ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಮಾನವ ಕಳ್ಳಸಾಗಣೆ ಪ್ರಕರಣ: ಖ್ಯಾತ ಗಾಯಕ ದಲೇರ್ ಮೆಹಂದಿಗೆ ಎರಡು ವರ್ಷ ಜೈಲು ಶಿಕ್ಷೆ
2003ರ ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ಪಂಜಾಬಿ ಗಾಯಕ ದಲೇರ್ ಮೆಹಂದಿ ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆಯನ್ನು ಪಟಿಯಾಲ ನ್ಯಾಯಾಲಯ ಗುರುವಾರ (ಜುಲೈ 14) ವಿಧಿಸಿದೆ. ಗಾಯಕ ದಲೇರ್ ಮೆಹಂದಿ ಸಲ್ಲಿಸಿದ ಮನವಿಯನ್ನು ನ್ಯಾಯಾಲಯ ವಜಾಗೊಳಿಸಿ, ಜೈಲು ಶಿಕ್ಷೆಗೆ ಆದೇಶಿಸಿದೆ.
ಪ್ರಕರಣದಲ್ಲಿ ದಲೇರ್ ಮೆಹಂದಿ ಹಾಗೂ ಆತನ ಸಹೋದರ ಶಂಶೇರ್ ಸಿಂಗ್ ವಿರುದ್ಧ ಒಟ್ಟು 31 ಪ್ರಕರಣಗಳು ದಾಖಲಾಗಿದ್ದವು. 19 ವರ್ಷಗಳ ಹಿಂದೆ ದಲೇರ್ ಹಾಗೂ ಸಹೋದರ ಶಂಶೇರ್ ಜನರನ್ನು ಅಕ್ರಮವಾಗಿ ವಿದೇಶಕ್ಕೆ ಕಳುಹಿಸಲು ಹಣ ಪಡೆದುಕೊಳ್ಳುತ್ತಿದ್ದರು ಎಂದು ಆರೋಪ ಮಾಡಲಾಗಿತ್ತು.
ಪ್ರಕರಣ ಸಂಬಂಧ 2018ರಲ್ಲಿ ಮ್ಯಾಜಿಸ್ಟ್ರೇಟ್ ನ್ಯಾಯಲಯವು ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ಆದರೆ ಜಾಮೀನಿನ ಮೇಲೆ ಬಿಡುಗಡೆಯಾಗಿ ಮೇಲ್ಮನವಿ ಸಲ್ಲಿಸಿದ್ದರು. ಇದೀಗ ಆ ಮೇಲ್ಮನವಿ ವಜಾಗೊಂಡಿದ್ದು, ಎರಡು ವರ್ಷಗಳ ಜೈಲು ಶಿಕ್ಷೆಯನ್ನು ಎತ್ತಿ ಹಿಡಿದಿದೆ. ಪ್ರಕರಣದಲ್ಲಿ ದಲೇರ್ ಮೆಹಂದಿ ದೋಷಿಯೆಂದು ಸಾಬೀತಾಗುತ್ತಿದ್ದಂತೆಯೇ ದಲೇರಿ ಭಾವುಕರಾದರು.
