ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಹಬ್ಬದ ನಡುವೆಯೂ ಅಪ್ಪು ಸಮಾಧಿಗೆ ಅಭಿಮಾನಿಗಳ ಭೇಟಿ
ದೀಪಾವಳಿ ಹಬ್ಬದ ನಡುವೆಯೂ ಸಮಾಧಿ ಬಳಿ ಅಭಿಮಾನಿಗಳ ದಂಡೆ ಹರಿದು ಬರುತ್ತಿದೆ. ಮಕ್ಕಳು, ವೃದ್ದರು ಎನ್ನದೆ ಪ್ರತಿಯೊಬ್ಬರು ಅಪ್ಪು ಸಮಾಧಿ ದರ್ಶನ ಪಡೆದುಕೊಳ್ಳುತ್ತಿದ್ದಾರೆ. ಅಪ್ಪು ಸಮಾಧಿಗೆ ಹೂವಿಟ್ಟು ನಮನ ಸಲ್ಲಿಸುತ್ತಿದ್ದಾರೆ.
ಇತ್ತೀಚೆಗಷ್ಟೇ ಅಪ್ಪು ಕನಸಿನ ಪ್ರಾಜೆಕ್ಟ್ ಆಗಿದ್ದ ಗಂಧದ ಗುಡಿ ಚಿತ್ರದ ಪ್ರಿರಿಲೀಸ್ ಕಾರ್ಯಕ್ರಮ ಬೆಂಗಳೂರಿನ ಅರಮನೆ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ಸಾವರಾರು ಮಂದಿ ಅಪ್ಪು ಸಮಾಧಿಗೆ ಬೇಟಿ ನೀಡಿದ್ದರು.
ಪುನೀತ್ ರಾಜ್ ಕುಮಾರ್ ನಟನೆಯ ಡ್ರೀಮ್ ಪ್ರಾಜೆಕ್ಟ್ ಗಂಧದ ಗುಡಿ ಇದೇ ಸೆ.28ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗುತ್ತಿದೆ. ಕನ್ನಡ ನಾಡು, ನುಡಿ ಕುರಿತಾದ ಗಂಧದ ಗುಡಿ ಚಿತ್ರವನ್ನು ಕಣ್ಣುಂಬಿಕೊಳ್ಳಲು ಅಭಿಮಾನಿಗಳು ಕಾಯುತ್ತಿದ್ದಾರೆ. ಚಿತ್ರದ ಬಿಡುಗಡೆಗೆ ಅಭಿಮಾನಿಗಳು ಭರ್ಜರಿ ತಯಾರಿ ಮಾಡಿಕೊಂಡಿದ್ದಾರೆ.
