• March 14, 2026

ಗಂಧದ ಗುಡಿ ಟ್ರೈಲರ್ ರಿಲೀಸ್ ಡೇಟ್ ಅನೌನ್ಸ್ ಮಾಡಿದ ಅಶ್ವಿನಿ ಪುನೀತ್ ರಾಜ್ ಕುಮಾರ್

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಕನಸಿನ ಕೂಸು ಗಂಧದಗುಡಿ ಸಾಕ್ಷ್ಯ ಚಿತ್ರ ಬಿಡುಗಡೆಗೆ ಇನ್ನೂ ಕೆಲ ದಿನಗಳು ಮಾತ್ರವೇ ಭಾಕಿ ಇದೆ. ಅಕ್ಟೋಬರ್ 29ರಂದು ಪುನೀತ್ ನಿಧನ ಹೊಂದಿ ಒಂದು ವರ್ಷ ಕಳೆಯುತ್ತಿದೆ. ಅದಕ್ಕೂ ಒಂದು ದಿನ ಮೊದಲು ಅಂದರೆ ಅಕ್ಟೋಬರ್ 28ರಂದು ಚಿತ್ರಮಂದಿರಗಳಲ್ಲಿ ಸಾಕ್ಷ್ಯಚಿತ್ರ ಬಿಡುಗಡೆ ಆಗಲಿದೆ. ಅದಕ್ಕೂ ಮೊದಲು ಟ್ರೈಲರ್ ರಿಲೀಸ್ ಮಾಡಲಾಗುತ್ತಿದ್ದು ಟ್ರೈಲರ್ ಬಿಡುಗಡೆ ದಿನಾಂಕವನ್ನು ಪುನೀತ್ ಪತ್ನಿ ಅಶ್ವೀನಿ ಪುನೀತ್ ರಾಜ್ ಕುಮಾರ್ ತಿಳಿಸಿದ್ದಾರೆ. ಪುನೀತ್ ರಾಜ್ ಕುಮಾರ್ ಕನಸಾಗಿದ್ದ ಗಂಧದ ಗುಡಿ ಸಾಕ್ಷ್ಯಚಿತ್ರದ ಟ್ರೈಲರ್ ಇದೇ ಅಕ್ಟೋಬರ್ 9ರಂದು ಬೆಳಗ್ಗೆ 10.19ಕ್ಕೆ ಪಿಆರ್ ಕೆ ಆಡಿಯೋ ಯುಟ್ಯೂಬ್ ಚಾನಲ್ ಮೂಲಕ ಬಿಡುಗಡೆ ಮಾಡಲಾಗುತ್ತಿದೆ. ಈಗಾಗ್ಲೆ ಟೀಸರ್ ನೋಡಿ ಹೆಚ್ಚೆದ್ದು ಕುಣಿದಿದ್ದ ಅಭಿಮಾನಿಗಳು ಟ್ರೈಲರ್ ನೋಡೋಕೆ ತುದಿಗಾಲಲ್ಲಿ ನಿಂತಿದ್ದಾರೆ. ಗಂಧದ ಗುಡಿ ಸಾಕ್ಷ್ಯಚಿತ್ರದ ಟ್ರೈಲರ್  ಬಿಡುಗಡೆ ಕುರಿತು ಅಶ್ವೀನಿ ಪುನೀತ್ ರಾಜ್ ಕುಮಾರ್ ತಮ್ಮ ಟ್ವೀಟರ್ ಖಾತೆಯಲ್ಲ, ಒಂದು ಅದ್ಭುತ ಪಯಣಕ್ಕೆ ಕ್ಷಣಗಣನೆ ಪ್ರಾರಂಭವಾಗುತ್ತಿದೆ. ಗಂಧದಗುಡಿ ಟ್ರೈಲರ್ 9ನೇ ಅಕ್ಟೋಬರ್ 2022 ಬೆಳಗ್ಗೆ 10:19:10ಕ್ಕೆ ಪಿಆರ್ ಕೆ ಯುಟ್ಯೂಬ್ ಚಾನೆಲ್ ನಲ್ಲಿ ಎಂದು ಬರೆದುಕೊಂಡಿದ್ದು ಗಂಧದಗುಡಿ ಪೋಸ್ಟರ್ ಹಂಚಿಕೊಂಡಿದ್ದಾರೆ. ಗಂಧದ ಗುಡಿ ಸಾಕ್ಷ್ಯ ಚಿತ್ರ ಬಿಡುಗಡೆಗೆ ಇನ್ನೂ ತಿಂಗಳು ಭಾಕಿ ಇದೆ ಅನ್ನುವಾಗ್ಲೆ ಅಭಿಮಾನಿಗಳ ಸೆಲೆಬ್ರೇಷನ್ ಆರಂಭವಾಗಿದೆ. ಅಲ್ಲದೆ ಗಂಧದ ಗುಡಿ ಸಾಕ್ಷ್ಯ ಚಿತ್ರ ಬಿಡುಗಡೆಯ ದಿನವನ್ನು ಹಬ್ಬದಂತೆ ಸೆಲೆಬ್ರೇಟ್ ಮಾಡಲು ಅಪ್ಪು ಫ್ಯಾನ್ಸ್ ರೆಡಿಯಾಗಿದ್ದಾರೆ. ಅಂದು ಅನ್ನದಾನ, ರಕ್ತದಾನ ಶಿಬಿರ, ಪುನೀತ್ ಬೃಹತ್ ಕಟೌಟ್ ಗೆ ಪುಷ್ಪ ನಮನ ಸೇರಿದಂತೆ ಇನ್ನೂ ಸಾಕಷ್ಟು ಸಮಾಜಮುಖಿ ಕೆಲಸಗಳನ್ನು ಮಾಡಲು ಫ್ಯಾನ್ಸ್ ನಿರ್ಧರಿಸಿದ್ದಾರೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now