ಪ್ರಸಾರವಾದ ಮಗಳು ಜಾನಕಿ ಧಾರಾವಾಹಿಯ ಚಂದು ಭಾರ್ಗಿ ಪಾತ್ರದ ಮೂಲಕ ರವಿ ಅಸಂಖ್ಯಾತ ಅಭಿಮಾನಿಗಳನ್ನು ಹೊಂದಿದ್ದಾರೆ. ಅಲ್ಲದೇ, ಕಾಫಿತೋಟ ಸೇರಿದಂತೆ ಹಲವು ಸಿನಿಮಾಗಳಲ್ಲೂ ಮಂಡ್ಯ ರವಿ ನಟಿಸಿದ್ದಾರೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now