ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಗಂಧದ ಗುಡಿ ಚಿತ್ರಕ್ಕೆ ಟ್ಯಾಕ್ಸ್ ಫ್ರೀ ಮಾಡುವಂತೆ ಸರ್ಕಾರಕ್ಕೆ ಅಪ್ಪು ಅಭಿಮಾನಿಗಳ ಮನವಿ
ಗಂಧದ ಗುಡಿ ಅಪ್ಪು ನಟನೆಯ ಕೊನೆಯ ಸಿನಿಮಾ ಆಗಿರುವ ಕಾರಣಕ್ಕೆ ಚಿತ್ರದ ಮೇಲೆ ಸಾಕಷ್ಟು ಕ್ರೇಜ್ ಕ್ರಿಯೇಟ್ ಆಗಿದೆ. ಈಗಾಗ್ಲೆ ಅಭಿಮಾನಿಗಳು ಚಿತ್ರದ ಬಿಡುಗಡೆಯ ಸೆಲೆಬ್ರೇಷನ್ ಮಾಡುತ್ತಿದ್ದಾರೆ. ಅಲ್ಲದೆ ಅಂದು ಸಾಕಷ್ಟು ಸಾಮಾಜಿಕ ಕೆಲಸಗಳನ್ನು ಮಾಡಲು ಪವರ್ ಸ್ಟಾರ್ ಅಭಿಮಾನಿಗಳು ಮುಂದಾಗಿದ್ದಾರೆ. ಈ ಮಧ್ಯೆ ಸರ್ಕಾರಕ್ಕೆ ಅಪ್ಪು ಅಭಿಮಾನಿಗಳು ಮನವಿವೊಂದನ್ನು ಸಲ್ಲಿಸಲು ತಯಾರಿ ನಡೆಸಿದ್ದಾರೆ.
ಗಂಧದ ಗುಡಿ ಸಾಕ್ಷ್ಯ ಚಿತ್ರ ಅರಣ್ಯ ಸಂಪತ್ತು, ಪ್ರಾಣಿ ಪಕ್ಷಿ ಸಂಕುಲ ಉಳಿಸುವ ನಿಟ್ಟಿನ ಮೇಲೆ ಬೆಳಕು ಚೆಲ್ಲಿದೆ. ಹೀಗಾಗಿ ಚಿತ್ರಕ್ಕೆ ಸರ್ಕಾರ ಯಾವುದೇ ತೆರಿಗೆ ವಿಧಿಸದೇ ವಿನಾಯಿತಿ ನೀಡುವಂತೆ ಅಭಿಮಾನಿಗಳು ಸರ್ಕಾರಕ್ಕೆ ಮನವಿ ಮಾಡುತ್ತಿದ್ದಾರೆ. ಈ ಹಿಂದೆ ಬಿಡುಗಡೆಯಾದ ದಿ ಕಾಶ್ಮೀರ್ ಫೈಲ್ಸ್ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡಲಾಗಿತ್ತು. ಇದೀಗ ನಮ್ಮದೇ ಭಾಷೆಯ ಚಿತ್ರವಾಗಿರೋ ಅಪ್ಪು ನಟನೆಯ ಗಂಧದ ಗುಡಿಗೆ ಟ್ರ್ಯಾಕ್ಸ್ ಪ್ರೀ ಮಾಡಿ ಎಂದು ಅಭಿಮಾನಿಗಳು ಮನವಿ ಮಾಡಿಕೊಳ್ಳಲು ಮುಂದಾಗಿದ್ದಾರೆ.
ಈಗಾಗ್ಲೆ ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಅಭಿಯಾನ ಕತೆ ಶುರುವಾಗಿದೆ. ನಟ, ನಟಿಯರು ಕೂಡ ಈ ಕ್ಯಾಂಪೇನ್ ನಲ್ಲಿ ಭಾಗಿಯಾಗಲಿದ್ದು ಈ ಮೂಲಕ ಸರ್ಕಾರಕ್ಕೆ ಮನವಿ ಮಾಡಿಕೊಳ್ಳಲಿದ್ದಾರೆ.
