ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಭಾರತೀಯ ಫುಟ್ಬಾಲ್ ಅಭಿಮಾನಿಗಳಿಗೆ ಶಾಕ್: ಅಖಿಲ ಭಾರತ ಫುಟ್‌ಬಾಲ್ ಫೆಡರೇಶನ್ ಅಮಾನತುಗೊಳಿಸಿದ ಫಿಫಾ
ಭಾರತೀಯ ರಾಷ್ಟ್ರೀಯ ಫುಟ್ಬಾಲ್ ಫೆಡರೇಶನ್ ತನ್ನ ದೈನಂದಿನ ವ್ಯವಹಾರಗಳನ್ನು ಸಂಪೂರ್ಣವಾಗಿ ತನ್ನ ನಿಯಂತ್ರಣಕ್ಕೆ ವಾಪಾಸ್ ಪಡೆಯುವವರೆಗೂ ಪ್ರಜಾತಾಂತ್ರಿಕವಾಗಿ ಚುನಾವಣೆ ನಡೆದು ಸಮಿತಿ ರಚನೆಯಾಗುವವರೆಗೂ ಈ ಅಮಾನತು ಜಾರಿಯಲ್ಲಿರಲಿದೆ ಎಂದು ಫಿಫಾ ಸ್ಪಷ್ಟಪಡಿಸಿದೆ.
ಎಐಎಫ್‌ಎಫ್‌ನ ಮಾಜಿ ಮುಖ್ಯಸ್ಥ, ಎನ್‌ಸಿಪಿ ನಾಯಕ ಪ್ರಫುಲ್ ಪಟೇಲ್ ತಮ್ಮ ಅಧಿಕಾರಾವಧಿ ಮುಗಿದಿದ್ದರು ಅಧಿಕಾರದಲ್ಲಿಯೇ ಉಳಿದುಕೊಂಡಿದ್ದರು, ಬಳಿಕ ಅವರನ್ನು ಅಧ್ಯಕ್ಷ ಸ್ಥಾನದಿಂದ ಇಳಿಸಿ ಆಡಳಿತಾಧಿಕಾರಿಗಳನ್ನು ಸುಪ್ರೀಂ ಕೋರ್ಟ್ ನೇಮಕ ಮಾಡಿತ್ತು. ಜೊತೆಗೆ ಶೀಘ್ರದಲ್ಲೇ ನೂತನ ಸಮಿತಿ ರಚಿಸುವಂತೆ ಆದೇಶಿಸಿತ್ತು.
ಈ ಮೊದಲು ಭಾರತೀಯ ರಾಷ್ಟ್ರೀಯ ಫುಟ್ಬಾಲ್ ಫೆಡರೇಶನ್ ಗೆ ಸಾಂವಿಧಾನಿಕ ಮಾನ್ಯತೆ ಮತ್ತು ಪದಾಧಿಕಾರಿಗಳ ಆಯ್ಕೆಗೆ ಫಿಫಾ ಹಾಗೂ ಏಷ್ಯನ್ ಫುಟ್ಬಾಲ್ ಕಾನ್ಫಡರೇಶನ್ ಗಡುವು ವಿಧಿಸಿತ್ತು. ಒಂದು ವೇಳೆ ಗಡುವು ತಪ್ಪಿದರೆ ವಿಶ್ವ ಫುಟ್ಬಾಲ್‌ನಿಂದ ಭಾರತವನ್ನು ನಿಷೇಧ ಮಾಡುವುದಾಗಿ ಎಚ್ಚರಿಕೆ ನೀಡಿತ್ತು.
ಕಳೆದ ಜೂನ್ ತಿಂಗಳಿನಲ್ಲಿ ಭಾರತ ಪ್ರವಾಸ ಮಾಡಿದ್ದ ಫಿಫಾ ತಂಡವು, ಜುಲೈ 31ರೊಳಗೆ ಸಮಿತಿಗೆ ಸಾಂವಿಧಾನಿಕ ಮಾನ್ಯತೆ ಪಡೆದು, ಸೆಪ್ಟೆಂಬರ್ 15ರ ಒಳಗೆ ಚುನಾವಣೆ ನಡೆಸಿ ಪದಾಧಿಕಾರಿಗಳ ಆಯ್ಕೆ ಮಾಡಬೇಕು ಎಂದು ಆದೇಶಿಸಿತು. ತಪ್ಪಿದರೆ ಮುಂಬರುವ ಅಕ್ಟೋಬರ್‌ನಲ್ಲಿ ನಡೆಯಲಿರುವ ಅಂಡರ್-17 ವಿಶ್ವಕಪ್ ಆತಿಥ್ಯ ಭಾರತವನ್ನು ಕೈಬಿಡುತ್ತೇವೆ ಎಂದು ಎಚ್ಚರಿಕೆ ನೀಡಿತ್ತು.
